ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ 
ವಿದೇಶ

'ಸದ್ಯಕ್ಕೆ' ಅಣ್ವಸ್ತ್ರ ಬಳಸಲ್ಲ..'; ಪಾಕಿಸ್ತಾನ ರಕ್ಷಣಾ ಸಚಿವ Khawaja Asif

ಈ ಅಣ್ವಸ್ತ್ರ ಕೇವಲ ಪ್ರದೇಶಕ್ಕೆ ಸೀಮಿತವಾಗಿಲ್ಲ, ಇದು ಹೆಚ್ಚು ವಿಸ್ತಾರವಾಗಬಹುದು ಎಂದು ನಾನು ಜಗತ್ತಿಗೆ ಹೇಳುತ್ತಿದ್ದೇನೆ... ಈ ವಿನಾಶ. ಭಾರತ ಸೃಷ್ಟಿಸುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ ನಮ್ಮ ಆಯ್ಕೆಗಳನ್ನು ಕಡಿಮೆ ಮಾಡಲಾಗುತ್ತಿದೆ..

ಇಸ್ಲಾಮಾಬಾದ್: ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ಭುಗಿಲೆದ್ದಿದ್ದು, ಸದ್ಯಕ್ಕೆ ಭಾರತದ ವಿರುದ್ಧ ಅಣ್ವಸ್ತ್ರಗಳನ್ನು ಬಳಸಲ್ಲ ಎಂದು ಪಾಕಿಸ್ತಾನ ಹೇಳಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗಿರುವಂತೆಯೇ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್, 'ಭಾರತ ಮತ್ತು ಪಾಕಿಸ್ತಾನಿ ಸೇನೆಗಳು ಪರಸ್ಪರರ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯು ಈಗಾಗಲೇ ಗಂಭೀರವಾಗಿರುವ ಘರ್ಷಣೆಯನ್ನು ಇನ್ನಷ್ಟು ಹೆಚ್ಚಿಸಿದೆ. ಆದಾಗ್ಯೂ ಈಗ ಪರಮಾಣು ಆಯ್ಕೆ ಸಿದ್ಧವಾಗಿಲ್ಲ. ಆದಾಗ್ಯೂ, ಪರಿಸ್ಥಿತಿ ಬಂದರೆ 'ವೀಕ್ಷಕರ' ಮೇಲೂ ಪರಿಣಾಮ ಬೀರುತ್ತದೆ" ಎಂದು ಹೇಳಿದ್ದಾರೆ.

ಜಿಯೋ ನ್ಯೂಸ್‌ ಜೊತೆ ಮಾತನಾಡಿರುವ ಖವಾಜಾ ಆಸಿಫ್, 'ಈ ಅಣ್ವಸ್ತ್ರ ಕೇವಲ ಪ್ರದೇಶಕ್ಕೆ ಸೀಮಿತವಾಗಿಲ್ಲ, ಇದು ಹೆಚ್ಚು ವಿಸ್ತಾರವಾಗಬಹುದು ಎಂದು ನಾನು ಜಗತ್ತಿಗೆ ಹೇಳುತ್ತಿದ್ದೇನೆ... ಈ ವಿನಾಶ. ಭಾರತ ಸೃಷ್ಟಿಸುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ ನಮ್ಮ ಆಯ್ಕೆಗಳನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಅಂದಹಾಗೆ ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳ ಕುರಿತು ಕಾರ್ಯಾಚರಣೆಯ ನಿರ್ಧಾರಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ಎನ್‌ಸಿಎ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel