ವ್ಲಾಡಿಮಿರ್ ಪುಟಿನ್ ಜೊತೆಗೆ ಪ್ರಧಾನಿ ಮೋದಿ 
ವಿದೇಶ

ಈಗ ನಮ್ಮ ಸರದಿ: ಭಾರತ ಭೇಟಿಗೆ ಪ್ರಧಾನಿ ಮೋದಿ ಆಹ್ವಾನ ಒಪ್ಪಿದ ಪುಟಿನ್!

ಕಳೆದ ವರ್ಷ ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ರಷ್ಯಾಕ್ಕೆ ಆಗಮಿಸಿದ್ದರು. ಈಗ ನಮ್ಮ ಸರದಿ ಎಂದಿದ್ದಾರೆ.

ಮಾಸ್ಕೋ: ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನವನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಪ್ಪಿಕೊಂಡಿದ್ದು, ಅದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಗುರುವಾರ ಹೇಳಿದ್ದಾರೆ.

ರಷ್ಯಾದ ಅಂತಾರಾಷ್ಟ್ರೀಯ ವ್ಯವಹಾರಗಳ ಕೌನ್ಸಿಲ್ (RIAC) ಆಯೋಜಿಸಿದ್ದ "ರಷ್ಯಾ ಮತ್ತು ಭಾರತ: ಹೊಸ ದ್ವಿಪಕ್ಷೀಯ ಕಾರ್ಯಸೂಚಿಯತ್ತ' ಶೀರ್ಷಿಕೆಯ ಸಮ್ಮೇಳನದಲ್ಲಿ ವೀಡಿಯೊ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಲಾವ್ರೊವ್, "ಪುಟಿನ್ ಭಾರತಕ್ಕೆ ಭೇಟಿ ನೀಡುವ ಸಲುವಾಗಿ ತಯಾರಿಯನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

"ಪುಟಿನ್ ಭಾರತಕ್ಕೆ ಭೇಟಿ ನೀಡಲು ಪ್ರಸ್ತುತ ಸಿದ್ಧತೆ ನಡೆಸಲಾಗುತ್ತಿದೆ" ಎಂದು ರಷ್ಯಾದ ವಿದೇಶಾಂಗ ಸಚಿವರು ಹೇಳಿದ್ದಾರೆಂದು ಸರ್ಕಾರಿ ಸ್ವಾಮ್ಯದ TASS ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಕಳೆದ ವರ್ಷ ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ರಷ್ಯಾಕ್ಕೆ ಆಗಮಿಸಿದ್ದರು. ಈಗ ನಮ್ಮ ಸರದಿ ಎಂದಿದ್ದಾರೆ. ಆದರೆ ಯಾವಾಗ ಪುಟಿನ್ ಭಾರತಕ್ಕೆ ಆಗಮಿಸಲಿದ್ದಾರೆ ಎನ್ನುವ ದಿನಾಂಕವನ್ನು ಬಹಿರಂಗಪಡಿಸಿಲ್ಲ.

2024ರ ಜುಲೈನಲ್ಲಿ ಪ್ರಧಾನಿ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದರು. ಐದು ವರ್ಷಗಳಲ್ಲಿ ಮೋದಿಯವರ ಮೊದಲ ಭೇಟಿ ಇದಾಗಿತ್ತು. ಭೇಟಿಯ ವೇಳೆ ಪುಟಿನ್ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು.

ಭಾರತದೊಂದಿಗೆ ರಷ್ಯಾ ಕಾರ್ಯತಂತ್ರದ ಪಾಲುದಾರಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಮಾರ್ಚ್ 24 ರಂದು ಲಾವ್ರೊವ್ ಹೇಳಿದ್ದರು. ಚೀನಾ, ಭಾರತ, ಇರಾನ್, ಉತ್ತರ ಕೊರಿಯಾ ಮತ್ತು ಕಾಮನ್‌ವೆಲ್ತ್ ಆಫ್ ಇಂಡಿಪೆಂಡೆಂಟ್ ಸ್ಟೇಟ್ಸ್ (ಸಿಐಎಸ್) ದಂತಹ ದೇಶಗಳೊಂದಿಗೆ ರಷ್ಯಾ ಬಾಂಧವ್ಯವನ್ನು ವಿಸ್ತರಿಸುತ್ತಿದೆ ಎಂದು ಲಾವ್ರೊವ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಜನವರಿಯಲ್ಲಿ ಭಾರತದ 76 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಪ್ರಧಾನಿ ಮೋದಿಯವರಿಗೆ ನೀಡಿದ ಅಭಿನಂದನಾ ಸಂದೇಶದಲ್ಲಿ, ರಷ್ಯಾ-ಭಾರತದ ಸಂಬಂಧಗಳು "ವಿಶೇಷ ಕಾರ್ಯತಂತ್ರದ ಪಾಲುದಾರಿಕೆ"ಯನ್ನು ಆಧರಿಸಿವೆ ಎಂದು ಪುಟಿನ್ ತಿಳಿಸಿದ್ದರು. ಪುಟಿನ್ ಮತ್ತು ಮೋದಿ ಪ್ರತಿ ಎರಡು ತಿಂಗಳಿಗೊಮ್ಮೆ ದೂರವಾಣಿ ಸಂಭಾಷಣೆಗಳನ್ನು ನಡೆಸುತ್ತಾರೆ. ಅಂತಾರಾಷ್ಟ್ರೀಯ ಸಮ್ಮೇಳನಗಳ ಸಂದರ್ಭದಲ್ಲಿ ಉಭಯ ನಾಯಕರು ವೈಯಕ್ತಿಕವಾಗಿ ಸಭೆಗಳನ್ನು ನಡೆಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

Russian strike: ಉಕ್ರೇನ್‌ ರೈಲು ನಿಲ್ದಾಣದಲ್ಲಿ ರಷ್ಯಾ 'ಡ್ರೋನ್' ದಾಳಿ; ಓರ್ವ ಸಾವು, 30 ಮಂದಿಗೆ ಗಾಯ! Video

ಬೆಂಗಳೂರು: ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ; Oyo ರೂಂನಲ್ಲಿ ಮಹಿಳೆ ಆತ್ಮಹತ್ಯೆ!

ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆಯಲ್ಲಿ, ಕೈ ಮುಗಿದು ಕುಳಿತ ನಿತೀಶ್ ಕುಮಾರ್; ವ್ಯಾಪಕ ಟೀಕೆ!: Video

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

SCROLL FOR NEXT