ಸಂಗ್ರಹ ಚಿತ್ರ 
ವಿದೇಶ

West-Asia war: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕಾ-ಇರಾನ್ ಒಪ್ಪಿಗೆ; ಟೆಹ್ರಾನ್ ಮುಂದಿಟ್ಟಿರುವ ಡಿಮ್ಯಾಂಡ್ ಗಳು ಇವೇ ನೋಡಿ..!

ಇರಾನ್‌ನಿಂದ 10 ಅಂಶಗಳ ಪ್ರಸ್ತಾಪವನ್ನು ಸ್ವೀಕರಿಸಲಾಗಿದ್ದು, ಅದು ಮಾತುಕತೆಗೆ ಸೂಕ್ತವಾದ ಆಧಾರವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಎರಡು ವಾರಗಳ ಕಾಲ ಕದನ ವಿರಾಮಕ್ಕೆ ಅಮೆರಿಕ ಮತ್ತು ಇರಾನ್ ಒಪ್ಪಿಕೊಂಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ನಿರ್ಧಾರವನ್ನು ಘೋಷಿಸಿದ್ದಾರೆ.

ಕದನ ವಿರಾಮ ಕುರಿತು ಸಾಮಾಜಿಕ ಮಾಧ್ಯಮ ‘ಟ್ರೂಥ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ‘ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಜನರಲ್‌ ಅಸಿಮ್‌ ಮುನೀರ್ ‌ಅವರೊಂದಿಗಿನ ಮಾತುಕತೆಯ ಹಾಗೂ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲು ಇರಾನ್ ಒಪ್ಪುವ ಷರತ್ತಿನ ಆಧಾರದ ಮೇಲೆ ಇಂದು (ಮಂಗಳವಾರ) ರಾತ್ರಿ ಇರಾನ್ ಮೇಲೆ ನಡೆಸಬೇಕಿದ್ದ ವಿನಾಶಕಾರಿ ದಾಳಿಯನ್ನು ತಡೆಹಿಡಿಯಲು ನಾನು ನಿರ್ಧರಿಸಿದ್ದೇನೆಂದು ಹೇಳಿದ್ದಾರೆ.

‘ಇರಾನ್ ಮೇಲಿನ ಬಾಂಬ್ ದಾಳಿ ಮತ್ತು ಆಕ್ರಮಣವನ್ನು ಎರಡು ವಾರಗಳ ಕಾಲ ತಡೆಹಿಡಿಯಲು ನಾನು ಒಪ್ಪುತ್ತೇನೆ. ಇದು ಉಭಯ ದೇಶಗಳ ನಡುವಿನ ಕದನ ವಿರಾಮವಾಗಿರಲಿದೆ ಎಂದು ತಿಳಿಸಿದ್ದಾರೆ.

ಇರಾನ್‌ನಿಂದ 10 ಅಂಶಗಳ ಪ್ರಸ್ತಾಪವನ್ನು ಸ್ವೀಕರಿಸಲಾಗಿದ್ದು, ಅದು ಮಾತುಕತೆಗೆ ಸೂಕ್ತವಾದ ಆಧಾರವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಈ ಎರಡು ವಾರಗಳ ಅವಧಿಯನ್ನು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸುವ ದೊಡ್ಡ ಒಪ್ಪಂದಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

‘ನಾವು ಈಗಾಗಲೇ ನಮ್ಮ ಎಲ್ಲಾ ಸೇನಾ ಗುರಿಗಳನ್ನು ತಲುಪಿದ್ದೇವೆ. ಇರಾನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಶಾಂತಿಗಾಗಿ ಒಂದು ನಿರ್ಣಾಯಕ ಒಪ್ಪಂದಕ್ಕೆ ನಾವು ಹತ್ತಿರವಾಗಿದ್ದೇವೆ’ ಎಂದೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಇರಾನ್ ಸುಪ್ರೀಂ ನ್ಯಾಷನಲ್ ಸೆಕ್ಯೂರಿಟಿ ಕೌನ್ಸಿಲ್ ಕೂಡ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ. ಅಷ್ಟೇ ಅಲ್ಲದೆ, ಶುಕ್ರವಾರದಿಂದ ಇಸ್ಲಾಮಾಬಾದ್‌ನಲ್ಲಿ ಅಮೆರಿಕದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದೆ.

