ಇಸ್ಲಾಮಾಬಾದ್: ಗಾಜಾ ಶಾಂತಿ ಯೋಜನೆಯನ್ನು ವಿರೋಧಿಸಿ ಪಾಕಿಸ್ತಾನದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಮಾಧ್ಯಮ ವರದಿಗಳ ಪ್ರಕಾರ, ಪಾಕಿಸ್ತಾನದ ರಾಜಕೀಯ ಪಕ್ಷವಾದ ತೆಹ್ರೀಕ್-ಇ-ಲಬ್ಬಾಯಿಕ್ (ಟಿಎಲ್‌ಪಿ) ತನ್ನ 250ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ನಾಯಕರು ಪೊಲೀಸರ ಗುಂಡಿಗೆ ಬಲಿಯಾಗಿದ್ದು 1,500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದೆ. ಏತನ್ಮಧ್ಯೆ, ಪಾಕಿಸ್ತಾನದ ತೆಹ್ರೀಕ್-ಇ-ಲಬ್ಬಾಯಿಕ್ ಪಾಕಿಸ್ತಾನ್ (ಟಿಎಲ್‌ಪಿ) ನಾಯಕ ಹಫೀಜ್ ಸಾದ್ ಹುಸೇನ್ ರಿಜ್ವಿ ಅವರಿಗೆ ಹಲವು ಬಾರಿ ಗುಂಡು ಹಾರಿಸಲಾಗಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಕ್ಷದ ವಕ್ತಾರರ ಪ್ರಕಾರ, ರಿಜ್ವಿಗೆ ಮೂರು ಗುಂಡುಗಳು ತಗುಲಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.