ಫ್ರೇಮ್ ಮಾಡಿದ ಫೋಟೋವೊಂದನ್ನು ಗಿಫ್ಟ್ ಆಗಿ ನೀಡಿದ ಪಾಕ್ ಸೇನಾ ಮುಖ್ಯಸ್ಥ 
ವಿದೇಶ

ಪ್ರಧಾನಿ ಶರೀಫ್ ಗೆ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಗಿಫ್ಟ್: ಪಾಕ್ ಸೇನಾ ಮುಖ್ಯಸ್ಥ ಮತ್ತೆ ಟ್ರೋಲ್ ಗೆ ಗುರಿ!

ಇದು ಆನ್ ಲೈನ್ ಬಳಕೆದಾರರ ಕಣ್ಣಿಗೆ ಬೀಳುತ್ತಿದ್ದಂತೆಯೇ ಇದು ನಾಲ್ಕು ವರ್ಷ ಹಳೆಯದಾದ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಎಂಬುದು ಕಂಡುಬಂದಿದೆ.

ಇಸ್ಲಾಮಾಬಾದ್‌: ಇತ್ತೀಚಿಗೆ ನಡೆದ ಸೇನಾ ಕಾರ್ಯಾಚರಣೆ ವೇಳೆಯಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿರುವುದಾಗಿ ಬೊಗಳೆ ಪ್ರಚಾರ ನಡೆಸುತ್ತಿರುವ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ಮುಜುಗರ ಎದುರಾಗಿದೆ.

ಹೌದು. ಹೈ ಪ್ರೊಫೈಲ್ ಔತಣ ಕೂಟದಲ್ಲಿ ಹಳೆಯದಾದ ಫ್ರೇಮ್ ಮಾಡಿದ ಫೋಟೋವೊಂದನ್ನು ಪ್ರಧಾನಿ ಶರೀಫ್‌ ಅವರಿಗೆ ಗಿಫ್ಟ್ ಆಗಿ ನೀಡಿದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಜನರಲ್ ಅಸಿಮ್ ಮುನೀರ್ ಅವರನ್ನು ಪಾಕಿಸ್ತಾನ ಸೇರಿದಂತೆ ವಿಶ್ವದಾದ್ಯಂತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಇದು ಹಳೆಯದಾದ ಚೀನಾದ ಮಿಲಿಟರಿ ಕಾರ್ಯಾಚರಣೆಯಂತೆ ತೋರುತ್ತದೆ. ಇದು ಆನ್ ಲೈನ್ ಬಳಕೆದಾರರ ಕಣ್ಣಿಗೆ ಬೀಳುತ್ತಿದ್ದಂತೆಯೇ ಇದು ನಾಲ್ಕು ವರ್ಷ ಹಳೆಯದಾದ ಚೀನಾ ಮಿಲಿಟರಿ ಕಾರ್ಯಾಚರಣೆಯ ಫೋಟೋ ಎಂಬುದು ಕಂಡುಬಂದಿದೆ. ಚೀನೀ ಪೀಪಲ್ಸ್ ಲಿಬರೇಶನ್ ಆರ್ಮಿ ಕಾರ್ಯಾಚರಣೆಯ ಫೋಟೋಗಳನನು ನೇರವಾಗಿ ತೆಗೆದುಹಾಕಲಾಗಿದೆ ಎಂದು ಹಲವಾರು ಬಳಕೆದಾರರು ಹೇಳಿದ್ದು, ಆಪರೇಷನ್‌ ಬನ್ಯಾನ್‌' ಕಾರ್ಯಾಚರಣೆ ಕುರಿತ ಪಾಕಿಸ್ತಾನದ ದೃಢತೆಯನ್ನು ಪ್ರಶ್ನಿಸುತ್ತಿದ್ದಾರೆ.

ಭಾರತದ ವಿರುದ್ಧ ಪಾಕ್ ಸೇನೆಯ ದಾಳಿಯದು ಎಂದು ವಿವರಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥರು ಪಿಎಂ ಶೆಹಬಾಜ್ ಷರೀಫ್ ಅವರಿಗೆ ಚೀನಾದ ಮಿಲಿಟರಿ ಕಾರ್ಯಾಚರಣೆಯ ಫೋಟೋವೊಂದನ್ನು ಗಿಫ್ಟ್ ಆಗಿ ನೀಡಿದ್ದಾರೆ. ಹೀಗಾಗಿ ಕೇವಲ ನಕಲಿ ಗೆಲುವಿನ ನಿರೂಪಣೆ ಮಾತ್ರವಲ್ಲದೇ ಅದರೊಂದಿಗೆ ನಕಲಿ ಫೋಟೋ ಕೂಡ ಇದೆ. ವಾಟ್ ಎ ಜೋಕ್ ಎಂದು ಎಕ್ಸ್ ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

ಪಾಕಿಸ್ತಾನದವರು ಅವರ ಮಿಲಿಟರಿ ಕಾರ್ಯಾಚರಣೆಯ ಮೂಲ ದೃಶ್ಯಗಳನ್ನು ಸಹ ತಯಾರಿಸಲು ಸಾಧ್ಯವಾಗಿಲ್ಲ ಎಂದು ಮತ್ತೋರ್ವ ಎಕ್ಸ್ ಬಳಕೆದಾರರು ವ್ಯಂಗ್ಯವಾಡಿದ್ದಾರೆ. ಒಟ್ಟಿನಲ್ಲಿ ಈ ಘಟನೆಯಿಂದಾಗಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್‌ ಮುನೀರ್‌ ಮತ್ತು ಪ್ರಧಾನಿ ಶೆಹಬಾಜ್‌ ಷರೀಫ್ ಇಬ್ಬರೂ ಭಾರೀ ಮುಜುಗರದ ಸನ್ನಿವೇಶವನ್ನು ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!