ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

'ಇದು ಬೇಗ ಮುಗಿಯಲಿ ಎಂದು ನಾನು ಆಶಿಸುತ್ತೇನೆ': Operation Sindoor ಬಗ್ಗೆ ಅಮೆರಿಕ ಅಧ್ಯಕ್ಷ Trump ಪ್ರತಿಕ್ರಿಯೆ; Video

ಉಗ್ರ ದಾಳಿ ನಾಚಿಕೆಗೇಡಿನ ಸಂಗತಿ. ಹಿಂದಿನ ಘಟನೆಗಳನ್ನು ಆಧರಿಸಿ ಏನಾದರೂ ಸಂಭವಿಸಲಿದೆ ಎಂದು ಜನರಿಗೆ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ.

ವಾಷಿಂಗ್ಟನ್: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ 'Op Sindoor' ಏರ್ ಸ್ಟ್ರೈಕ್ ನಲ್ಲಿ 100ಕ್ಕೂ ಅಧಿಕ ಮಂದಿ ಉಗ್ರರು ಸಾವನ್ನಪ್ಪಿದ್ದು, ಈ ವಿಚಾರ ತಿಳಿಯುತ್ತಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ನಡೆಸಿದ ಸ್ವಲ್ಪ ಸಮಯದ ನಂತರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು. ಎಲ್ಲಾ ಇಷ್ಟಕ್ಕೇ ಮುಕ್ತಾಯವಾಗುತ್ತದೆ ಎಂದು ಭಾವಿಸುತ್ತೇನೆ. ಯುದ್ಧವು "ಬಹಳ ಬೇಗ" ಕೊನೆಗೊಳ್ಳುತ್ತದೆ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಉಗ್ರ ದಾಳಿ ನಾಚಿಕೆಗೇಡಿನ ಸಂಗತಿ. ಹಿಂದಿನ ಘಟನೆಗಳನ್ನು ಆಧರಿಸಿ ಏನಾದರೂ ಸಂಭವಿಸಲಿದೆ ಎಂದು ಜನರಿಗೆ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ. ಅವರು ಬಹಳ ಸಮಯದಿಂದ ಹೋರಾಡುತ್ತಿದ್ದಾರೆ. ನೀವು ನಿಜವಾಗಿಯೂ ಅದರ ಬಗ್ಗೆ ಯೋಚಿಸಿದರೆ ಅವರು (ಭಾರತ ಮತ್ತು ಪಾಕಿಸ್ತಾನ) ಅನೇಕ, ಹಲವು ದಶಕಗಳು ಮತ್ತು ಶತಮಾನಗಳಿಂದ ಹೋರಾಡುತ್ತಿದ್ದಾರೆ ಟ್ರಂಪ್ ಹೇಳಿದರು.

ಇದೇ ವೇಳೆ ಉದ್ವಗ್ನತೆ ಭುಗಿಲೆದ್ದಿರುವ ಕುರಿತು ಉಭಯ ದೇಶಗಳಿಗೆ ಯಾವುದಾದರೂ ಸಂದೇಶ ನೀಡುತ್ತೀರಾ ಎಂದು ಕೇಳಿದಾಗ ಉತ್ತರಿಸಿದ ಟ್ರಂಪ್, "ಇಲ್ಲ, ಅದು ಬಹಳ ಬೇಗ ಕೊನೆಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಒಂಬತ್ತು ಭಯೋತ್ಪಾದಕ ಕೇಂದ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ. ಇದರಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಭದ್ರಕೋಟೆಯಾದ ಭಹವಲ್ಪುರ್ ಕೂಡ ಸೇರಿದೆ.

'ಆಪರೇಷನ್ ಸಿಂಧೂರ್' ಅಡಿಯಲ್ಲಿ ಮಿಲಿಟರಿ ದಾಳಿಗಳನ್ನು ನಡೆಸಲಾಗಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯು ಭಾರತ ಮತ್ತು ವಿದೇಶಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಎರಡು ವಾರಗಳ ನಂತರ ಭಾರತದ ಕ್ರಮಗಳು ಬಂದಿವೆ.

"25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕನನ್ನು ಹತ್ಯೆಗೈದ ಬರ್ಬರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮಗಳು ಬಂದಿವೆ" ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೆ ಈ ಹಿಂದೆಯೇ ಭಾರತ "ಪಹಲ್ಗಾಮ್ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂಬ ಬದ್ಧತೆಗೆ ನಾವು ಬದ್ಧರಾಗಿದ್ದೇವೆ" ಎಂದು ಅದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!