ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು 
ವಿದೇಶ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ: 800ರ ಗಡಿ ದಾಟಿದ ಸಾವಿನ ಸಂಖ್ಯೆ 2,500 ಜನರಿಗೆ ಗಾಯ; Video

ಕೇವಲ 8 ಕಿಲೋಮೀಟರ್(5 ಮೈಲುಗಳು) ಆಳದಲ್ಲಿ ಕಂಪನವಾಗಿದ್ದು. ಇದು ಹೆಚ್ಚಿನ ಹಾನಿಯನ್ನುಂಟುಮಾಡಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಕಾಬೂಲ್, ಅಫ್ಘಾನಿಸ್ತಾನ: ತಾಲಿಬಾನ್ ಸರ್ಕಾರ ಸೋಮವಾರ ನೀಡಿದ ಅಂಕಿಅಂಶಗಳ ಪ್ರಕಾರ, ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸುಮಾರು 800 ಜನ ಸಾವನ್ನಪ್ಪಿದ್ದಾರೆ ಮತ್ತು 2,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ಭಾನುವಾರ ತಡರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪವು ನೆರೆಯ ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರ ಬಳಿಯ ಕುನಾರ್ ಪ್ರಾಂತ್ಯದ ಪಟ್ಟಣಗಳನ್ನು ನಡುಗಿಸಿದ್ದು, ವ್ಯಾಪಕ ಹಾನಿಯನ್ನುಂಟುಮಾಡಿದೆ.

ನಿನ್ನೆ ರಾತ್ರಿ 11:47ಕ್ಕೆ ಭೂಕಂಪ ಸಂಭವಿಸಿದ್ದು, ಜಲಾಲಾಬಾದ್‌ನ ಪೂರ್ವ-ಈಶಾನ್ಯಕ್ಕೆ 27ಕಿಲೋಮೀಟರ್(17 ಮೈಲುಗಳು) ದೂರದಲ್ಲಿ ಕೇಂದ್ರೀಕೃತವಾಗಿತ್ತು ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಕೇವಲ 8 ಕಿಲೋಮೀಟರ್(5 ಮೈಲುಗಳು) ಆಳದಲ್ಲಿ ಕಂಪನವಾಗಿದ್ದು. ಇದು ಹೆಚ್ಚಿನ ಹಾನಿಯನ್ನುಂಟುಮಾಡಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರು ಸೋಮವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಸಾವಿನ ಸಂಖ್ಯೆ ಕನಿಷ್ಠ 800ಕ್ಕೆ ಏರಿದ್ದು, 2,500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕುನಾರ್‌ನಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ ಎಂದು ಅವರು ಹೇಳಿದ್ದಾರೆ.

ಭೂಕಂಪದಿಂದ ನುರ್ಗಲ್, ಚಾವ್ಕೇ ಮತ್ತು ವಟಪುರಗಳು ಹೆಚ್ಚು ಹಾನಿಗೊಳಗಾಗಿವೆ. ರಕ್ಷಣಾ ಪ್ರಯತ್ನಗಳು ಮುಂದುವರಿದಿದ್ದು, ಭೂಕಂಪ ಪೀಡಿತ ಅಫ್ಘಾನಿಸ್ತಾನಕ್ಕೆ ಭಾರತ ಬೆಂಬಲ ನೀಡುವುದಾಗಿ ಭರವಸೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, “ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ಭಾರತವು ಪೀಡಿತರಿಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವು ಮತ್ತು ಪರಿಹಾರವನ್ನು ಒದಗಿಸಲು ಸಿದ್ಧವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕಾ ಮೇಲೆ ಭಾರತ ನಂಬಲಸಾಧ್ಯ ತೆರಿಗೆಯನ್ನು ವಿಧಿಸಿದ್ದು, ಇದು ವಿಶ್ವದಲ್ಲೇ ಅತ್ಯಧಿಕ: ಸುಂಕಾಸ್ತ್ರ ಕ್ರಮಕ್ಕೆ ಟ್ರಂಪ್ ಸಮರ್ಥನೆ

ನಿಮ್ಮ-ಭಾರತ ಸಂಬಂಧಕ್ಕೆ ನಮ್ಮ ತಕರಾರಿಲ್ಲ ಆದರೆ, ನಮ್ಮ ಬಾಂಧವ್ಯ ಗಟ್ಟಿಗೊಳಿಸೋಣ: ರಷ್ಯಾಗೆ ಪಾಕ್ ಮನವಿ

ಎರಡು ಗಂಟೆ ಮಳೆ - 20 ಕಿ.ಮೀ. ಟ್ರಾಫಿಕ್ ಜಾಮ್: ಮಿಲೇನಿಯಮ್ ಸಿಟಿ ನಗರಾಭಿವೃದ್ಧಿ ಟ್ರಿಪಲ್ ಎಂಜಿನ್ ಮಾದರಿ: BJP ಕಾಲೆಳೆದ ಕಾಂಗ್ರೆಸ್!

'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ: ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'

ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ "ಐತಿಹಾಸಿಕ ನಿರ್ಧಾರ"; ಐದು ಪಾಲಿಕೆಗೆ ಆಯುಕ್ತರ ನೇಮಕ

SCROLL FOR NEXT