ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

Iran-Israel war: ಅಖಾಡಕ್ಕೆ ಅಮೆರಿಕಾ ಅಧಿಕೃತ ಎಂಟ್ರಿ; ಇರಾನ್ ನ 3 ಅಣುಸ್ಥಾವರಗಳ ಮೇಲೆ ಏರ್‌ ಸ್ಟ್ರೈಕ್‌..!

ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ.

ವಾಷಿಂಗ್ಟನ್: ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧ ಮಹಾತಿರುವು ಪಡೆದುಕೊಂಡಿದ್ದು, ಸಂಘರ್ಷಕ್ಕೆ ವಿಶ್ವದ ದೊಡಣ್ಣ ಅಮೆರಿಕಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ.

ಇರಾನ್ ರಾಷ್ಟ್ರದ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಘೋಷಣೆ ಮಾಡಿದ್ದಾರೆ. ಈ ಬೆಳವಣಿಗೆ ಅಣುಯುದ್ಧದ (Nuclear War) ಭೀತಿಯನ್ನು ಹೆಚ್ಚಾಗುವಂತೆ ಮಾಡಿದೆ.

ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಟ್ರಂಪ್ ಹೇಳಿದ್ದಾರೆ.

ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ. ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.

ಅಮೆರಿಕಾದ ಈ ದಾಳಿಯು ಜಾಗತಿಕ ರಾಜಕಾರಣದಲ್ಲಿ ದೊಡ್ಡ ತಲ್ಲಣ ಸೃಷ್ಟಿಸಿದೆ. ಈಗಾಗಲೇ ಇಸ್ರೇಲ್-ಹಮಾಸ್ ಯುದ್ಧ, ಅದರಿಂದ ಶುರುವಾದ ಇಸ್ರೇಲ್-ಇರಾನ್ ಸಂಘರ್ಷ, ಈಗ ಅಮೆರಿಕದ ನೇರ ಪ್ರವೇಶ. ಇದು ಮೂರನೇ ಮಹಾಯುದ್ಧಕ್ಕೆ ನಾಂದಿ ಹಾಡುವ ಆತಂಕ ಶುರುವಾಗುವಂತೆ ಮಾಡಿದೆ. ಅಮೆರಿಕಾದ ಈ ದಾಳಿಗೆ ಇರಾನ್ ಹೇಗೆ ಪ್ರತಿಕ್ರಿಯಿಸುತ್ತದೆ ಎನ್ನುವುದೂ ಕೂಡ ಇದೀಗ ಕುತೂಹಲ ಸೃಷ್ಟಿಸಿದೆ.

ದಿಟ್ಟ ನಿರ್ಧಾರ: ಅಮೆರಿಕಾ ಅಧ್ಯಕ್ಷನ ಕೊಂಡಾಡಿದ ಇಸ್ರೇಲ್ ಪ್ರಧಾನಿ

ಈ ನಡುವೆ ಇರಾನ್ ಜೊತೆಗಿನ ಯುದ್ಧಕ್ಕೆ ಅಮೆರಿಕಾ ಅಧಿಕೃತ ಎಂಟ್ರಿ ಕೊಟ್ಟಿರುವುದಕ್ಕೆ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೊಂಡಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಟ್ರಂಪ್ ಅವರ ದಿಟ್ಟ ನಿರ್ಧಾರಕ್ಕೆ ಅಭಿನಂದನೆಗಳು ಎಂದು ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.

ಟ್ರಂಪ್ ಅವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಇದು ಇತಿಹಾಸವನ್ನು ಬದಲಾಯಿಸುತ್ತದೆ. ಅಮೆರಿಕದ ಅದ್ಭುತ ಮತ್ತು ನೀತಿವಂತ ಶಕ್ತಿಯಿಂದ ಇರಾನ್‌ನ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸುವ ನಿಮ್ಮ ದಿಟ್ಟ ನಿರ್ಧಾರ ಇತಿಹಾಸವನ್ನು ಬದಲಾಯಿಸುತ್ತದೆ ಎಂದು ಹೇಳಿದ್ದಾರೆ.

ಆಪರೇಷನ್ ರೈಸಿಂಗ್ ಲಯನ್‌ನಲ್ಲಿ, ಇಸ್ರೇಲ್ ನಿಜವಾಗಿಯೂ ಅದ್ಭುತ ಕೆಲಸಗಳನ್ನು ಮಾಡಿದೆ. ಆದರೆ ಇಂದು ರಾತ್ರಿ ಇರಾನ್‌ನ ಪರಮಾಣು ಸೌಲಭ್ಯಗಳ ವಿರುದ್ಧದ ಕ್ರಮದಲ್ಲಿ, ಅಮೆರಿಕ ನಿಜವಾಗಿಯೂ ದಿಟ್ಟ ನಿರ್ಧಾರ ಕೈಗೊಂಡಿದೆ. ಭೂಮಿಯ ಮೇಲಿನ ಯಾವುದೇ ದೇಶವು ಮಾಡಲು ಸಾಧ್ಯವಾಗದ ಕೆಲಸವನ್ನು ಅಮೆರಿಕಾ ಮಾಡಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT