ತೈವಾನ್ ನಲ್ಲಿ ಚಂಡ ಮಾರುತ 
ವಿದೇಶ

ತೈವಾನ್‌ನಲ್ಲಿ 'ರಾಗಸ' ಚಂಡಮಾರುತದ ಅಬ್ಬರ: 14 ಸಾವು, 124 ಮಂದಿ ನಾಪತ್ತೆ

ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೈಪೆ: ತೈವಾನ್‌ನಲ್ಲಿ ಸಂಭವಿಸಿದ ರಾಗಸಾ ( ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಾಗಸ’ ಚಂಡಮಾರುತ ಮಂಗಳವಾರ ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ. ಚಂಡಮಾರುತ ಬುಧವಾರ ಹಾಂಗ್ ಕಾಂಗ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಚೀನಾದ ದಕ್ಷಿಣ ಭಾಗದ ಕನಿಷ್ಠ 10 ನಗರಗಳಲ್ಲಿ ಕಚೇರಿಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್