ಪಾಕಿಸ್ತಾನದ ಪ್ರಧಾನಿ ಷರೀಫ್ ಅವರು ಏಪ್ರಿಲ್ 10ರ ಶುಕ್ರವಾರದಂದು ಇಸ್ಲಾಮಾಬಾದ್‌ಗೆ ಆಗಮಿಸಿ, ಎಲ್ಲಾ ವಿವಾದಗಳನ್ನು ಇತ್ಯರ್ಥಪಡಿಸುವ ಅಂತಿಮ ಒಪ್ಪಂದದ ಕುರಿತು ಮಾತುಕತೆ ನಡೆಸುವಂತೆ ಅಮೆರಿಕ ಮತ್ತು ಇರಾನ್ ನಿಯೋಗಗಳಿಗೆ ಆಹ್ವಾನ ನೀಡಿದ್ದಾರೆ.

ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಮಾತನಾಡಿ, ‘ಉಭಯ ದೇಶಗಳ ಮುಖಾಮುಖಿ ಮಾತುಕತೆ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ, ಅಧ್ಯಕ್ಷರು (ಟ್ರಂಪ್) ಅಥವಾ ಶ್ವೇತಭವನ ಅಧಿಕೃತವಾಗಿ ಘೋಷಿಸುವವರೆಗೆ ಯಾವುದೂ ಅಂತಿಮವಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇರಾನ್​​ ಮುಂದಿಟ್ಟಿರುವ 10 ಅಂಶಗಳ ಪ್ರಸ್ತಾವನೆಗಳು ಇಂತಿವೆ..

  • ಆಕ್ರಮಣಶೀಲತೆ ಮಾಡದಿರುವ ವಿಚಾರದಲ್ಲಿ ಬದ್ಧತೆ

  • ಹಾರ್ಮುಜ್​ ಮೇಲೆ ಇರಾನ್​​ ನಿಯಂತ್ರಣ ಮುಂದುವರಿಕೆ

  • ಯುರೇನಿಯಂ ಪುಷ್ಟೀಕರಣದ ಸ್ವೀಕಾರ (ಅಡಚಣೆ ಇರಬಾರದು)

  • ಎಲ್ಲಾ ಪ್ರಾಥಮಿಕ & ದ್ವಿತೀಯ ನಿರ್ಬಂಧ ತೆರವು

  • ವಿಶ್ವಸಂಸ್ಥೆ ಭದ್ರತಾ ಮಂಡಳಿ & IEAE ಆಡಳಿತ ಮಂಡಳಿಯ ನಿರ್ಣಯ ರದ್ದು

  • ಜಲಸಂಧಿ ಆದಾಯ ಮೂಲಸೌಕರ್ಯಕ್ಕೆ ಪುನರ್​ನಿರ್ಮಾಣಕ್ಕೆ ಬಳಕೆ

  • ಇರಾನ್‌ಗೆ ಪರಿಹಾರ ಪಾವತಿಗಳು

  • ಅಮೆರಿಕ ಯುದ್ಧ ಪಡೆಗಳನ್ನ ಹಿಂತೆಗೆದುಕೊಳ್ಳುವುದು

  • ಎಲ್ಲಾ ವಲಯಗಳಲ್ಲಿ ಯುದ್ಧವನ್ನ ನಿಲ್ಲಿಸುವುದು

  • ಲೆಬನಾನ್​ ಮೇಲೆ ಇಸ್ರೇಲ್​ ದಾಳಿ ನಿಲ್ಲಿಸಬೇಕು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

KL Rahul ಆಯ್ತು ಇದೀಗ ರಿಷಬ್ ಪಂತ್ ನಾಯಕತ್ವಕ್ಕೆ ಕುತ್ತು?: LSG ಡೈರೆಕ್ಟರ್ ಟಾಮ್ ಮೂಡಿ ಸುಳಿವು!

ಅಮೆರಿಕದಲ್ಲಿ ಭಾರತೀಯರ ವಿರುದ್ಧ ಜನಾಂಗೀಯ ಹೇಳಿಕೆ: ಮಾರ್ಕೊ ರೂಬಿಯೊ ಹೇಳಿದ್ದೇನು?

Cannes 2026 Closing Ceremony: ಬಿಳಿ ಪ್ಯಾಂಟ್ ಸೂಟ್ ನಲ್ಲಿ ಕಂಗೊಳಿಸಿದ ಐಶ್ವರ್ಯ ರೈ!

SCROLL FOR NEXT