ಪ್ರಧಾನಿ ಮೋದಿ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್ ಚಡಪಡಿಕೆ

ಅಮೆರಿಕಾ ಸುಂಕಾಸ್ತ್ರ ಬೆನ್ನಲ್ಲೇ ಭಾರತವು ಚೀನಾ ಜತೆಗಿನ ವಿವಾದ ಪರಿಹಾರಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಅಲ್ಲದೆ, ಅಮೆರಿಕ ಬೆದರಿಕೆ ಹೊರತಾಗಿಯೂ ರಷ್ಯಾ ಜತೆಗಿನ ಸಂಬಂಧ ಕಡಿದುಕೊಳ್ಳದೇ ಇರಲು ನಿರ್ಧರಿಸಿದೆ.

ವಾಷಿಂಗ್ಟನ್: ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಿಸಿ ಅಬ್ಬರಿಸುತ್ತಿದ್ದ ಅಮೆರಿಕಾ ಅಧ್ಯಕ್ಷ ಇದೀಗ ಮೆತ್ತಗಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಲು ಚಡಪಡಿಸುತ್ತಿದ್ದಾರೆ.

ರಷ್ಯಾದಿಂದ ತೈಲ ಖರೀದಿ ಮತ್ತು ಶೇ.50ರಷ್ಟು ತೆರಿಗೆ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಭಾರತದ ನಡುವಿನ 20 ವರ್ಷಗಳ ಆತ್ಮೀಯ ಸಂಬಂಧ ಬಹುತೇಕ ಹದಗೆಟ್ಟಿದೆ.

ಆ ಬಳಿಕ ಭಾರತವು ಚೀನಾ ಜತೆಗಿನ ವಿವಾದ ಪರಿಹಾರಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಅಲ್ಲದೆ, ಅಮೆರಿಕ ಬೆದರಿಕೆ ಹೊರತಾಗಿಯೂ ರಷ್ಯಾ ಜತೆಗಿನ ಸಂಬಂಧ ಕಡಿದುಕೊಳ್ಳದೇ ಇರಲು ನಿರ್ಧರಿಸಿದೆ.

ಇದರ ಬೆನ್ನಲ್ಲೇ ಎಸ್‌ಒ ಶೃಂಗದಲ್ಲಿ ಪುಟಿನ್ ಕ್ಸಿಮತ್ತು ಮೋದಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಶಕ್ತಿ ಪ್ರದರ್ಶನ ಮಾಡಿದ್ದರು. ವಿರೋಧಿಗಳ ಒಗ್ಗಟ್ಟು ಟ್ರಂಪ್ ಅವರನ್ನು ವಿಚಲಿತ ಮಾಡಿದ್ದು, ಇದೀಗ ಟ್ರಂಪ್ ಅವರು ಮೋದಿಯವರ ಕುರಿತು ಮೃದುಧೋರಣೆ ತೋರುತ್ತಿದ್ದಾರೆ.

ಈ ಹಿಂದೆ ಮೋದಿ ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆಂದು ಹೇಳಿದ್ದ ಟ್ರಂಪ್ ಅವರು, ಇದೀಗ ಆತ್ಮೀಯ ಸ್ನೇಹಿತನೊಂದಿಗೆ ಮಾತನಾಡಲು ಎದುರು ನೋಡುತ್ತಿದ್ದೇನೆಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ರೂತ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಎರಡೂ ರಾಷ್ಟ್ರಗಳ ನಡುವಿನ ವ್ಯಾಪಾರ ಅಡೆತಡೆಗಳನ್ನು ಪರಿಹರಿಸಲು ಭಾರತ ಮತ್ತು ಅಮೆರಿಕ ಮಾತುಕತೆಗಳನ್ನು ಮುಂದುವರಿಸುತ್ತಿವೆ ಎಂದು ಘೋಷಿಸಲು ಸಂತೋಷವಾಗಿದೆ. ಮುಂಬರುವ ವಾರಗಳಲ್ಲಿ ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ಮೋದಿಯವರೊಂದಿಗೆ ಮಾತನಾಡಲು ನಾನು ಎದುರು ನೋಡುತ್ತಿದ್ದೇನೆಂದ ಹೇಳಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಟ್ರಂಪ್ ಅವರು, ನಾನು ಯಾವಾಗಲೂ (ನರೇಂದ್ರ) ಮೋದಿ ಅವರೊಂದಿಗೆ ಸ್ನೇಹಿತನಾಗಿರುತ್ತೇನೆ. ಅವರು ಒಬ್ಬ ಉತ್ತಮ ಹಾಗೂ ಅಧ್ಬುತ ಪ್ರಧಾನಿ. ಆದರೆ ಈ ನಿರ್ದಿಷ್ಟ ಕ್ಷಣದಲ್ಲಿ ಅವರು ಮಾಡುತ್ತಿರುವುದು ನನಗೆ ಇಷ್ಟವಿಲ್ಲ. ಆದರೆ ಭಾರತ ಮತ್ತು ಅಮೆರಿಕ ವಿಶೇಷ ಸಂಬಂಧವನ್ನು ಹೊಂದಿವೆ. ಈ ಬಗ್ಗೆ ಚಿಂತಿಸಲು ಏನೂ ಇಲ್ಲ. ಪ್ರಸ್ತುತ ಪರಿಸ್ಥಿತಿ ಕ್ಷಣಿಕವಷ್ಟೇ.

