ಪಾಕ್ ಸೇನಾ ಕ್ಯಾಪ್ಟನ್ ಹತ್ಯೆ 
ವಿದೇಶ

ಪಾಕ್‌ನಲ್ಲಿ ಮತ್ತೆ ರಕ್ತದೋಕುಳಿ: Pak ಸೇನಾ ಕ್ಯಾಪ್ಟನ್ ಹತ್ಯೆ; ಎನ್‌ಕೌಂಟರ್‌ನಲ್ಲಿ 10 ಭಯೋತ್ಪಾದಕರು ಸಾವು!

ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾದಲ್ಲಿ 10 ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.

ಪೇಶಾವರ್: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾದಲ್ಲಿ 10 ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಪಾಕಿಸ್ತಾನ ಸೇನೆ ಹೇಳಿಕೊಂಡಿದೆ. ದೇಶದ ವಾಯುವ್ಯ ಪ್ರಾಂತ್ಯದ ಖೈಬರ್ ಪಖ್ತುನ್ಖ್ವಾದಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಸಂಘಟನೆಗೆ ಸೇರಿದ ಕನಿಷ್ಠ ಏಳು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನಿ ಸೇನಾ ಕ್ಯಾಪ್ಟನ್ ಕೂಡ ಸಾವನ್ನಪ್ಪಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ದಕ್ಷಿಣ ವಜೀರಿಸ್ತಾನದ ಗಡಿಯಲ್ಲಿರುವ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕರ್ರಿ ಮಲಾಂಗ್ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನ ಸೇನೆಯ ಪ್ರಕಾರ, ಕಾರ್ಯಾಚರಣೆಯಲ್ಲಿ ಇನ್ನೂ ಮೂವರು ಸೈನಿಕರು ಗಾಯಗೊಂಡಿದ್ದಾರೆ. ಏತನ್ಮಧ್ಯೆ, ಪಾಕಿಸ್ತಾನ ಸರಣಿ ಭಯೋತ್ಪಾದಕ ಘಟನೆಗಳನ್ನು ಎದುರಿಸುತ್ತಿದೆ. ಇತ್ತೀಚೆಗೆ, ಪಾಕಿಸ್ತಾನದ ಕ್ವೆಟ್ಟಾದಲ್ಲಿ ನಡೆದ ರೈಲು ಅಪಹರಣ ಘಟನೆಯು ಕೋಲಾಹಲವನ್ನು ಸೃಷ್ಟಿಸಿತು. ಇದರಲ್ಲಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) 400ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಯಾಣಿಕರು ಸೇರಿದಂತೆ ಇಡೀ ರೈಲನ್ನು ಅಪಹರಿಸಿತು. ಘಟನೆಯ ಬಗ್ಗೆ ಬಿಎಲ್‌ಎಎ ಮತ್ತು ಪಾಕಿಸ್ತಾನ ಸೇನೆಯಿಂದ ವಿಭಿನ್ನ ಹೇಳಿಕೆಗಳು ಬಂದಿದ್ದವು. ಪಾಕಿಸ್ತಾನ ಸೇನೆಯು 33 ಭಯೋತ್ಪಾದಕರನ್ನು ಕೊಂದು ಬಹುತೇಕ ಎಲ್ಲಾ ಒತ್ತೆಯಾಳುಗಳನ್ನು ರಕ್ಷಿಸಿದೆ ಎಂದು ಹೇಳಿತ್ತು. ದಾಳಿಯಲ್ಲಿ 27 ಪಾಕ್ ಸೈನಿಕರು ಮೃತಪಟ್ಟಿದ್ದರು ಎಂದು ಸೇನೆ ಹೇಳಿತ್ತು. ಆದರೆ 214 ಒತ್ತೆಯಾಳುಗಳೊಂದಿಗೆ ಹಲವಾರು ಪಾಕಿಸ್ತಾನಿ ಸೈನಿಕರನ್ನು ಹತ್ಯೆ ಮಾಡಿರುವುದಾಗಿ ಬಿಎಲ್‌ಎ ಹೇಳಿಕೊಂಡಿದೆ.

ಖೈಬರ್ ಪಖ್ತುಂಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಈ ಎನ್‌ಕೌಂಟರ್ ನಡೆದಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಈ ಸಂದರ್ಭದಲ್ಲಿ, ನಿಷೇಧಿತ ಸಂಘಟನೆಗೆ ಸೇರಿದ ಕನಿಷ್ಠ 10 ಭಯೋತ್ಪಾದಕರು ಮತ್ತು ಪಾಕಿಸ್ತಾನಿ ಸೇನೆಯ ಕ್ಯಾಪ್ಟನ್ ಹತ್ಯೆಯಾಗಿದ್ದಾರೆ. ಪಾಕಿಸ್ತಾನ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ಈ ಮಾಹಿತಿಯನ್ನು ನೀಡಿದೆ. ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ನಂತರ ಗುರುವಾರ ಗುಪ್ತಚರ ಆಧಾರಿತ ಕಾರ್ಯಾಚರಣೆ (ಐಬಿಒ) ಪ್ರಾರಂಭಿಸಲಾಯಿತು ಎಂದು ಸೇನೆಯ ಮಾಧ್ಯಮ ವಿಭಾಗ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ವಶ

ಭೀಕರ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಸೇನಾ ಕ್ಯಾಪ್ಟನ್ ಹಸ್ನೈನ್ ಅಖ್ತರ್ ಸಾವನ್ನಪ್ಪಿದರು. ಹತ್ಯೆಗೀಡಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಎಸ್‌ಪಿಆರ್ ತಿಳಿಸಿದೆ. ಈ ಭಯೋತ್ಪಾದಕರು ವಿವಿಧ ಕಾನೂನು ಜಾರಿ ಸಂಸ್ಥೆಗಳ ವಿರುದ್ಧ ಹಲವಾರು ದಾಳಿಗಳನ್ನು ನಡೆಸುವುದರ ಜೊತೆಗೆ ಅಮಾಯಕ ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?