ವಿದೇಶ

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್

"ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ಅವರು ಕ್ಷಮಿಸಿ ಎಂದು ಹೇಳಲಿದ್ದಾರೆ ಮತ್ತು ಡೊನಾಲ್ಡ್ ಟ್ರಂಪ್ ಜೊತೆ ಒಪ್ಪಂದ ಮಾಡಿಕೊಳ್ಳಲು ಪ್ರಯತ್ನಿಸಲಿದ್ದಾರೆ" ಎಂದು ಲುಟ್ನಿಕ್ ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ವಾಷಿಂಗ್ ಟನ್: ಅಮೆರಿಕ ಭಾರತೀಯ ಉತ್ಪನ್ನಗಳ ಮೇಲೆ ಶೇ.50 ರಷ್ಟು ತೆರಿಗೆ ವಿಧಿಸಿರುವುದು ನಂತರದ ದಿನಗಳಲ್ಲಿ ಭಾರತ ಜಾಗತಿಕ ಮಟ್ಟದಲ್ಲಿ ರಷ್ಯಾ, ಚೀನಾಗೆ ಹತ್ತಿರವಾಗಿರುವ ಬೆಳವಣಿಗೆಗಳ ಬಗ್ಗೆ ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ವಾಷಿಂಗ್ಟನ್ ಜೊತೆ ಮಾತುಕತೆಗೆ ಮರಳಲಿದೆ, ಕ್ಷಮೆಯಾಚಿಸುತ್ತದೆ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಒಪ್ಪಂದ ಮಾಡಿಕೊಳ್ಳಲು ಪ್ರಯತ್ನಿಸಲಿದೆ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ.

"ಒಂದು ಅಥವಾ ಎರಡು ತಿಂಗಳಲ್ಲಿ ಭಾರತ ಮಾತುಕತೆಗೆ ಬರಲಿದೆ ಎಂದು ನಾನು ಭಾವಿಸುತ್ತೇನೆ. ಅವರು ಕ್ಷಮಿಸಿ ಎಂದು ಹೇಳಲಿದ್ದಾರೆ ಮತ್ತು ಡೊನಾಲ್ಡ್ ಟ್ರಂಪ್ ಜೊತೆ ಒಪ್ಪಂದ ಮಾಡಿಕೊಳ್ಳಲು ಪ್ರಯತ್ನಿಸಲಿದ್ದಾರೆ" ಎಂದು ಲುಟ್ನಿಕ್ ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

"ನರೇಂದ್ರ ಮೋದಿ ಜೊತೆ ಹೇಗೆ ವ್ಯವಹರಿಸಬೇಕೆಂದು ಡೊನಾಲ್ಡ್ ಟ್ರಂಪ್ ನಿರ್ಧರಿಸುತ್ತಾರೆ, ಅದಕ್ಕಾಗಿಯೇ ಅವರು ಅಧ್ಯಕ್ಷರು" ಎಂದು ಅವರು ಹೇಳಿದರು. ಸಂದರ್ಶನದಲ್ಲಿ ಮಾತನಾಡಿರುವ ಅವರು, ಭಾರತ ರಿಯಾಯಿತಿ ದರದಲ್ಲಿ ರಷ್ಯಾದ ಕಚ್ಚಾ ತೈಲವನ್ನು ಖರೀದಿಸಿರುವುದನ್ನು ಲುಟ್ನಿಕ್ ಟೀಕಿಸಿದರು, ಇದು "ತಪ್ಪು" ಮತ್ತು "ಹಾಸ್ಯಾಸ್ಪದ" ಎಂದು ಹೇಳಿದ್ದಾರೆ.

ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾದ ಪ್ರಧಾನಿ ಕ್ಸಿ ಜಿನ್‌ಪಿಂಗ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸಭೆಯನ್ನು ಉಲ್ಲೇಖಿಸಿ ಭಾರತ ಯಾವ ಕಡೆ ಇರಬೇಕೆಂದು ನಿರ್ಧರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಇಸ್ಲಾಂಗೆ ವಿರುದ್ಧ': ದರ್ಗಾದ ಫಲಕದಲ್ಲಿನ ಅಶೋಕ ಲಾಂಛನ ವಿರೂಪಗೊಳಿಸಿದ ಸ್ಥಳೀಯರು!: Video

ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ: ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0 ಬಗ್ಗೆ Nirmala Sitharaman ಹೇಳಿದ್ದೇನು?

"GST ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿಸಲು ಬದ್ಧ": TATA ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ: ವಿವರ ಇಂತಿದೆ..

ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗ್ತಿದ್ದಾರಾ? ಟ್ರಂಪ್ ಸಲಹೆಗಾರನ ಹೇಳಿಕೆಗೆ ಭಾರತ ತಿರುಗೇಟು!

SCROLL FOR NEXT