ನಾವು ಭಾರತವನ್ನು ಕಳೆದುಕೊಂಡಿಲ್ಲ. ಭಾರತ ರಷ್ಯಾದಿಂದ ದೊಡ್ಡ ಪ್ರಮಾಣದ ತೈಲವನ್ನು ಖರೀದಿಸುತ್ತಿದೆ. ಅದು ನಮಗೆ ಬಹಳ ನಿರಾಶೆ ತಂದಿದೆ. ಹೀಗಾಗಿ ಅದನ್ನು ಅವರಿಗೆ ತಿಳಿಸಲು ದೊಡ್ಡ ರೀತಿಯ ಸುಂಕವನ್ನು ವಿಧಿಸಿದ್ದೇವೆ. ನಿಮಗೆ ತಿಳಿದಿರುವಂತೆ ನಾನು ಭಾರತದ ಪ್ರಧಾನಮಂತ್ರಿ (ನರೇಂದ್ರ ಮೋದಿ) ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. 2 ತಿಂಗಳ ಹಿಂದೆ ಮೋದಿ ಅಮೆರಿಕಾದಲ್ಲಿದ್ದರು. ರೋಸ್ ಗಾರ್ಡನ್ ನಲ್ಲಿ ನಾವಿಬ್ಬರೂ ಪತ್ರಿಕಾಗೋಷ್ಠಿ ನಡೆಸಿದ್ದೆವು ಎಂದು ತಿಳಿಸಿದ್ದರು.

ಟ್ರಂಪ್ ಹೇಳಿಕೆ ಬೆನ್ನಲ್ಲೇ ಮೋದಿಯವರೂ ಪ್ರತಿಕ್ರಿಯೆ ನೀಡಿದ್ದರು. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾವನೆಗಳು ಮತ್ತು ನಮ್ಮ ಸಂಬಂಧಗಳ ಬಗ್ಗೆ ಅವರ ಸಕಾರಾತ್ಮಕ ಮೌಲ್ಯಮಾಪನವನ್ನು ನಾನು ತುಂಬಾ ಗೌರವಿಸುತ್ತೇನೆ. ಅವರ ಭಾವನೆಯು ಸಂಪೂರ್ಣವಾಗಿ ಪರಸ್ಪರ ಪೂರಕವಾಗಿದೆ. ಭಾರತ ಮತ್ತು ಅಮೆರಿಕಗಳು ಬಹಳ ಸಕಾರಾತ್ಮಕ ಮತ್ತು ಭವಿಷ್ಯದ ದೃಷ್ಟಿಕೋನದ ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿವೆ ಎಂದು ಹೇಳಿದ್ದರು.

ಪ್ರಧಾನಿ ಮೋದಿ ಅವರು ಡೊನಾಲ್ಡ್ ಟ್ರಂಪ್ ಮತ್ತು POTUS (ಯುಎಸ್ ಅಧ್ಯಕ್ಷ) ಅವರನ್ನು ಟ್ಯಾಗ್ ಮಾಡಿ ಈ ಪೋಸ್ಟ್ ಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

ನೇಪಾಳದ ದಂಗೆ - ಇದು ಭಾರತ ಸ್ನೇಹಿ, ಚೀನಾ ವಿರೋಧಿ ಅಂದುಕೊಳ್ಳುವ ಮುಂಚೆ ಗಮನಿಸಬೇಕಾದ ಆಯಾಮಗಳು! (ತೆರೆದ ಕಿಟಕಿ)

'ಕಣ್ಣೀರಿನೊಂದಿಗೆ ಡ್ಯಾನ್ಸ್ ಮಾಡಲು ಸಾಧ್ಯವಿಲ್ಲ': ಪ್ರಧಾನಿ ಮೋದಿ ಸ್ವಾಗತಕ್ಕೆ ಕುಕಿ ಸಮುದಾಯ ವಿರೋಧ

'ನೇಪಾಳ ಪರಿಸ್ಥಿತಿ ನೋಡಿ': AAP ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ FIR ದಾಖಲಿಸಿದ್ದಕ್ಕೆ ಮುಫ್ತಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ!

SCROLL FOR NEXT