ಡೊನಾಲ್ಡ್ ಟ್ರಂಪ್-ಇರಾನ್ ಸರ್ವಾಧಿಕಾರಿ ಮೊಜ್ತಾಬಾ ಖಮೇನಿ online desk
ವಿದೇಶ

ಮುಂದಿನ ಮೂರು ದಿನಗಳಲ್ಲಿ ಮಾತುಕತೆ: ಡೊನಾಲ್ಡ್ ಟ್ರಂಪ್; ಅಮೆರಿಕವನ್ನು ತುದಿಗಾಲಲ್ಲಿ ನಿಲ್ಲಿಸಿದ ಇರಾನ್!

ಮುಂದಿನ ಮೂರು ದಿನಗಳಲ್ಲಿ ಅಮೆರಿಕ-ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯಬಹುದು ಎಂದು ಪಾಕಿಸ್ತಾನದ ಮೂಲಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಯಾರ್ಕ್ ಪೋಸ್ಟ್ ಬುಧವಾರ ವರದಿ ಮಾಡಿದೆ.

ವಾಷಿಂಗ್ಟನ್: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಸೋತು ಗೆದ್ದಿರುವ ಇರಾನ್, ವಿಶ್ವದ ದೊಡ್ಡಣ್ಣ ಎಂದೇ ಬೀಗುತ್ತಿರುವ ಅಮೆರಿಕವನ್ನು ಶಾಂತಿ ಮಾತುಕತೆಗಾಗಿ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.

ಮುಂದಿನ ಮೂರು ದಿನಗಳಲ್ಲಿ ಅಮೆರಿಕ-ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯಬಹುದು ಎಂದು ಪಾಕಿಸ್ತಾನದ ಮೂಲಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಯಾರ್ಕ್ ಪೋಸ್ಟ್ ಬುಧವಾರ ವರದಿ ಮಾಡಿದೆ.

"ಇದು ಸಾಧ್ಯ!" ಮೊದಲ ಸುತ್ತಿನ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿದ್ದ ಪಾಕಿಸ್ತಾನದ ಮೂಲಗಳ ಬಗ್ಗೆ ಕೇಳಿದಾಗ, ಟ್ರಂಪ್ ಅವರು "ಮುಂದಿನ 36 ರಿಂದ 72 ಗಂಟೆಗಳಲ್ಲಿ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಯುವ ನಿರೀಕ್ಷೆಯಿದೆ" ಎಂದು ಹೇಳಿರುವುದಾಗಿ ವರದಿಯಾಗಿದೆ.

ಪಾಕಿಸ್ತಾನದ ಡಿಜಿಟಲ್ ಸುದ್ದಿ ಸಂಸ್ಥೆಯಾದ ನ್ಯೂಸ್ ಪೋಸ್ಟ್, ಹೆಚ್ಚಿನ ಮಾತುಕತೆಗಳಿಗೆ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿದೆ ಎಂದು ಹೆಚ್ಚಿನ ವಿವರಗಳಿಲ್ಲದೆ ವರದಿ ಮಾಡಿದೆ.

ಎರಡು ವಾರಗಳ ಕದನ ವಿರಾಮವನ್ನು ಟ್ರಂಪ್ ಅನಿರ್ದಿಷ್ಟಾವಧಿಗೆ ಮುಂದೂಡಿದ್ದು, ಮಧ್ಯಸ್ಥಿಕೆ ವಹಿಸಿರುವ ಪಾಕಿಸ್ತಾನದ ವಿನಂತಿಯನ್ನು ಪ್ರಶಂಸಿಸಿದ್ದಾರೆ

ಟ್ರಂಪ್ ಈ ಹಿಂದೆ ಕದನ ವಿರಾಮವನ್ನು ವಿಸ್ತರಿಸುವುದಿಲ್ಲ ಎಂದು ಸೂಚಿಸಿದ್ದರು ಮತ್ತು ಕದನ ವಿರಾಮದ ಅವಧಿ ಮುಗಿದ ನಂತರ ಬಾಂಬ್ ದಾಳಿ ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್