ಪ್ರಬಲ ಸ್ಫೋಟ  
ವಿದೇಶ

ಪಾಕಿಸ್ತಾನದ ಲಾಹೋರ್ ನಲ್ಲಿ ಪ್ರಬಲ ಸ್ಫೋಟ: ರಾಯ್ಟರ್ಸ್ ವರದಿ

5-6 ಅಡಿ ಉದ್ದದ ಡ್ರೋನ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ಜ್ಯಾಮ್ ಮಾಡುವ ಮೂಲಕ ಡ್ರೋನ್ ನ್ನು ಹೊಡೆದುರುಳಿಸಲಾಗಿದೆ. ನಾಗರಿಕ ಮೂಲಸೌಕರ್ಯಕ್ಕೆ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿದ ಬಗ್ಗೆ ಇಲ್ಲಿಯವರೆಗೆ ವರದಿಯಾಗಿಲ್ಲ.

ಲಾಹೋರ್: ಭಾರತವು ಆಪರೇಷನ್ ಸಿಂಧೂರ್ ಎಂಬ ಕಾರ್ಯಾಚರಣೆಯ ಹೆಸರಿನಲ್ಲಿ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಗುರಿಗಳ ಮೇಲೆ ದಾಳಿ ಮಾಡಿದ ಒಂದು ದಿನದ ನಂತರ ಇಂದು ಗುರುವಾರ ಪಾಕಿಸ್ತಾನದ ಲಾಹೋರ್‌ನಲ್ಲಿ ಸರಣಿ ದೊಡ್ಡ ಮಟ್ಟದ ಸ್ಫೋಟಗಳು ಕೇಳಿಬಂದವು.

ವಾಲ್ಟನ್ ವಿಮಾನ ನಿಲ್ದಾಣದ ಬಳಿಯ ಲಾಹೋರ್‌ನ ಗೋಪಾಲ್ ನಗರ ಮತ್ತು ನಸೀರಾಬಾದ್ ಪ್ರದೇಶಗಳಲ್ಲಿ ಸ್ಫೋಟಗಳು ಕೇಳಿಬಂದವು ಎಂದು ಸ್ಥಳೀಯ ಮಾಧ್ಯಮಗಳು ಮತ್ತು ರಾಯಿಟರ್ಸ್ ವರದಿ ಮಾಡಿವೆ.

5-6 ಅಡಿ ಉದ್ದದ ಡ್ರೋನ್‌ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವ್ಯವಸ್ಥೆಯನ್ನು ಜ್ಯಾಮ್ ಮಾಡುವ ಮೂಲಕ ಡ್ರೋನ್ ನ್ನು ಹೊಡೆದುರುಳಿಸಲಾಗಿದೆ. ನಾಗರಿಕ ಮೂಲಸೌಕರ್ಯಕ್ಕೆ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿದ ಬಗ್ಗೆ ಇಲ್ಲಿಯವರೆಗೆ ವರದಿಯಾಗಿಲ್ಲ.

ಭಾರತದ ದಾಳಿಯ ನಂತರ, ಕರಾಚಿ, ಲಾಹೋರ್ ಮತ್ತು ಸಿಯಾಲ್‌ಕೋಟ್‌ನಲ್ಲಿರುವ ವಿಮಾನ ನಿಲ್ದಾಣಗಳಲ್ಲಿ ವಿಮಾನ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಾಕಿಸ್ತಾನದ ನಾಗರಿಕ ವಿಮಾನಯಾನ ಪ್ರಾಧಿಕಾರವು ಲಾಹೋರ್ ಮತ್ತು ಸಿಯಾಲ್‌ಕೋಟ್ ವಿಮಾನ ನಿಲ್ದಾಣಗಳಲ್ಲಿ ಸ್ಥಳೀಯ ಸಮಯ ಮಧ್ಯಾಹ್ನ 12 ಗಂಟೆಯವರೆಗೆ (GMT 07:00) ಸೇವೆಗಳು ಲಭ್ಯವಿರುವುದಿಲ್ಲ ಎಂದು ತಿಳಿಸಿದೆ. ಕರಾಚಿ ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತಗೊಳಿಸುವಿಕೆಯ ಹಿಂದಿನ ಕಾರಣಗಳ ಕುರಿತು ಯಾವುದೇ ಹೆಚ್ಚುವರಿ ವಿವರಗಳನ್ನು ನೀಡಲಾಗಿಲ್ಲ.

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರ (PoJK)ದಲ್ಲಿರುವ ಭಯೋತ್ಪಾದಕ ತರಬೇತಿ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ನಿನ್ನೆ ನಸುಕಿನ ಜಾವ ಸಂಘಟಿತ ದಾಳಿಯನ್ನು ನಡೆಸಿತು.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಈ ಕ್ರಮ ಕೈಗೊಂಡಿತು, ಭಾರತದ ದಾಳಿಯ ನಂತರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಪಾಕಿಸ್ತಾನ ಆಡಳಿತದ ಕಾಶ್ಮೀರದ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಕನಿಷ್ಠ 31 ಜನರು ಮೃತಪಟ್ಟು ಡಜನ್ ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT