ಭೂತಾನ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ. 
ವಿದೇಶ

PM Modi in Bhutan: ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ, ಪಿತೂರಿ ನಡೆಸಿದವರಿಗೆ ತಕ್ಕ ಶಿಕ್ಷೆ ಖಚಿತ; Video

ದೆಹಲಿ ಸ್ಫೋಟದಿಂದ ಬಾಧಿತರಾದವರ ಕುಟುಂಬಗಳೊಂದಿಗೆ ಇಡೀ ರಾಷ್ಟ್ರವು ನಿಂತಿದೆ. ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರನ್ನೂ ಆಘಾತಗೊಳಿಸಿದೆ ಎಂದು ಹೇಳಿದ್ದಾರೆ.

ಥಿಂಪು(ಭೂತಾನ್): ನಿನ್ನೆ ಸೋಮವಾರ ಸಂಜೆ ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ಇಂದು ಭೂತಾನ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಅಪರಾಧಿಗಳಿಗೆ ಖಂಡಿತಾ ಶಿಕ್ಷೆಯಾಗುತ್ತದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇಂದಿನಿಂದ ಎರಡು ದಿನಗಳ ಕಾಲ ಭೂತಾನ್ ಭೇಟಿಯಲ್ಲಿರುವ ಪ್ರಧಾನಿ, ನಮ್ಮ ತನಿಖಾ ಸಂಸ್ಥೆಗಳು ಪಿತೂರಿಯ ಬೇರುಗಳನ್ನು ಆಳವಾಗಿ ಅಗೆಯುತ್ತವೆ. ದೆಹಲಿ ಸ್ಫೋಟದಿಂದ ಬಾಧಿತರಾದವರ ಕುಟುಂಬಗಳೊಂದಿಗೆ ಇಡೀ ರಾಷ್ಟ್ರವು ನಿಂತಿದೆ. ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರನ್ನೂ ಆಘಾತಗೊಳಿಸಿದೆ ಎಂದು ಹೇಳಿದ್ದಾರೆ.

ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ತೀವ್ರವಾಗಿ ದುಃಖಿಸಿದೆ. ಸಂತ್ರಸ್ತ ಕುಟುಂಬಗಳ ದುಃಖ ನನಗೆ ಅರ್ಥವಾಗುತ್ತದೆ. ಇಡೀ ರಾಷ್ಟ್ರ ಇಂದು ಅವರೊಂದಿಗೆ ನಿಂತಿದೆ ಎಂದರು.

ಈ ಘಟನೆಯ ತನಿಖೆ ನಡೆಸುತ್ತಿರುವ ಎಲ್ಲಾ ಸಂಸ್ಥೆಗಳೊಂದಿಗೆ ನಾನು ನಿನ್ನೆ ರಾತ್ರಿಯಿಡೀ ಸಂಪರ್ಕದಲ್ಲಿದ್ದೆ. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಹುಡುಕುವ ಪ್ರಯತ್ನ ಮಾಡುತ್ತಿದೆ. ಇದರ ಹಿಂದಿನ ಪಿತೂರಿಗಾರರನ್ನು ಬಿಡಲಾಗುವುದಿಲ್ಲ. ಹೊಣೆಗಾರರಾದ ಎಲ್ಲರಿಗೂ ಶಿಕ್ಷೆಯಾಗುವುದು ಖಚಿತ ಎಂದರು.

ದೆಹಲಿಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದೇಶದ ಇತರ ಭಾಗಗಳಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು, ಕೆಂಪು ಕೋಟೆ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ಗುಪ್ತಚರ ಬ್ಯೂರೋ ನಿರ್ದೇಶಕ ತಪನ್ ದೇಕಾ, ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ಮತ್ತು ಎನ್ಐಎ ಡಿಜಿ ಸದಾನಂದ ವಸಂತ್ ಡೇಟ್ ಭಾಗವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ ಕೂಡ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ, ಉನ್ನತ ಅಧಿಕಾರಿಗಳು ಸ್ಫೋಟದ ನಂತರದ ಪರಿಸ್ಥಿತಿಯ ಕುರಿತು ವಿವರವಾದ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT