ಲೆಫ್ಟಿನೆಂಟ್ ಜನರಲ್ ಮುಹಮ್ಮದ್ ಅಸಿಮ್ ಮಲಿಕ್ 
ವಿದೇಶ

ಪಾಕಿಸ್ತಾನಕ್ಕೆ ನೂತನ ಭದ್ರತಾ ಸಲಹೆಗಾರ: ಲೆ. ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ನೇಮಕ

ಮಲಿಕ್ ಅವರನ್ನು ಕಳೆದ ವರ್ಷ ಅಕ್ಟೋಬರ್ ನಲ್ಲಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್‌ನ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು.

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಪಾಕಿಸ್ತಾನವು ಗುಪ್ತಚರ ಇಲಾಖೆ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ಅವರನ್ನು ನೂತನ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಿಸಿದೆ.

ಮಲಿಕ್ ಅವರನ್ನು ಕಳೆದ ವರ್ಷ ಅಕ್ಟೋಬರ್ ನಲ್ಲಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್‌ನ ಮಹಾನಿರ್ದೇಶಕರಾಗಿ ನೇಮಿಸಲಾಗಿತ್ತು. ಇತ್ತೀಚಿನ ಬೆಳವಣಿಗೆ ನಂತರ ಮೊನ್ನೆ ಮಂಗಳವಾರ ಕ್ಯಾಬಿನೆಟ್ ವಿಭಾಗವು ಹೊರಡಿಸಿದ ಅಧಿಸೂಚನೆಯ ಪ್ರಕಾರ, ಜನರಲ್ ಮಲಿಕ್ ಅವರಿಗೆ ಔಪಚಾರಿಕವಾಗಿ NSA ಕಾರ್ಯವನ್ನು ನೀಡಲಾಗಿದೆ.

ಲೆಫ್ಟಿನೆಂಟ್ ಜನರಲ್ ಮುಹಮ್ಮದ್ ಅಸಿಮ್ ಮಲಿಕ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಹೆಚ್ಚುವರಿ ಹೊಣೆಯನ್ನು ವಹಿಸಿಕೊಳ್ಳುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅವರು ದೇಶದ ಹತ್ತನೇ ಎನ್ ಎಸ್ ಎ ಆಗಿದ್ದಾರೆ, ಸೇವೆ ಸಲ್ಲಿಸುತ್ತಿರುವ ಐಎಸ್ ಐ ಮುಖ್ಯಸ್ಥರಿಗೆ ಎರಡು ಪ್ರಮುಖ ಹುದ್ದೆಗಳಲ್ಲಿ ಏಕಕಾಲದಲ್ಲಿ ಸೇವೆ ಸಲ್ಲಿಸುವ ಕಾರ್ಯವನ್ನು ನೀಡಲಾಗಿರುವುದು ಇದೇ ಮೊದಲು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