ನೆತನ್ಯಾಹು- ಡೊನಾಲ್ಡ್ ಟ್ರಂಪ್ 
ವಿದೇಶ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

ಹಮಾಸ್‌ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಕದನ ವಿರಾಮ ಒಪ್ಪಂದಕ್ಕೆ ಹಮಾಸ್ ಸಹಿ ಹಾಕಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡುತ್ತಿದ್ದೇವೆ.

ವಾಷಿಂಗ್ಟನ್: ಹಮಾಸ್ ಗಾಜಾ ಕದನ ವಿರಾಮ ಒಪ್ಪಂದಕ್ಕೆ ಪ್ರತಿಕ್ರಿಯಿಸಲು ಟ್ರಂಪ್ ಮೂರ್ನಾಲ್ಕು ದಿನಗಳ ಗಡುವು ನೀಡಿದ್ದಾರೆ. ಅಷ್ಟರೊಳಗೆ ಬಂಡುಕೋರರು ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು, ಸಂಪೂರ್ಣವಾಗಿ ನಿಶ್ಯಸ್ತ್ರಗೊಳಿಸಬೇಕು ಮತ್ತು ಭವಿಷ್ಯದ ಸರ್ಕಾರದಲ್ಲಿ ಯಾವುದೇ ಪಾತ್ರದಿಂದ ಹೊರಗಿರಬೇಕು ಎಂದು ಟ್ರಂಪ್ ಪ್ರಸ್ತಾಪಿಸಿದ್ದಾರೆ.

ಗಡುವಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಮೂರ್ನಾಲ್ಕು ದಿನಗಳ ಸಮಾಯವಕಾಶವಿದೆ. ಹಮಾಸ್‌ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಕದನ ವಿರಾಮ ಒಪ್ಪಂದಕ್ಕೆ ಹಮಾಸ್ ಸಹಿ ಹಾಕಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡುತ್ತಿದ್ದೇವೆ. ಒಂದು ವೇಳೆ ಸಹಿ ಹಾಕದಿದ್ದಲ್ಲಿ ಇದು ಅತ್ಯಂತ ದು:ಖಕರವಾಗಿ ಅಂತ್ಯವಾಗಲಿದೆ ಎಂದರು.

ಹಮಾಸ್ ಉಗ್ರಗಾಮಿ ಸಂಘಟನೆಯ ನಿಶ್ಯಸ್ತ್ರೀಕರಣಕ್ಕೆ ಕರೆ ನೀಡುವ ಗಾಜಾ ಶಾಂತಿ ಒಪ್ಪಂದವನ್ನು ಒಪ್ಪಿಕೊಳ್ಳದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

"ನಮಗೆ ಒಂದು ಸಹಿಯ ಅಗತ್ಯವಿದೆ. ಅವರು ಸಹಿ ಮಾಡದಿದ್ದರೆ ನರಕಕ್ಕೆ ದಾರಿ ತೋರಿಸ್ತಿವಿ. ತಮ್ಮ ಒಳ್ಳೆಯದಕ್ಕಾಗಿ ಅವರು ಸಹಿ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಟ್ರಂಪ್ ವರ್ಜೀನಿಯಾದ ಕ್ವಾಂಟಿಕೋದಲ್ಲಿ ಯುಎಸ್ ಜನರಲ್ ಗಳು ಹಾಗೂ ಅಡ್ಮಿರಲ್‌ಗಳಿಗೆ ಹೇಳಿದರು.

ಹಮಾಸ್ ತನ್ನ ದೇಶ ಹಾಗೂ ವಿದೇಶದಲ್ಲಿರುವ ರಾಜಕೀಯ ಮತ್ತು ಮಿಲಿಟರಿ ನಾಯಕರೊಂದಿಗೆ ಸಮಾಲೋಚನೆ ಆರಂಭಿಸಿದೆ ಎಂದು ಪ್ಯಾಲೇಸ್ಟಿನಿಯನ್ ಮೂಲವೊಂದು AFP ಗೆ ತಿಳಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಅವರನ್ನು ಟ್ರಂಪ್ ಭೇಟಿಯಾಗಿ ಗಾಜಾದಲ್ಲಿ ಶಾಂತಿ ಯೋಜನೆ ಪ್ರಸ್ತಾಪಿಸಿದ ನಂತರ ಈ ಬೆಳವಣಿಗೆಯಾಗಿದೆ.

ಗಾಜಾದಲ್ಲಿ ಯುದ್ಧ ಕೊನೆಗೊಳಿಸಲು ಟ್ರಂಪ್ ಯೋಜನೆ ಬೆಂಬಲಿಸುವುದಾಗಿ ನೆತನ್ಯಾಹು ಹೇಳಿದ್ದಾರೆ. ಒಂದು ವೇಳೆ ಹಮಾಸ್ ನಿರಾಕರಿಸಿದರೆ ಅದಕ್ಕೆ ಪ್ರತ್ಯುತ್ತರವಾಗಿ ತಕ್ಕ ಉತ್ತರ ನೀಡಲಾಗುವುದು, ಹಮಾಸ್ ನಿರ್ಮೂಲನೆ ಕೆಲಸವನ್ನು ಪೂರ್ಣಗೊಳಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?