ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿ ಸೌರವ್ ಪ್ರಭಾಕರ್. 
ವಿದೇಶ

ಪೆನ್ಸಿಲ್ವೇನಿಯಾದಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವು

ವಾಹನದ ಮುಂಭಾಗದ ಸೀಟಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಯಾರ್ಕ್: ಪೆನ್ಸಿಲ್ವೇನಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕ್ಲೀವ್‌ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ಮಾನವ್ ಪಟೇಲ್ (20) ಮತ್ತು ಸೌರವ್ ಪ್ರಭಾಕರ್ (23) ಎಂದು ಗುರುತಿಸಲಾಗಿದೆ. ವಾಹನದ ಮುಂಭಾಗದ ಸೀಟಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರು ಮರಕ್ಕೆ ಡಿಕ್ಕಿ ಹೊಡೆದು, ಬಳಿಕ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮೃತರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದೆ.

ಈ ಕಷ್ಟದ ಸಮಯದಲ್ಲಿ ಅವರ ಕುಟುಂಬಗಳೊಂದಿಗೆ ಸಂತಾಪ ಸೂಚಿಸುತ್ತೇವೆಂದು ರಾಯಭಾರ ಕಚೇರಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ಕಚ್ಚಾ ತೈಲ ಆಮದು: ಭಾರತ ಸೇರಿ ಇತರ ದೇಶಗಳ ಮೇಲೆ ಶೇ.100ರಷ್ಟು ಸುಂಕ ಮಸೂದೆಗೆ ಅಮೆರಿಕ ಸಂಸತ್ತಿನಲ್ಲಿ ಮುನ್ನಡೆ

ಟೆಲಿಪ್ರಾಂಪ್ಟರ್ ಇಲ್ಲದೇ ಬಿಜೆಪಿ ನಾಯಕರು ವಂದೇ ಮಾತರಂ ಪೂರ್ಣ ಹಾಡಿದರೆ ರಾಜೀನಾಮೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ! ಅಕ್ಟೋಬರ್ 15 ರಿಂದ ಜಾರಿ

India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!

India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!