ವಿದೇಶ

ಕದನ ವಿರಾಮ ನಮಗಲ್ಲ: ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ; 300ಕ್ಕೂ ಹೆಚ್ಚು ಸಾವು, 1200 ಮಂದಿಗೆ ಗಾಯ! Video

ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಲೆಬನಾನ್ ನ ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ಹಲವಾರು ದಾಳಿಗಳನ್ನು ನಡೆಸಿದೆ. ಪೂರ್ವ ಸೂಚನೆ ಇಲ್ಲದೆ ಹಲವಾರು ಜನನಿಬಿಡ ವಾಣಿಜ್ಯ ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ.

ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಲೆಬನಾನ್ ನ ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ಹಲವಾರು ದಾಳಿಗಳನ್ನು ನಡೆಸಿದೆ. ಪೂರ್ವ ಸೂಚನೆ ಇಲ್ಲದೆ ಹಲವಾರು ಜನನಿಬಿಡ ವಾಣಿಜ್ಯ ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ. ಈ ದಾಳಿಯಲ್ಲಿ 300 ಜನರು ಸಾವನ್ನಪ್ಪಿದ್ದು 1200 ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮಕ್ಕೆ ಇಸ್ರೇಲ್ ಬೆಂಬಲ ಸೂಚಿಸಿದರೂ, ಈ ವಿರಾಮ ಎಲ್ಲ ಪ್ರದೇಶಗಳಿಗೂ ಅನ್ವಯಿಸುವುದಿಲ್ಲ ಎಂಬ ಸಂದೇಶವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೀಡಿದ್ದರು. ಇದರ ಬೆನ್ನಲ್ಲೇ ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾ ವಿರುದ್ಧದ ಇಸ್ರೇಲ್‌ನ ಕಾರ್ಯಾಚರಣೆಗಳು ಮುಂದುವರಿಸಿದೆ. ಲೆಬನಾನ್ ನಲ್ಲಿ 100ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇಸ್ರೇಲ್ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ದಾಳಿಯಲ್ಲಿ ಬೈರುತ್ ನಲ್ಲೇ 153 ಜನರು ಸಾವನ್ನಪ್ಪಿದ್ದು 950ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಲೆಬನಾನ್ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿರುವ ಇರಾನ್ ಕೂಡಲೇ ದಾಳಿಗಳನ್ನು ನಿಲ್ಲಿಸುವಂತೆ ಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!