ಯುಎನ್ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ 
ವಿದೇಶ

ಭಾರತ-ಪಾಕ್ ಉದ್ವಿಗ್ನತೆ: ಪಾಕಿಸ್ತಾನಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸದಸ್ಯರ ತಪರಾಕಿ; ಉದ್ವಿಗ್ನತೆ ತಗ್ಗಿಸಲು ಕರೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಜನರನ್ನು, ಹೆಚ್ಚಾಗಿ ಪ್ರವಾಸಿಗರನ್ನು ಕೊಂದ ಕೆಲವು ದಿನಗಳ ನಂತರ ಈ ಸಭೆ ನಡೆದಿದೆ.

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ನಡೆಸಿದ ರಹಸ್ಯ ಸಮಾಲೋಚನಾ ಸಭೆಯಲ್ಲಿ ರಾಯಭಾರಿಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ಮಂಡಳಿ ಅಧಿಕಾರಿಗಳು ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೇ ತಿಂಗಳಿನ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಾಗಿರುವ ಗ್ರೀಸ್, ಪ್ರಸ್ತುತ ಖಾಯಂ ಸದಸ್ಯ ರಾಷ್ಟ್ರವಲ್ಲದ ಪಾಕಿಸ್ತಾನದ ವಿನಂತಿಯ ಮೇರೆಗೆ ನಿನ್ನೆ ಸೋಮವಾರ ಸಭೆಯನ್ನು ನಿಗದಿಪಡಿಸಿದ್ದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಜನರನ್ನು, ಹೆಚ್ಚಾಗಿ ಪ್ರವಾಸಿಗರನ್ನು ಕೊಂದ ಕೆಲವು ದಿನಗಳ ನಂತರ ಈ ಸಭೆ ನಡೆದಿದೆ. 15 ಸದಸ್ಯರ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯ ನಂತರ ಯಾವುದೇ ಹೇಳಿಕೆ ನೀಡಲಿಲ್ಲ,

ರಾಜಕೀಯ ಮತ್ತು ಶಾಂತಿ ಕಾರ್ಯಾಚರಣೆಗಳ ಇಲಾಖೆಗಳಲ್ಲಿ ಮಧ್ಯಪ್ರಾಚ್ಯ, ಏಷ್ಯಾ ಮತ್ತು ಪೆಸಿಫಿಕ್‌ನ ಸಹಾಯಕ ಪ್ರಧಾನ ಕಾರ್ಯದರ್ಶಿ ಟುನೀಶಿಯಾದ ಖಲೀದ್ ಮೊಹಮ್ಮದ್ ಖಿಯಾರಿ ಎರಡೂ ಇಲಾಖೆಗಳ (ಡಿಪಿಪಿಎ ಮತ್ತು ಡಿಪಿಒ) ಪರವಾಗಿ ಮಂಡಳಿಗೆ ವಿವರಿಸಿದರು.

ಸಭೆಯಿಂದ ಹೊರಬಂದ ಖಿಯಾರಿ, ಸಂವಾದ ಮತ್ತು ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ಕರೆ ನೀಡಲಾಗಿದೆ ಎಂದು ಹೇಳಿದರು.

ವಿಶ್ವಸಂಸ್ಥೆಗೆ ಗ್ರೀಸ್‌ ಖಾಯಂ ಪ್ರತಿನಿಧಿ ಮತ್ತು ಪ್ರಸ್ತುತ ಯುಎನ್ ಎಸ್ ಸಿ ಅಧ್ಯಕ್ಷರಾಗಿರುವ ರಾಯಭಾರಿ ಇವಾಂಜೆಲೋಸ್ ಸೆಕೆರಿಸ್ ಇದನ್ನು ಫಲಪ್ರದ ಸಭೆ ಎಂದು ಬಣ್ಣಿಸಿದ್ದಾರೆ. ರಷ್ಯಾದ ರಾಜತಾಂತ್ರಿಕರೊಬ್ಬರು, ಭಾರತ ಮತ್ತು ಪಾಕಿಸ್ತಾನ ನಡುವಣ ಉಲ್ಬಣವನ್ನು ಶಮನಗೊಳಿಸಲು ನಾವು ಆಶಿಸುತ್ತೇವೆ ಎಂದು ಹೇಳಿದರು.

