ವಿದೇಶ

ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ: ಭಾರತದ ಉದ್ಯಮಿ ದಂಪತಿ ಸ್ಥಳದಲ್ಲೇ ಸಾವು

ಕುಟುಂಬವು ನಾಗ್ಪುರದ ಸೀತಾಬುಲ್ಡಿ ಫ್ಲೈಓವರ್ ಬಳಿಯ ಗುಲ್ಶನ್ ಪ್ಲಾಜಾ ಹೋಟೆಲ್ ಹೊಂದಿದೆ. ಇಟಲಿಯನ್ನು ತಲುಪುವ ಮೊದಲು ಅವರು ಸೆಪ್ಟೆಂಬರ್ 22 ರಂದು ಫ್ರಾನ್ಸ್‌ನಲ್ಲಿ ರಜಾ ದಿನಗಳನ್ನು ಕಳೆದಿದ್ದರು.

ರೋಮ್: ಇಟಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಬಲಿಯಾಗಿದ್ದಾರೆ.

ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು ಅವರ ಪತ್ನಿ ನಾಡಿರಾ ಗುಲ್ಶನ್ (47) ಮೃತಪಟ್ಟಿದ್ದಾರೆ.

ಇವರು ತಮ್ಮ ಮೂವರು ಮಕ್ಕಳೊಂದಿಗೆ (ಅರ್ಜೂ ಅಖ್ತರ್, ಶಿಫಾ ಅಖ್ತರ್ ಹಾಗೂ ಮಗ ಜಾಝೆಲ್‌ ಅಖ್ತರ್) ಪ್ರಯಾಣಿಸುತ್ತಿದ್ದರು. ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

ಕುಟುಂಬವು ನಾಗ್ಪುರದ ಸೀತಾಬುಲ್ಡಿ ಫ್ಲೈಓವರ್ ಬಳಿಯ ಗುಲ್ಶನ್ ಪ್ಲಾಜಾ ಹೋಟೆಲ್ ಹೊಂದಿದೆ. ಇಟಲಿಯನ್ನು ತಲುಪುವ ಮೊದಲು ಅವರು ಸೆಪ್ಟೆಂಬರ್ 22 ರಂದು ಫ್ರಾನ್ಸ್‌ನಲ್ಲಿ ರಜಾ ದಿನಗಳನ್ನು ಕಳೆದಿದ್ದರು.

ಏಷ್ಯನ್ ಮೂಲದ ಪ್ರವಾಸಿಗರನ್ನು ಹೊತ್ತ ವ್ಯಾನ್ ಮತ್ತು ಮಿನಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ ಮೂವರು ಜನರಲ್ಲಿ ನಾಗ್ಪುರ ದಂಪತಿಗಳು ಸೇರಿದ್ದಾರೆ. ಮಿನಿಬಸ್ ಚಾಲಕ ಮತ್ತು ಭಾರತದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿದ್ದಾರೆ.

ಈ ದಂಪತಿಯ ಮಗಳು ಅರ್ಜೂ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿದ್ದಾಳೆ. ಆಕೆಯನ್ನು ಸಿಯೆನಾದ ಲೀ ಸ್ಕಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಇನ್ನಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

'India MY Matrubhumi', ಜೈ ಶ್ರೀರಾಮ್ , ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!

ಸಂಭಾಲ್ ಮಸೀದಿ ನೆಲಸಮಕ್ಕೆ ತಡೆ ನೀಡಲು ಅಲಹಾಬಾದ್ ಹೈಕೋರ್ಟ್ ನಕಾರ

'ತಂಡದ ಹಿತಾಸಕ್ತಿಯೇ ಮುಖ್ಯ': ನಾಯಕತ್ವದಿಂದ ರೋಹಿತ್ ಶರ್ಮಾಗೆ ಕೊಕ್, ಕೊನೆಗೂ ಮೌನ ಮುರಿದ BCCI ಹೇಳಿದ್ದೇನು?

SCROLL FOR NEXT