ಹಾರ್ಮುಜ್ ಜಲಸಂಧಿ 
ವಿದೇಶ

ಮಾತು ತಪ್ಪಿದ ಡೊನಾಲ್ಡ್ ಟ್ರಂಪ್: ಮತ್ತೆ ಹಾರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್!

ಇರಾನ್ ಬಂದರುಗಳಿಗೆ ಮತ್ತು ಅಲ್ಲಿಂದ ಪ್ರಯಾಣಿಸುವ ಹಡಗುಗಳ ಮೇಲೆ ನೌಕಾ ದಿಗ್ಬಂಧನವನ್ನು ಮುಂದುವರಿಸುವ ಮೂಲಕ ಅಮೆರಿಕ ತಾನು ನೀಡಿದ ಭರವಸೆ ಹುಸಿ ಮಾಡಿದೆ ಎಂದು ಇರಾನ್‌ನ ಕೇಂದ್ರ ಮಿಲಿಟರಿ ಕಮಾಂಡ್ ಹೇಳಿದೆ.

ಟೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಬಂದರುಗಳ ಮೇಲೆ ನೌಕಾ ದಿಗ್ಬಂಧನವನ್ನು ಮುಂದುವರೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ ಸ್ವಲ್ಪ ಸಮಯಲ್ಲೇ ಮತ್ತೆ ಹಾರ್ಮುಜ್ ಜಲಸಂಧಿಗೆ "ಕಟ್ಟುನಿಟ್ಟಿನ" ನಿರ್ಬಂಧವನ್ನು ಪುನರಾರಂಭಿಸುವುದಾಗಿ ಇರಾನ್ ಶನಿವಾರ ಘೋಷಿಸಿದೆ.

ಇರಾನ್ ಬಂದರುಗಳಿಗೆ ಮತ್ತು ಅಲ್ಲಿಂದ ಪ್ರಯಾಣಿಸುವ ಹಡಗುಗಳ ಮೇಲೆ ನೌಕಾ ದಿಗ್ಬಂಧನವನ್ನು ಮುಂದುವರಿಸುವ ಮೂಲಕ ಅಮೆರಿಕ ತಾನು ನೀಡಿದ ಭರವಸೆ ಹುಸಿ ಮಾಡಿದೆ ಎಂದು ಇರಾನ್‌ನ ಕೇಂದ್ರ ಮಿಲಿಟರಿ ಕಮಾಂಡ್ ಹೇಳಿದೆ.

ಇರಾನ್‌ಗೆ ಭೇಟಿ ನೀಡುವ ಎಲ್ಲಾ ಹಡಗುಗಳಿಗೆ ಯುನೈಟೆಡ್ ಸ್ಟೇಟ್ಸ್ ಚಲನೆಯ ಸ್ವಾತಂತ್ರ್ಯವನ್ನು ಪುನಃಸ್ಥಾಪಿಸುವವರೆಗೆ, "ಹಾರ್ಮುಜ್ ಜಲಸಂಧಿಯು ನಮ್ಮ ನಿಯಂತ್ರಣದಲ್ಲಿರುತ್ತದೆ" ಎಂದು ತಿಳಿಸಿದೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಏಪ್ರಿಲ್ 22 ರಂದು ಮುಕ್ತಾಯಗೊಳ್ಳಲಿರುವ ಇರಾನ್‌ನೊಂದಿಗಿನ ತಾತ್ಕಾಲಿಕ ಕದನ ವಿರಾಮ ಒಪ್ಪಂದವನ್ನು ವಿಸ್ತರಿಸಲಾಗುತ್ತದೆಯೇ ಎಂಬುದರ ಕುರಿತು ಸ್ಪಷ್ಟನೆ ನೀಡಲು ನಿರಾಕರಿಸಿದ್ದು, ದಿಗ್ಬಂಧನವನ್ನು ಕಾಯ್ದುಕೊಳ್ಳಲು ಯೋಜಿಸಿರುವುದಾಗಿ ಹೇಳಿದ್ದಾರೆ.

"ಬಹುಶಃ ನಾನು ಅದನ್ನು ವಿಸ್ತರಿಸುವುದಿಲ್ಲ. ಆದರೆ ದಿಗ್ಬಂಧನ ಇರುತ್ತದೆ" ಎಂದು ಟ್ರಂಪ್ ಏರ್ ಫೋರ್ಸ್ ಒನ್‌ನಲ್ಲಿ ಸುದ್ದಿಗಾರರು ಕದನ ವಿರಾಮವನ್ನು ವಿಸ್ತರಿಸಲಾಗುತ್ತದೆಯೇ ಎಂದು ಕೇಳಿದಾಗ ಉತ್ತರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video