ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಹಾರ್ಮುಜ್ ಟ್ಯಾಂಕರ್ ಶುಲ್ಕ ವಿವಾದ: ಕೂಡಲೇ ನಿಲ್ಲಿಸಿ...; ಇರಾನ್ ವಿರುದ್ಧ ಗುಡುಗಿದ ಟ್ರಂಪ್; ಕಠಿಣ ಎಚ್ಚರಿಕೆ

ಇರಾನ್ ಜಲಸಂಧಿಯ ಮೂಲಕ ಹಾದುಹೋಗುವ ಟ್ಯಾಂಕರ್‌ಗಳಿಗೆ ಶುಲ್ಕ ವಿಧಿಸುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಅವರು ಹಾಗೆ ಮಾಡದಿರುವುದು ಉತ್ತಮ, ಒಂದು ವೇಳೆ ಮಾಡುತ್ತಿದ್ದರೆ ಈಗಲೇ ನಿಲ್ಲಿಸುವುದು ಅವರಿಗೆ ಉತ್ತಮ ಎಚ್ಚರಿಸಿದ್ದಾರೆ.

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ ಮೇಲೆ ಶುಲ್ಕ ವಿಧಿಸುತ್ತಿರುವುದಕ್ಕೆ ಇರಾನ್ ವಿರುದ್ಧ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುಡುಗಿದ್ದು, ಕೂಡಲೇ ನಿಲ್ಲಿಸುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಶ್ವದ ತೈಲ ಸಾಗಣೆಗೆ ಅತ್ಯಂತ ಪ್ರಮುಖವಾದ ಈ ಮಾರ್ಗದಲ್ಲಿ ಯಾವುದೇ ರೀತಿಯ ಶುಲ್ಕ ವಸೂಲಿ, ನಿರ್ಬಂಧ ಅಥವಾ ಹಸ್ತಕ್ಷೇಪವನ್ನು ಅಮೆರಿಕ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ಮೂಲಕ ಪ್ರತಿಕ್ರಿಯಿಸಿರುವ ಟ್ರಂಪ್, ಈ ರೀತಿಯ ಕ್ರಮಗಳು ಮುಂದುವರಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇರಾನ್ ಜಲಸಂಧಿಯ ಮೂಲಕ ಹಾದುಹೋಗುವ ಟ್ಯಾಂಕರ್‌ಗಳಿಗೆ ಶುಲ್ಕ ವಿಧಿಸುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಅವರು ಹಾಗೆ ಮಾಡದಿರುವುದು ಉತ್ತಮ, ಒಂದು ವೇಳೆ ಮಾಡುತ್ತಿದ್ದರೆ ಈಗಲೇ ನಿಲ್ಲಿಸುವುದು ಅವರಿಗೆ ಉತ್ತಮ ಎಚ್ಚರಿಸಿದ್ದಾರೆ.

ಅಲ್ಲದೆ, ಇರಾನ್ ಕದನ ವಿರಾಮ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ಅತ್ಯಂತ ಕಳಪೆ ಕೆಲಸ ಮಾಡುತ್ತಿದೆ ಎಂದು ಟ್ರಂಪ್ ದೂರಿದ್ದಾರೆ. ಇದು ನಾವು ಮಾಡಿಕೊಂಡ ಒಪ್ಪಂದವಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಪರ್ಷಿಯನ್ ಗಲ್ಪ್ ಮತ್ತು ಓಮಾನ್ ಸಮುದ್ರವನ್ನು ಸಂಪರ್ಕಿಸುವ ಪ್ರಮುಖ ಸಾಗರ ಮಾರ್ಗವಾಗಿದ್ದು, ಜಾಗತಿಕ ತೈಲ ವಹಿವಾಟಿನ ಸುಮಾರು ಐದನೇ ಭಾಗದಿಂದ ಮೂರನೇ ಭಾಗದವರೆಗೆ ಇದೇ ಮಾರ್ಗದ ಮೂಲಕ ಸಾಗುತ್ತದೆ ಎಂದು ಅಂದಾಜಿಸಲಾಗಿದೆ.

ಸೌದಿ ಅರೇಬಿಯಾ, ಇರಾಕ್, ಕುವೈತ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಇರಾನ್ ಸೇರಿದಂತೆ ಪ್ರಮುಖ ತೈಲ ಉತ್ಪಾದಕ ರಾಷ್ಟ್ರಗಳ ರಫ್ತು ಇದೇ ಮಾರ್ಗದ ಮೇಲೆ ಅವಲಂಬಿತವಾಗಿರುವುದರಿಂದ, ಇಲ್ಲಿ ಯಾವುದೇ ಅಡಚಣೆ ಉಂಟಾದರೆ ಜಾಗತಿಕ ಇಂಧನ ಸರಬರಾಜು ಸರಪಳಿ ತಕ್ಷಣವೇ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ.

ಇತ್ತೀಚಿನ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ ಇರಾನ್ ತನ್ನ ನೌಕಾ ಮತ್ತು ಭದ್ರತಾ ನಿಯಂತ್ರಣವನ್ನು ಹೆಚ್ಚಿಸುತ್ತಿದ್ದು, ಕೆಲ ಟ್ಯಾಂಕರ್ ಹಡಗುಗಳ ಸಂಚಾರದ ಮೇಲೆ ತಪಾಸಣೆ ಹೆಚ್ಚಿಸುವುದು ಮತ್ತು ಶುಲ್ಕ ವಿಧಿಸುವಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಬೆಳವಣಿಗೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯನ್ನು ಮುಕ್ತ ಹಾಗೂ ಅಡ್ಡಿಯಿಲ್ಲದ ಸಾಗಣೆಗೆ ತೆರೆಯಲ್ಪಟ್ಟಿರಬೇಕು ಎಂದು ಒತ್ತಾಯಿಸುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