ಟೆಹರಾನ್: ನಮ್ಮ ಮೇಲೆ ದಾಳಿ ಮಾಡುವ ಮೂಲಕ ದೊಡ್ಡ ತಪ್ಪು ಮಾಡಿದ್ದೀರಿ ಎಂದು ಹೇಳಿರುವ ಇರಾನ್ ಸುಪ್ರೀಂ ನಾಯಕ ಆಯತೊಲ್ಲಾ ಖಮೇನಿ ಅವರು, ಅಮೆರಿಕಾ ಹೆಸರೆತ್ತದೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು. ಶಿಕ್ಷೆ ಮುಂದುವರಿಯುತ್ತದೆ. ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ದೊಡ್ಡ ಅಪರಾಧ ಮಾಡಿದ್ದಾರೆ. ಈ ಅಪರಾಧಕ್ಕೆಶಿಕ್ಷಿಸಬೇಕು. ಶಿಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ನಿನ್ನಯಷ್ಟೇ ಅಮೆರಿಕಾ ಇರಾನ್ ಇರಾನ್ ರಾಷ್ಟ್ರದ 3 ಅಣುಸ್ಥಾವರಗಳ ಮೇಲೆ ದಾಳಿ ನಡೆಸಿತ್ತು. ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿತ್ತು.
ದಾಳಿ ಕುರಿತು ಹೇಳಿಕೆ ನೀಡಿದ್ದ ಟ್ರಂಪ್ ಅವರು, ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಹೇಳಿದ್ದರು.
ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ತಿಳಿಸಿದ್ದರು.
ಅಲ್ಲದೆ, ಈಗಲೂ ಶಾಂತಿ ಸ್ಥಾಪಿಸದಿದ್ದರೆ ಮತ್ತಷ್ಟು ವಿನಾಶವನ್ನು ಎದುರಿಸಬೇಕಾಗುತ್ತದೆ ಎಂದೂ ಇರಾನ್'ಗೆ ಎಚ್ಚರಿಕೆ ನೀಡಿದ್ದರು.
ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ದಾಳಿ ನಡೆಸಿ, ಇರಾನ್‌ನ ಪರಮಾಣು ನೆಲೆಗಳನ್ನು ನಾಶಗೊಳಿಸಿದ್ದೇವೆ. ಅಮೆರಿಕ ಬಿಟ್ಟು ಬೇರೆ ಯಾವ ದೇಶದ ಸೇನೆಯೂ ಇದನ್ನು ಮಾಡಲು ಸಾಧ್ಯವಿಲ್ಲ. ಇರಾನ್ ಶಾಂತಿಯ ಹಾದಿಯಲ್ಲಿ ಸಾಗಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಮತ್ತಷ್ಟು ವಿನಾಶವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದರು.