ಪ್ರಧಾನಿ ನರೇಂದ್ರ ಮೋದಿ-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  
ವಿದೇಶ

ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಭಾರತ ಜೊತೆ ದೃಢವಾಗಿ ನಿಲ್ಲುತ್ತೇವೆ; ಪ್ರಧಾನಿ ಮೋದಿಗೆ ನಮ್ಮ ಸಂಪೂರ್ಣ ಬೆಂಬಲ: ಅಮೆರಿಕ

ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪರಿಸ್ಥಿತಿಯನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿದ್ದಾರೆ.

ನ್ಯೂಯಾರ್ಕ್ / ವಾಷಿಂಗ್ಟನ್: ಭಯೋತ್ಪಾದನೆ ವಿರುದ್ಧ ಅಮೆರಿಕ ಭಾರತದೊಂದಿಗೆ ಬಲವಾಗಿ ನಿಂತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹೇಳಿದ್ದಾರೆ.

ದಕ್ಷಿಣ ಏಷ್ಯಾದಲ್ಲಿ ದೀರ್ಘಕಾಲೀನ ಶಾಂತಿ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಕಾಯ್ದುಕೊಳ್ಳುವ ಜವಾಬ್ದಾರಿಯುತ ನಿರ್ಣಯದತ್ತ ಕೆಲಸ ಮಾಡುವಂತೆ ಭಾರತ ಮತ್ತು ಪಾಕಿಸ್ತಾನವನ್ನು ಅವರು ಒತ್ತಾಯಿಸಿದ್ದಾರೆ.

ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪರಿಸ್ಥಿತಿಯನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಹೇಳಿದ್ದಾರೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.

ನಮ್ಮ ಸರ್ಕಾರ ನಿರಂತರ ಸಂವಹನದಲ್ಲಿದೆ. ಎರಡೂ ದೇಶಗಳಿಂದ ಜವಾಬ್ದಾರಿಯುತ ಪರಿಹಾರವನ್ನು ಕೇಳುತ್ತಿದ್ದೇವೆ. ಅದನ್ನು ಮೀರಿ, ನಾನು ನಿಮಗೆ ಏನನ್ನೂ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಮೆರಿಕ ಪ್ರೋತ್ಸಾಹಿಸಿದೆ, ಭಯೋತ್ಪಾದನೆಯ ವಿರುದ್ಧ ದೆಹಲಿಯೊಂದಿಗೆ ಸಹಕರಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ ಇಸ್ಲಾಮಾಬಾದ್‌ನ ಸಹಕಾರವನ್ನು ಒತ್ತಾಯಿಸಿದೆ.

ಕಳೆದ ವಾರ ವಿದೇಶಾಂಗ ಸಚಿವ ಜೈಶಂಕರ್ ಅವರೊಂದಿಗಿನ ತಮ್ಮ ದೂರವಾಣಿ ಮಾತುಕತೆಯಲ್ಲಿ ರುಬಿಯೊ ಪಹಲ್ಗಾಮ್‌ನಲ್ಲಿ 26 ನಾಗರಿಕರನ್ನು ಕೊಂದ ಭಯಾನಕ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ತನ್ನ ದುಃಖವನ್ನು ವ್ಯಕ್ತಪಡಿಸಿದರು.

ಭಯೋತ್ಪಾದನೆಯ ವಿರುದ್ಧ ಭಾರತದೊಂದಿಗೆ ಸಹಕಾರಕ್ಕೆ ಅಮೆರಿಕದ ಬದ್ಧತೆಯನ್ನು ರುಬಿಯೊ ಪುನರುಚ್ಚರಿಸಿದರು. ದಕ್ಷಿಣ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನದೊಂದಿಗೆ ಕೆಲಸ ಮಾಡಲು ಭಾರತವನ್ನು ಪ್ರೋತ್ಸಾಹಿಸಿದರು ಎಂದು ಅಮರಿಕ ವಿದೇಶಾಂಗ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

SCROLL FOR NEXT