Associated Press
ವಿದೇಶ

Myanmar Earthquake: 144 ಮಂದಿ ಸಾವು; 700ಕ್ಕೂ ಹೆಚ್ಚು ಮಂದಿಗೆ ಗಾಯ, ರಕ್ಷಣಾ ಕಾರ್ಯಕ್ಕೆ ವೇಗ!

ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಇಂದು ಸಂಭವಿಸಿದ ಪ್ರಬಲ ಭೂಕಂಪನವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಮಂದಿ ಸಾವನ್ನಪ್ಪಿದ್ದು 732 ಜನರು ಗಾಯಗೊಂಡಿದ್ದಾರೆ.

ಬ್ಯಾಂಕಾಕ್: ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್‌ನಲ್ಲಿ ಇಂದು ಸಂಭವಿಸಿದ ಪ್ರಬಲ ಭೂಕಂಪನವು ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 144 ಮಂದಿ ಸಾವನ್ನಪ್ಪಿದ್ದು 732 ಜನರು ಗಾಯಗೊಂಡಿದ್ದಾರೆ. ಅಲ್ಲಿ ಎರಡು ತೀವ್ರ ಹಾನಿಗೊಳಗಾದ ನಗರಗಳ ಫೋಟೋಗಳು ಮತ್ತು ವೀಡಿಯೊಗಳು ವ್ಯಾಪಕ ಹಾನಿಯನ್ನು ತೋರಿಸಿವೆ. ಥಾಯ್ ರಾಜಧಾನಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದು ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಮ್ಯಾನ್ಮಾರ್‌ನ ಎರಡನೇ ಅತಿದೊಡ್ಡ ನಗರವಾದ ಮಂಡಲೆ ಬಳಿ ಕೇಂದ್ರಬಿಂದುವಾಗಿದ್ದ 7.7 ತೀವ್ರತೆಯ ಭೂಕಂಪವು ಮಧ್ಯಾಹ್ನ ಅಪ್ಪಳಿಸಿತು ಮತ್ತು ನಂತರ 6.4 ತೀವ್ರತೆಯ ಪ್ರಬಲವಾದ ನಂತರದ ಕಂಪನ ಸಂಭವಿಸಿತು. ವಿಶ್ವದ ಅತ್ಯಂತ ಬಡ ದೇಶಗಳಲ್ಲಿ ಒಂದಾದ ಮ್ಯಾನ್ಮಾರ್‌ನಲ್ಲಿ, ವಿಶೇಷವಾಗಿ ಸಾವುನೋವು, ಗಾಯ ಮತ್ತು ವಿನಾಶದ ಪೂರ್ಣ ಪ್ರಮಾಣವು ತಕ್ಷಣವೇ ಸ್ಪಷ್ಟವಾಗಿಲ್ಲ. ಆದರೆ ಇಲ್ಲಿಯವರೆಗೂ 144 ಜನರು ಸಾವನ್ನಪ್ಪಿದ್ದು 732 ಜನರು ಗಾಯಗೊಂಡಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ನೇ ಪೈ ಟಾವ್‌ನಲ್ಲಿ 96 ಮಂದಿ, ಸಾಗೈಂಗ್‌ನಲ್ಲಿ 18 ಮಂದಿ ಮತ್ತು ಮಂಡಲೆಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡವು ಕುಸಿದಿದ್ದು ಅದರಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಭೂಕಂಪದ ಪರಿಣಾಮವಾಗಿ ಥಾಯ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರಾ ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