15 ರಾಷ್ಟ್ರಗಳ ಭದ್ರತಾ ಮಂಡಳಿಯ ಸದಸ್ಯರು ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಎತ್ತಿದ್ದಾರೆ ಎಂದು ಇಲ್ಲಿನ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದೆ. ಭಾರತದೊಂದಿಗೆ ದ್ವಿಪಕ್ಷೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಭಯೋತ್ಪಾದಕ ದಾಳಿಗೆ ವ್ಯಾಪಕ ಖಂಡನೆ ಮತ್ತು ಹೊಣೆಗಾರಿಕೆಯ ಅಗತ್ಯವನ್ನು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸುಮಾರು ಒಂದೂವರೆ ಗಂಟೆಗಳ ಕಾಲ ನಡೆದ ಮುಚ್ಚಿದ ಬಾಗಿಲಿನ ಸಭೆಯು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕೊಠಡಿಯಲ್ಲಿ ನಡೆಯಲಿಲ್ಲ, ಬದಲಾಗಿ ಅದರ ಪಕ್ಕದ ಸಮಾಲೋಚನಾ ಕೊಠಡಿಯಲ್ಲಿ ನಡೆಯಿತು.

ಪಾಕಿಸ್ತಾನದ ಕ್ಷಿಪಣಿ ಪರೀಕ್ಷೆಗಳು ಮತ್ತು ಪರಮಾಣು ವಾಕ್ಚಾತುರ್ಯವು ಉದ್ವಿಗ್ನತೆಯನ್ನು ಹೆಚ್ಚಿಸುವ ಅಂಶಗಳಾಗಿವೆ ಎಂದು ಅನೇಕ ಸದಸ್ಯರು ಕಳವಳ ವ್ಯಕ್ತಪಡಿಸಿದರು. ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಖಾಯಂ ಪ್ರತಿನಿಧಿ ರಾಯಭಾರಿ ಅಸಿಮ್ ಇಫ್ತಿಕರ್ ಅಹ್ಮದ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಭೆಯಲ್ಲಿ ದೇಶದ ಉದ್ದೇಶಗಳನ್ನು ಹೆಚ್ಚಾಗಿ ಮುಂದಿಡಲಾಗಿದೆ ಎಂದರು.

ಸಭೆಯಲ್ಲಿ ಏನೇನು ವಿಷಯಗಳು ಪ್ರಸ್ತಾಪವಾದವು?

1960ರ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತುಗೊಳಿಸಿದ ವಿಷಯವನ್ನು ಪಾಕಿಸ್ತಾನವು ಎತ್ತಿತು. ನೀರು ಜೀವ, ಆಯುಧವಲ್ಲ. ಈ ನದಿಗಳು 240 ಮಿಲಿಯನ್‌ಗಿಂತಲೂ ಹೆಚ್ಚು ಪಾಕಿಸ್ತಾನಿಗಳನ್ನು ಪೋಷಿಸುತ್ತವೆ. ಸಭೆಯಲ್ಲಿ ಪಾಕಿಸ್ತಾನವು ಭಾರತ ಸೇರಿದಂತೆ ನಮ್ಮ ಎಲ್ಲಾ ನೆರೆಹೊರೆಯವರೊಂದಿಗೆ ಶಾಂತಿಯುತ, ಸಹಕಾರಿ ಸಂಬಂಧಗಳಿಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು ಎಂದು ಅಹ್ಮದ್ ಹೇಳಿದರು.

ಪರಸ್ಪರ ಗೌರವ ಮತ್ತು ಸಾರ್ವಭೌಮ ಸಮಾನತೆಯ ಆಧಾರದ ಮೇಲೆ ನಾವು ಸಂವಾದಕ್ಕೆ ಮುಕ್ತರಾಗಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT