ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್  
ವಿದೇಶ

ಅಮೆರಿಕ-ಇರಾನ್ ನಡುವೆ ಸಂಧಾನ ಯಶಸ್ವಿ: ಏಪ್ರಿಲ್ 10ಕ್ಕೆ ಇಸ್ಲಾಮಾಬಾದ್ ನಲ್ಲಿ ಮಹತ್ವದ ಮಾತುಕತೆ; ಪಾಕಿಸ್ತಾನದಿಂದ ಅಧಿಕೃತ ಆಹ್ವಾನ!

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮಾಹಿತಿ ಹಂಚಿಕೊಂಡಿದ್ದಾರೆ.

ಇಸ್ಲಾಮಾಬಾದ್: ಪಶ್ಚಿಮ ಏಷ್ಯಾದಲ್ಲಿ ಕಳೆದ 40 ದಿನಗಳಿಂದ ನಡೆಯುತ್ತಿದ್ದ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ ಸಿಕ್ಕಿದೆ. ಅಮೆರಿಕ ಮತ್ತು ಇರಾನ್ ನಡುವೆ ಯಶಸ್ವಿ ಸಂಧಾನವಾಗಿದ್ದು, ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ (ಏ.10) ಮಾತುಕತೆಗೆ ಉಭಯ ರಾಷ್ಟ್ರಗಳಿಗೆ ಪಾಕಿಸ್ತಾನ ಬುಧವಾರ ಅಧಿಕೃತ ಆಹ್ವಾನ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮಾಹಿತಿ ಹಂಚಿಕೊಂಡಿದ್ದಾರೆ.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ, ತಮ್ಮ ಮಿತ್ರರಾಷ್ಟ್ರಗಳೊಂದಿಗೆ ಲೆಬನಾನ್ ಸೇರಿದಂತೆ ಇತರೆಡೆ ತಕ್ಷಣದಿಂದಲೇ ಕದನ ವಿರಾಮ ಜಾರಿಗೆ ಒಪ್ಪಿಕೊಂಡಿವೆ. ಎಲ್ಲಾ ವಿವಾದಗಳನ್ನು ಇತ್ಯರ್ಥಪಡಿಸಲು ನಿರ್ಣಾಯಕ ಒಪ್ಪಂದ ಮಾಡಿಕೊಳ್ಳುವ ಉದ್ದೇಶದಿಂದ ನೇರ ಮಾತುಕತೆಗಾಗಿ ಪಾಕಿಸ್ತಾನ ಎರಡೂ ದೇಶಗಳ ನಿಯೋಗಗಳನ್ನು ಏಪ್ರಿಲ್ 10 ರಂದು ಇಸ್ಲಾಮಾಬಾದ್‌ಗೆ ಆಹ್ವಾನಿಸಿದೆ ಎಂದು ತಿಳಿಸಿದ್ದಾರೆ.

ಉದ್ದೇಶಿತ ಇಸ್ಲಾಮಾಬಾದ್ ಮಾತುಕತೆಯು ಈ ಪ್ರದೇಶದಲ್ಲಿ ಸುಸ್ಥಿರ ಶಾಂತಿ ಮತ್ತು ಸ್ಥಿರತೆಯನ್ನು ಸಾಧಿಸಲು ನೆರವಾಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಫೆಬ್ರವರಿ 28 ರಂದು ಪ್ರಾರಂಭವಾದ ಸಂಘರ್ಷವನ್ನು ತಗ್ಗಿಸಲು ಪಾಕಿಸ್ತಾನದ ರಾಜತಾಂತ್ರಿಕ ಪ್ರಯತ್ನಗಳ ನಂತರ ಈ ಬೆಳವಣಿಗೆಯಾಗಿದೆ. ಇರಾನ್ ನಾಗರಿಕತೆಯನ್ನು ನಾಶಪಡಿಸುವುದಾಗಿ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಕದನ ವಿರಾಮ ಒಪ್ಪಂದ ಜಾರಿಯಾಗಿದೆ ಎಂದು ಪಾಕಿಸ್ತಾನದ ಪ್ರಧಾನಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್