ಸುನಿತಾ ವಿಲಿಯಮ್ಸ್ . 
ವಿದೇಶ

ಭುವಿಗೆ ಮರಳಿದ ಸುನಿತಾ ವಿಲಿಯಮ್ಸ್: 9 ತಿಂಗಳ ಬಾಹ್ಯಾಕಾಶ ವಾಸ ಅಂತ್ಯ, ವೀಡಿಯೋ ಇಲ್ಲಿದೆ...

ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು.

ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದು, 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ.

ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ 9 ತಿಂಗಳಿಗೆ ವಿಸ್ತರಣೆಗೊಂಡಿತ್ತು.

ಕೇವಲ ಒಂದು ವಾರದ ಮಟ್ಟಿಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಅಲ್ಲಿಗೆ ಪ್ರಯಾಣಿಸಿದ್ದರು. ಆದರೆ, ಅವರಿದ್ದ ಬೋಯಿಂಗ್ ಸ್ಟಾರ್‌ಲೈನರ್ ನೌಕೆಯಲ್ಲಿ ದೋಷ ಕಂಡುಬಂದಿತ್ತು. ಇದರಿಂದಾಗಿ ಸುನೀತಾ ಮತ್ತವರ ಸಹ ಗಗನಯಾತ್ರಿಗಳು ನೌಕೆಯ ಮೂಲಕ ಹಿಂತಿರುಗುವುದು ಅಪಾಯ ಎಂದು ನಾಸಾ ತಿಳಿಸಿತ್ತು.

ಹಾಗಾಗಿ, ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ.

ಇದಲ್ಲದೆ, ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮರಳಿದ್ದಾರೆ.

ಐಎಸ್‌ಎಸ್‌ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.

ಕ್ರೂ-9 ಮಾರ್ಚ್ 18, 2025ರಂದು ಬೆಳಗ್ಗೆ 10:35ಕ್ಕೆ (ಭಾರತೀಯ ಕಾಲಮಾನ) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಹ್ಯಾಚ್ ಅನ್ನು ಮುಚ್ಚಿ ಅನ್‌ಡಾಕ್ ಮಾಡುವ ಮೂಲಕ ಭೂಮಿಯ ಕಡೆಗೆ ಪ್ರಯಾಣ ಪ್ರಾರಂಭಿಸಿತು. ಅದಾದ ನಂತರ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭೂಮಿಗೆ ಮರಳಲು ವಿಶೇಷ ವಿಧಾನ ಅಳವಡಿಸಿಕೊಂಡಿತು. ಇದರಿಂದಾಗಿ ನೌಕೆ ಭೂಮಿಯ ವಾತಾವರಣವನ್ನು ಸುರಕ್ಷಿತವಾಗಿ ಪ್ರವೇಶಿಸಿ, ಗೊತ್ತುಪಡಿಸಿದ ಸ್ಥಳದಲ್ಲಿಳಿಯಲು ಸಾಧ್ಯವಾಯಿತು.

ಸುನೀತಾ ವಿಲಿಯಮ್ಸ್ ಮತ್ತು ಅವರ ಸಹ ಗಗನಯಾತ್ರಿಗಳ ಬಾಹ್ಯಾಕಾಶ ನೌಕೆಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈಗ ಅವರು ಹ್ಯೂಸ್ಟನ್‌ನಲ್ಲಿರುವ ನಾಸಾದ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಾಚರಣೆಗಳ ಪ್ರಧಾನ ಕಚೇರಿಯಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದ್ದಾರೆ.

ಟಚ್‌ಡೌನ್‌ ಪ್ರಕ್ರಿಯೆ ಹೇಗಾಯ್ತು?

ಕ್ರ್ಯೂ ಡ್ರ್ಯಾಗನ್‌ ಕ್ಯಾಪ್ಸೂಲ್‌ ಫ್ಲೋರಿಡಾದ ಸಮುದ್ರದ ಮೇಲೆ ಟಚ್‌ಡೌನ್‌ ಆಗಿದೆ. ಆಕಾಶದಿಂದ ವೇಗವಾಗಿ ಬರುವ ಕ್ಯಾಪ್ಸೂಲ್‌ ನಿಧಾನವಾಗಿ ಲ್ಯಾಂಡ್‌ ಆಯ್ತು. ಭೂಮಿ ಪ್ರವೇಶದ ಬಳಿಕ ಕ್ಯಾಪ್ಸೂಲ್‌ನಲ್ಲಿರುವ 4 ಪ್ಯಾರಾಚೂಟ್‌ಗಳು ತೆರೆದುಕೊಂಡಿತ್ತು. ಈ ಪ್ಯಾರಾಚೂಟ್‌ಗಳು ಕ್ಯಾಪ್ಸೂಲ್‌ ವೇಗವನ್ನು ತಗ್ಗಿಸಿತ್ತು. ವೇಗ ತಗ್ಗಿದಂತೆ ಕ್ಯಾಪ್ಸೂಲ್‌ ನಿಧನವಾಗಿ ಸಮುದ್ರದಲ್ಲಿ ಟಚ್‌ಡೌನ್‌ ಆಯ್ತು.

