ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ 
ವಿದೇಶ

'ಭಾರತ-ಪಾಕ್ ಸಂಘರ್ಷ ನಮಗೆ ಸಂಬಂಧಿಸಿದ್ದಲ್ಲ.. ಆದರೆ ಇದು ಪರಮಾಣು ಸಂಘರ್ಷವಾಗಬಾರದು': ಅಮೆರಿಕ ಉಪಾಧ್ಯಕ್ಷ JD Vance

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ “ನಮಗೆ ಸಂಬಂಧವಿಲ್ಲ”. ಆದರೂ ನಾನು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸುತ್ತಿದ್ದೇವೆ ಎಂದು ಹೇಳಿದರು.

ವಾಷಿಂಗ್ಟನ್‌: ಪಹಲ್ಗಾಮ್ ಉಗ್ರ ದಾಳಿ ಬಳಿಕ ಉಲ್ಬಣವಾಗಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ವಿಚಾರವಾಗಿ ಕಡ್ಡಿಮುರಿದಂತೆ ಉತ್ತರ ನೀಡಿರುವ ಅಮೆರಿಕ ಇದಕ್ಕೂ ನಮಗೂ ಸಂಬಂಧವಿಲ್ಲ ಎಂದು ಹೇಳಿದೆ.

ಈ ಬಗ್ಗೆ ಮಾತನಾಡಿರುವ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್, 'ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ “ನಮಗೆ ಸಂಬಂಧವಿಲ್ಲ”. ಆದರೂ ನಾನು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸುತ್ತಿದ್ದೇವೆ ಎಂದು ಹೇಳಿದರು.

'ಸ್ವಲ್ಪ ಮಟ್ಟಿಗೆ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರೋತ್ಸಾಹಿಸುವುದನ್ನು ನಾವು ಮಾಡಬಹುದಾಗಿದೆ. ಆದರೆ ನಾವು ಯುದ್ಧದ ಮಧ್ಯದಲ್ಲಿ ಭಾಗಿಯಾಗುವುದಿಲ್ಲ, ಅದು ಮೂಲಭೂತವಾಗಿ ನಮ್ಮ ವಿಷಯವಲ್ಲ.. ನಮಗೆ ಸಂಬಂಧಿಸಿದ್ದಲ್ಲ ಮತ್ತು ಅಮೆರಿಕದ ನಿಯಂತ್ರಣ ಸಾಮರ್ಥ್ಯದೊಂದಿಗೆ ಯಾವುದೇ ಸಂಬಂಧವಿಲ್ಲ' ಎಂದು ಜೆ.ಡಿ.ವ್ಯಾನ್ಸ್‌ ಹೇಳಿದ್ದಾರೆ.

ಶಸ್ತ್ರಾಸ್ತ್ರ ತ್ಯಜಿಸಿ ಎಂದು ಭಾರತಕ್ಕೆ ಹೇಳಲು ಸಾಧ್ಯವಿಲ್ಲ

ಇದೇ ವೇಳೆ 'ಅಮೆರಿಕವು ಭಾರತೀಯರಿಗೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ಹೇಳಲು ಸಾಧ್ಯವಿಲ್ಲ. ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲು ನಾವು ಹೇಳಲು ಸಾಧ್ಯವಿಲ್ಲ. ಆದ್ದರಿಂದ, ನಾವು ರಾಜತಾಂತ್ರಿಕ ಮಾರ್ಗಗಳ ಮೂಲಕ ಮಾತ್ರ ಈ ವಿಷಯವನ್ನು ಮುಂದುವರಿಸುತ್ತೇವೆ ಎಂದು ವ್ಯಾನ್ಸ್ ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಪರಮಾಣು ಸಂಘರ್ಷವಾಗಬಾರದು

ಅಂತೆಯೇ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ವಿಶಾಲವಾದ ಪ್ರಾದೇಶಿಕ ಯುದ್ಧ ಎಂದು ಹೇಳಿದ ವ್ಯಾನ್ಸ್, ಇದು ಪರಮಾಣು ಸಂಘರ್ಷವಾಗಿ ಬದಲಾಗಬಾರದು ಎಂಬುದು ನಮ್ಮ ಆಶಯ ಮತ್ತು ನಿರೀಕ್ಷೆಯಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಸದ್ಯಕ್ಕೆ, ಅದು ಸಂಭವಿಸುತ್ತದೆ ಎಂದು ನಾವು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ. ‌

ಯುದ್ಧ ನಿಲ್ಲಿಸಲು ಸಿದ್ದ ಎಂದಿದ್ದ ಟ್ರಂಪ್

‌ಈ ಮೊದಲು ಉಗ್ರರ ವಿರುದ್ಧದ ಭಾರತದ ಕಾರ್ಯಾಚರಣೆಯನ್ನು ಮುಯ್ಯಿಗೆ ಮುಯ್ಯಿ ಎಂದು ಬಣ್ಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಭಾರತ ಮತ್ತು ಪಾಕಿಸ್ಥಾನ ನಡುವಿನ ಉದ್ವಿಗ್ನ ಸ್ಥಿತಿಯನ್ನು ನಿಲ್ಲಿಸಲು ಸಹಾಯ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದರು. ಪ್ರತೀಕಾರದ ದಾಳಿಗಳನ್ನು ನಿಲ್ಲಿಸಿ. ನಿಮಗೇನಾದರೂ ಸಹಾಯ ಬೇಕಿದ್ದರೆ ನಾನಿದ್ದೇನೆ. ಭಾರತ ಮತ್ತು ಪಾಕಿಸ್ಥಾನ ಜತೆ ಉತ್ತಮ ಸಂಬಂಧವಿದೆ. ಅವರೆಡೂ ರಾಷ್ಟ್ರಗಳ ನಡುವಿನ ಉದ್ವಿಗ್ನತೆ ನಿಲ್ಲುವುದನ್ನು ನಾನು ನೋಡಲು ಬಯಸುತ್ತೇನೆ. ಇದಕ್ಕಾಗಿ ನಾನು ಸಹಾಯ ಮಾಡಲು ಸಾಧ್ಯವಾದರೆ, ಅದಕ್ಕೆ ನಾನು ಸಿದ್ಧನಿದ್ದೇನೆ ಎಂದು ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧದ ಕುರಿತ ಪ್ರಶ್ನೆಗೆ ಟ್ರಂಪ್‌ ಉತ್ತರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT