ಡೊನಾಲ್ಡ್ ಟ್ರಂಪ್ 
ವಿದೇಶ

ಈ ಕ್ಷಣದಿಂದಲೇ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಸಮ್ಮತಿ ಸೂಚಿಸಿವೆ: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್!

ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ.

ವಾಷ್ಟಿಂಗನ್: ಅಮೆರಿಕದ ಮಧ್ಯಸ್ಥಿಕೆ ವಹಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ. ಕಳೆದ ಮೂರು ದಿನಗಳಿಂದ ಸಂಘರ್ಷ ಪೀಡಿತ ಯುದ್ಧ ರಾಷ್ಟ್ರಗಳು ತಟಸ್ಥ ಸ್ಥಳದಲ್ಲಿ ಮಾತುಕತೆಗಳನ್ನು ಪ್ರಾರಂಭಿಸುತ್ತವೆ ಎಂದು ಅಮೆರಿಕ ಹೇಳಿದೆ.

ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಟ್ರಂಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಮೂಲಭೂತವಾಗಿ ನಮಗೆ ಸಂಬಂಧಿಸದ ಯುದ್ಧದಲ್ಲಿ ಅಮೆರಿಕ ಭಾಗಿಯಾಗುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್, ಸರ್ಕಾರವು ಈ ಪ್ರದೇಶದಲ್ಲಿ 'ಶಾಂತಿ ಮತ್ತು ಭದ್ರತೆ'ಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂದು ಹೇಳಿದೆ.

ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ, ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸುತ್ತಿದೆ ಎಂದು ದಾರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೈವಾಹಿಕ ಕಲಹ: ಬೆಂಗಳೂರಿನಲ್ಲಿ ಒಂದೇ ಕುಟುಂಬದ 7 ಮಂದಿಯನ್ನು ಭೀಕರ ಹತ್ಯೆ ಮಾಡಿದ ಕ್ಯಾಬ್ ಚಾಲಕ !

Iraq ವಾಯುಪ್ರದೇಶ ಮುಕ್ತ: ಅಮೆರಿಕಕ್ಕೆ ತೆರಳುವ ಪ್ರಯಾಣಿಕರಿಗೆ ಬಿಗ್ ರಿಲೀಫ್; ಮುಂಬೈ, ದೆಹಲಿಯಿಂದ Air India ನೇರ ವಿಮಾನ ಸೇವೆ ಪುನರಾರಂಭ..!

ಅಮೆರಿಕಕ್ಕೆ ಬಿಗ್ ಶಾಕ್; ಪರಮಾಣು ಸ್ಥಾವರಗಳ ಮೇಲಿನ ದಾಳಿಗೆ ಖಂಡನೆ, ಇರಾನ್ ಪರ ನಿಂತ ರಷ್ಯಾ; ಯುದ್ಧ ನಿಲ್ಲಿಸಲು ಸರ್ವಪ್ರಯತ್ನ ಎಂದ ಪುಟಿನ್..!

ಅಮೆರಿಕ ಚುನಾವಣೆಯಲ್ಲಿ ಹಿನ್ನಡೆ ಬೆನ್ನಲ್ಲೇ ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; ಯುದ್ಧ ಮತ್ತಷ್ಟು ಭೀಕರಗೊಳಿಸುವ ಸುಳಿವು, ಇಡೀ ದೇಶವನ್ನೇ ನಾಶಪಡಿಸುವ ಎಚ್ಚರಿಕೆ..!

ಕಬ್ಬು ಬೆಳೆಗಾರರ ಹೋರಾಟ ಅಂತ್ಯ, ಶುಕ್ರವಾರದಿಂದ ಕಾರ್ಖಾನೆಗಳು ಆರಂಭ: ರೈತ ಮುಖಂಡ ಚೂನಪ್ಪ ಪೂಜಾರಿ