ನಂತರ ವಿಶೇಷ ದೋಣಿಯಲ್ಲಿ ಸ್ಪೇಸ್‌ ಎಕ್ಸ್‌ ಸಿಬ್ಬಂದಿ ನೌಕೆಯನ್ನು ರೋಪ್‌ ಬಳಸಿ ಹತ್ತಿರದಲ್ಲೇ ಇದ್ದ ದೊಡ್ಡ ಬೋಟ್‌ ಬಳಿ ತಂದರು. ಈ ನೌಕೆಯನ್ನು ಕ್ರೇನ್‌ ಬಳಸಿ ಬೋಟ್‌ ಒಳಗಡೆ ಇಡಲಾಯಿತು. ಬೋಟ್‌ ಒಳಗಡೆ ಇಟ್ಟ ನಂತರ ಕ್ಯಾಪ್ಸೂಲ್‌ ಸುರಕ್ಷಿತವಾಗಿದೆಯೇ ಎಂದು ಪರಿಶೀಲಿಸಿದ ಬಳಿಕ ಕೆಳಗಡೆ ಇರುವ ಬಾಗಿಲು(ಹ್ಯಾಚ್) ತೆರೆಯಲಾಯಿತು. ಈ ಬಾಗಿಲಿನ ಮೂಲಕ ಯಾನಿಗಳನ್ನು ಸ್ಪೇಸ್‌ ಎಕ್ಸ್‌ ಸಿಬ್ಬಂದಿ ಹೊರಗೆ ನಿಧಾನವಾಗಿ ಎಳೆದು ವಿಶೇಷವಾಗಿ ವಿನ್ಯಾಸ ಪಡಿಸಲಾಗಿರುವ ವೀಲ್‌ ಚೇರ್‌ನಲ್ಲಿ ಕುಳ್ಳಿರಿಸಿದರು.

ಬಾಹ್ಯಾಕಾಶ ನಿಲ್ದಾಣಕ್ಕೆ ಸುನಿತಾ ಹೋಗಿದ್ಯಾಕೆ?

ನಾಸಾದ ಸಹಭಾಗಿತ್ವದಲ್ಲಿ ಬೋಯಿಂಗ್ ರೂಪಿಸಿದ್ದ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಪರೀಕ್ಷಾರ್ಥ ಪ್ರಯಾಣದ ಭಾಗವಾಗಿ ಉಪಗ್ರಹ ಉಡಾವಣೆ ಮಾಡಲಾಗಿತ್ತು. ಸುನಿತಾ ಮತ್ತು ಬುಚ್ ಇಬ್ಬರೂ ಗಗನಯಾತ್ರಿಗಳು ಜೂ.5 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹೋಗಿದ್ದರು. ಎಂಟು ದಿನಗಳ ಕಾಲ ಅಲ್ಲಿದ್ದು ಜೂ.14 ರಂದು ಸ್ಟಾರ್‌ಲೈನರ್ ಮೂಲಕವೇ ಭೂಮಿಗೆ ವಾಪಸ್ ಆಗಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಅವರು ಬಾಹ್ಯಾಕಾಶದಲ್ಲೇ ಉಳಿಯುವಂತಾಗಿತ್ತು.

ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ನೆಲೆಯಿಂದ ಮಾರ್ಚ್‌ 15 ರಂದು ಕ್ರ್ಯೂ ಡ್ರ್ಯಾಗನ್‌ ಕ್ಯಾಪ್ಸೂಲ್ (Crew Dragon Capsule) ಹೊತ್ತುಕೊಂಡು ಫಾಲ್ಕನ್‌-9 ರಾಕೆಟ್‌ ಹಾರಿತ್ತು. ಉಡ್ಡಯನಗೊಂಡ 29 ಗಂಟೆಗಳ ಬಳಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಕ್ರ್ಯೂ ಡ್ರ್ಯಾಗನ್‌ ತಲುಪಿತ್ತು.

ಭಾರತ ಸಂಭ್ರಮ

ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ವಾಪಸ್ಸಾಗಿರುವುದಕ್ಕೆ ಭಾರತೀಯರು ಸಂತಸ ವ್ಯಕ್ತಪಡಿಸುತ್ತಿದ್ದು, ಅದರಲ್ಲಿಯೂ ಸುನಿತಾ ಅವರ ಪೂರ್ವಜರ ಊರು ಗುಜರಾತಿನ ಮೆಹ್ಲಾನ ಜಿಲ್ಲಾಯಲ್ಲಿರುವ ಜುಲಸಾನದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಸುನಿತಾ ತಂದೆ ದೀಪಕ್ ಪಾಂಡ್ಯ ಪೂರ್ವಜರ ಊರು ಜುಲಾಸಾನ ಗ್ರಾಮಸ್ಥರು ಅವರ ಸುರಕ್ಷತೆಗಾಗಿ ದೇವಸ್ಥಾನಗಳಲ್ಲಿ ಜ್ಯೋತಿ ಬೆಳಗಿಸಿ ಪ್ರಾರ್ಥನೆ ಸಲ್ಲಿಸಿದ್ದರು. ಇದೀಗ ಕೊನೆಗೂ ಸುನಿತಾ ಅವರು ಭುವಿಗೆ ಮರಳಿರುವುದಕ್ಕೆ ಸಂಭ್ರಮವನ್ನಾಚರಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT