ಇರಾನ್ ಮೇಲೆ ದಾಳಿಯ ಚಿತ್ರ 
ವಿದೇಶ

ಇರಾನ್ ಮೇಲೆ ದಾಳಿ ಪರಮಾಣು ದುರಂತಕ್ಕೆ ಕಾರಣವಾಗಬಹುದು: WHO ಮುಖ್ಯಸ್ಥರ ಕಳವಳ

ದಾಳಿಯಿಂದ ಪರಮಾಣು ದುರಂತಕ್ಕೆ ಕಾರಣವಾಗಬಹುದು ಎಂದು ಘೆಬ್ರೆಯೆಸಸ್ ಹೇಳಿದ್ದು, ತಲೆಮಾರುಗಳ ಮೇಲಿನ ಆರೋಗ್ಯದ ಪರಿಣಾಮ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಸುಮಾರು 38ಕ್ಕೆ ದಿನಕ್ಕೆ ಕಾಲಿಟ್ಟಿರುವಂತೆಯೇ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಭಾನುವಾರ ಇರಾನ್‌ನಲ್ಲಿನ ಪರಮಾಣು ಕೇಂದ್ರಗಳ ಸುರಕ್ಷತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ದಾಳಿಯಿಂದ ಪರಮಾಣು ದುರಂತಕ್ಕೆ ಕಾರಣವಾಗಬಹುದು ಎಂದು ಘೆಬ್ರೆಯೆಸಸ್ ಹೇಳಿದ್ದು, ತಲೆಮಾರುಗಳ ಮೇಲಿನ ಆರೋಗ್ಯದ ಪರಿಣಾಮ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು ಇರಾನ್‌ನಲ್ಲಿನ ಪರಮಾಣು ಕೇಂದ್ರಗಳ ಸುರಕ್ಷತೆಯ ಕುರಿತು ಮತ್ತೊಮ್ಮೆ ಕಳವಳ ವ್ಯಕ್ತಪಡಿಸುತ್ತೇನೆ. ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರದ ಮೇಲಿನ ದಾಳಿಯು ಪರಮಾಣು ದುರಂತಕ್ಕೆ ಕಾರಣವಾಗಬುಹು ಎಂದಿದ್ದಾರೆ.

ತಲೆ ತಲೆಮಾರುಗಳ ಜನಾಂಗದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.ಹೆಚ್ಚುತ್ತಿರುವ ಸಂಘರ್ಷ ಪ್ರತಿದಿನ ಬೆದರಿಕೆಯನ್ನು ಹೆಚ್ಚಿಸುತ್ತಿದ್ದು, ನಾವು ಈಗ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಬೇಕು. ಶಾಂತಿಯೇ ಅತ್ಯುತ್ತಮ ಔಷಧ ಎಂದಿದ್ದಾರೆ.

ಅಮೆರಿಕ ಮತ್ತು ಇಸ್ರೇಲ್ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿ, ಸ್ಥಾವರಕ್ಕೆ ಸಂಬಂಧಿಸಿದ ಕಟ್ಟಡಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಈ ದಾಳಿಯ ಬೆನ್ನಲ್ಲೇ ಇರಾನ್ ಅಮೆರಿಕ ಮತ್ತು ಇಸ್ರೇಲ್‌ಗೆ ಎಚ್ಚರಿಕೆ ನೀಡಿದೆ.

ಅಮೆರಿಕ ಮತ್ತು ಇಸ್ರೇಲ್ ಇರಾನ್‌ನ ಬುಶೆಹ್ರ್ ಪರಮಾಣು ವಿದ್ಯುತ್ ಸ್ಥಾವರವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿ, ಸ್ಥಾವರಕ್ಕೆ ಸಂಬಂಧಿಸಿದ ಕಟ್ಟಡಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಆದ ನಾಲ್ಕನೇ ಘಟನೆಯಾಗಿದೆ. IAEA ಯ ಮಹಾನಿರ್ದೇಶಕ ರಾಫೆಲ್ ಮರಿಯಾನೋ ಗ್ರಾಸ್ಸಿ ಕೂಡಾ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ

ರಾತ್ರಿ ಇರಾನ್ ಮೇಲೆ ಮತ್ತೆ ದಾಳಿ: ಅಮೆರಿಕ ಅಧ್ಯಕ್ಷ ಟ್ರಂಪ್

ಸ್ವಪಕ್ಷದವರಿಂದಲೇ Congress ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿಕೆ ಹರಿಪ್ರಸಾದ್​​ಗೆ ದೂರು

ಕರ್ನಾಟಕದಲ್ಲಿ ಶೇ.80ಕ್ಕೂ ಹೆಚ್ಚು SIR ಫಾರಂಗಳನ್ನು ವಿತರಿಸಲಾಗಿದೆ: CEO ಅನ್ಬುಕುಮಾರ್

ತಾಳ್ಮೆ ಕಳೆದುಕೊಂಡ ಮಮತಾ ಬ್ಯಾನರ್ಜಿ: ತನ್ನದೇ ಪಕ್ಷದ ಕಾರ್ಯಕರ್ತನ ಕಪಾಳಕ್ಕೆ ಬಾರಿಸಿದ ದೀದಿ, Video!