ಡೊನಾಲ್ಡ್ ಟ್ರಂಪ್-ಇರಾನ್ ಸರ್ವಾಧಿಕಾರಿ ಮೊಜ್ತಾಬಾ ಖಮೇನಿ online desk
ವಿದೇಶ

'ಇರಾನ್ ಸಂಪೂರ್ಣ ಕುಸಿಯುತ್ತಿದೆ': ಹಾರ್ಮುಜ್ ತೆರೆಯುವಂತೆ ಟೆಹ್ರಾನ್ ಬೇಡಿಕೊಳ್ಳುತ್ತಿದೆ: ಟ್ರಂಪ್

ಇರಾನ್ ನಾಯಕತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಇರಾನ್ ಸಂಪೂರ್ಣ "ಕುಸಿಯುವ ಸ್ಥಿತಿಯಲ್ಲಿದೆ" ಎಂದು ಹೇಳಿದ್ದು, ಟೆಹ್ರಾನ್ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವಂತೆ ಬೇಡಿಕೊಂಡಿದೆ ಎಂದು ಹೇಳಿದ್ದಾರೆ.

ಇರಾನ್ ನಾಯಕತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ.

"ಇರಾನ್ ಸಂಪೂರ್ಣ 'ಕುಸಿಯುವ ಸ್ಥಿತಿಯಲ್ಲಿದೆ' ಎಂದು ಟೆಹ್ರಾನ್ ನಮಗೆ ತಿಳಿಸಿದೆ. ಅವರು ತಮ್ಮ ನಾಯಕತ್ವದ ಬಿಕ್ಕಟ್ಟನ್ನು ಪರಿಹರಿಸಲು ಪ್ರಯತ್ನಿಸುತ್ತಿರುವುದರಿಂದ, ಸಾಧ್ಯವಾದಷ್ಟು ಬೇಗ ನಾವು 'ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕೆಂದು' ಅವರು ಬಯಸುತ್ತಿದ್ದಾರೆ" ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್‌ನಲ್ಲಿ ಬರೆದಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸುವ ಪ್ರಯತ್ನಗಳು ಮಂಗಳವಾರ ಸ್ಥಗಿತಗೊಂಡಂತೆ ಕಂಡುಬಂದಿದ್ದು, ಹಾರ್ಮುಜ್ ಜಲಸಂಧಿ ಮೇಲಿನ ನಿರ್ಬಂಧ ತೆರವುಗೊಳಿಸುವ ಟೆಹ್ರಾನ್‌ನ ಇತ್ತೀಚಿನ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ಅಮೆರಿಕ ಹೇಳಿದೆ.

ಎರಡು ತಿಂಗಳ ಹಿಂದೆ ಅಮೆರಿಕ-ಇಸ್ರೇಲಿ ದಾಳಿ ಪ್ರಾರಂಭವಾದಾಗಿನಿಂದ ಜಾಗತಿಕ ತೈಲ ಮತ್ತು ಅನಿಲ ಸಾಗಣೆಗೆ ಪ್ರಮುಖ ಮಾರ್ಗವಾದ ಕಾರ್ಯತಂತ್ರದ ಜಲಮಾರ್ಗವನ್ನು ಇರಾನ್ ನಿರ್ಬಂಧಿಸಿದೆ, ಇದು ಜಾಗತಿಕ ಆರ್ಥಿಕತೆಗೆ ದೊಡ್ಡ ಆಘಾತ ನೀಡಿದೆ.

ಜಲಸಂಧಿಯಲ್ಲಿ ಹಡಗುಗಳ ಸಂಚಾರವನ್ನು ಪುನಃಸ್ಥಾಪಿಸುವ ಇರಾನ್‌ನ ಪ್ರಸ್ತಾಪವನ್ನು ಟ್ರಂಪ್ ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಸಿಎನ್‌ಎನ್ ವರದಿ ಮಾಡಿದೆ.

ಇರಾನ್ ಅಮೆರಿಕದ ಮುಂದೆ ಒಪ್ಪಂದವೊಂದನ್ನು ಪ್ರಸ್ತಾಪಿಸಿದೆ. ಇದರ ಅನ್ವಯ, ಇರಾನ್ ಮತ್ತು ಅದರ ಬಂದರುಗಳ ಮೇಲೆ ಅಮೆರಿಕ ವಿಧಿಸಿರುವ ದಿಗ್ಬಂಧನವನ್ನು ತೆರವುಗೊಳಿಸಬೇಕು ಹಾಗೂ ಮಧ್ಯಪ್ರಾಚ್ಯದಲ್ಲಿನ ಯುದ್ಧವನ್ನು ಕೊನೆಗೊಳಿಸಬೇಕು. ಇದಕ್ಕೆ ಪ್ರತಿಯಾಗಿ, ಇರಾನ್ ಪರಮಾಣು ಕಾರ್ಯಕ್ರಮದ ಕುರಿತ ಚರ್ಚೆಗಳನ್ನು ರಾಜತಾಂತ್ರಿಕ ಪ್ರಕ್ರಿಯೆಯ ಮುಂದಿನ ಹಂತದಲ್ಲಿ ಕೈಗೆತ್ತಿಕೊಳ್ಳಬಹುದು ಎಂದು ಇರಾನ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video