ಬಂಡೆಯಿಂದ ಉರುಳಿಬಿದ್ದ ಬಸ್ 
ವಿದೇಶ

ಶ್ರೀಲಂಕಾ: 100 ಮೀ ಆಳಕ್ಕೆ ಉರುಳಿಬಿದ್ದ ಬಸ್; 21 ಮಂದಿ ಸಾವು

ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್, ದಕ್ಷಿಣ ಯಾತ್ರಾ ಸ್ಥಳವಾದ ಕತರಗಮದಿಂದ ವಾಯುವ್ಯ ಪಟ್ಟಣವಾದ ಕುರುನಗರಕ್ಕೆ ತೆರಳುತ್ತಿತ್ತು.

ಕೊಲಂಬೊ: ಶ್ರೀಲಂಕಾದಲ್ಲಿ ಭಾನುವಾರ ಪ್ರಯಾಣಿಕರ ಬಸ್ಸೊಂದು ಬಂಡೆಯಿಂದ ಉರುಳಿ ಬಿದ್ದ ಪರಿಣಾಮ ಕನಿಷ್ಠ 21 ಜನರು ಸಾವಿಗೀಡಾಗಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯ ಪ್ರಾಂತ್ಯದ ಕೋಟ್ಮಲೆಯಲ್ಲಿ ಬಸ್ ಚಾಲಕ ಗುಡ್ಡಗಾಡು ಪ್ರದೇಶದಲ್ಲಿ ಎಡ ತಿರುವು ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಈ ಅಪಘಾತ ಸಂಭವಿಸಿದೆ.

ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್, ದಕ್ಷಿಣ ಯಾತ್ರಾ ಸ್ಥಳವಾದ ಕತರಗಮದಿಂದ ವಾಯುವ್ಯ ಪಟ್ಟಣವಾದ ಕುರುನಗರಕ್ಕೆ ತೆರಳುತ್ತಿತ್ತು. ಬಸ್ಸಿನಲ್ಲಿ 75 ಪ್ರಯಾಣಿಕರು ಇದ್ದರು. ಈ ವೇಳೆ ಬಂಡೆಯಿಂದ 100 ಮೀಟರ್ ಆಳಕ್ಕೆ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ 21 ಜನರು ಸಾವಿಗೀಡಾಗಿದ್ದಾರೆ. ದುರಂತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಸಾರಿಗೆ ಮತ್ತು ಹೆದ್ದಾರಿಗಳ ಉಪ ಸಚಿವ ಪ್ರಸನ್ನ ಗುಣಸೇನ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಮಾರಣಾಂತಿಕ ಬಸ್ ಅಪಘಾತಗಳು ಸಾಮಾನ್ಯವಾಗಿವೆ. ಅಜಾಗರೂಕ ಚಾಲನೆ ಮತ್ತು ಕಳಪೆ ನಿರ್ವಹಣೆಯ ರಸ್ತೆಗಳಿಂದಾಗಿ ಹೆಚ್ಚಾಗಿ ಅಪಘಾತಗಳು ಸಂಭವಿಸುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ ಇಂಧನ ಕೇಂದ್ರಗಳ ಮೇಲೆ ದಾಳಿಯನ್ನು 'ಒಪ್ಪಲಾಗದು': ಅನಿಲ ಪೂರೈಕೆ ಸಮಸ್ಯೆ ಬಗ್ಗೆ ಭಾರತ ಕಳವಳ!

ಯುಗಾದಿ ಹಬ್ಬದಂದೇ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರಿನಲ್ಲಿ ಇಂದಿನ ದರವೆಷ್ಟು?

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ರೂ ನಷ್ಟ!

North Korea Election: ಇತಿಹಾಸದಲ್ಲೇ ಮೊದಲು; Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

KD Movie: Nora Fatehi ವಿರುದ್ಧ ಮುಸ್ಲಿಂ ಬೋರ್ಡ್ ಫತ್ವಾ ಜಾರಿ..!

SCROLL FOR NEXT