ಡೊನಾಲ್ಡ್ ಟ್ರಂಪ್ ಹಾಗೂ ಮೊಜ್ತಾಬಾ ಖಮೇನಿ 
ವಿದೇಶ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

ಅವರು ಮೃತಪಟ್ಟಿದ್ದಾರೆ ಎಂದು ನನಗೆ ಅನಿಸುವುದಿಲ್ಲ. ಅವರು ತುಂಬಾ ಗಂಭೀರವಾಗಿ ಗಾಯಗೊಂಡಿದ್ದರು. ದೇಹದ ಎಡಭಾಗ, ಕೈ, ಕಾಲು ಸೇರಿದಂತೆ ಎಲ್ಲವೂ ತೀವ್ರವಾಗಿ ಗಾಯಗೊಂಡಿತ್ತು. ಆದರೆ, ಅವರು ಮೃತಪಟ್ಟಿಲ್ಲ ಎಂದು ನಾನು ಭಾವಿಸುತ್ತೇನೆ.

ವಾಷಿಂಗ್ಟನ್: ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರ ಆರೋಗ್ಯದ ಕುರಿತು ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ಮೊಜ್ತಾಬಾ ಖಮೇನಿ ಇನ್ನೂ ಬದುಕಿದ್ದಾರೆ, ಆದರೆ ಮಿಲಿಟರಿ ದಾಳಿಯಲ್ಲಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಟ್ರಂಪ್ ಬಹಿರಂಗಪಡಿಸಿದ್ದಾರೆ.

ಖಮೇನಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಅವರ ಆರೋಗ್ಯ ಮತ್ತು ಸ್ಥಿತಿಗತಿ ಕುರಿತು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಅಮೆರಿಕದ ಕಾಮೆಂಟೇಟರ್ ಗ್ಲೆನ್ ಬೆಕ್‌ಗೆ ನೀಡಿದ ಸಂದರ್ಶನದಲ್ಲಿ ಖಮೇನಿ ಅವರ ಸ್ಥಿತಿಗತಿ ಕುರಿತು ಮಾತನಾಡಿದ ಟ್ರಂಪ್, “ಅವರು ಮೃತಪಟ್ಟಿದ್ದಾರೆ ಎಂದು ನನಗೆ ಅನಿಸುವುದಿಲ್ಲ. ಅವರು ತುಂಬಾ ಗಂಭೀರವಾಗಿ ಗಾಯಗೊಂಡಿದ್ದರು. ದೇಹದ ಎಡಭಾಗ, ಕೈ, ಕಾಲು ಸೇರಿದಂತೆ ಎಲ್ಲವೂ ತೀವ್ರವಾಗಿ ಗಾಯಗೊಂಡಿತ್ತು. ಆದರೆ, ಅವರು ಮೃತಪಟ್ಟಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಒಂದು ವೇಳೆ ಖಮೇನಿ ಮೃತಪಟ್ಟಿದ್ದರೂ ಅಥವಾ ಕಾರ್ಯನಿರ್ವಹಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದರೂ, ಇರಾನ್ ಸರ್ಕಾರ ಈ ವಿಚಾರವನ್ನು ಮುಚ್ಚಿಡಲು ದೊಡ್ಡ ಮಟ್ಟದ ನಾಟಕ ಮಾಡುತ್ತಿದೆ. “ಅವರು ನಿರಂತರವಾಗಿ ಅವರೊಂದಿಗೆ ಮಾತನಾಡಲು ಹೋಗುತ್ತಿರುವುದಾಗಿ ಮತ್ತು ಪ್ರಮುಖ ನಿರ್ಧಾರಗಳಿಗೆ ಅವರ ಅಂತಿಮ ಅನುಮೋದನೆ ಪಡೆಯುತ್ತಿರುವುದಾಗಿ ಹೇಳುತ್ತಿದ್ದಾರೆ. ಒಂದು ವೇಳೆ ಇದು ನಿಜವಾಗಿದ್ದರೆ, ಅವರು ಸಾಕಷ್ಟು ದೊಡ್ಡ ಪ್ರದರ್ಶನ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ನಡೆಯುತ್ತಿರುವ ಸೇನಾ ಹಾಗೂ ಕಾರ್ಯತಂತ್ರದ ಕಾರ್ಯಾಚರಣೆಗಳ ಕುರಿತು ಮಾತನಾಡಿದ ಟ್ರಂಪ್, ಅಮೆರಿಕದ ಸೇನೆಯ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ.

ಇತ್ತೀಚಿನ ಸಮುದ್ರ ಕಾರ್ಯಾಚರಣೆಗಳನ್ನು ಉಲ್ಲೇಖಿಸಿದ ಅವರು, “ಕಳೆದ ರಾತ್ರಿ ನಾವು 22 ದೋಣಿಗಳನ್ನು ಹೊಡೆದುರುಳಿಸಿದ್ದೇವೆ. ನೌಕಾಪಡೆಯು ಅದ್ಭುತವಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಸೇನೆಯೂ ಅದ್ಭುತವಾಗಿದೆ” ಎಂದು ಹೇಳಿದ್ದಾರೆ.

ಅಮೆರಿಕದ ಆರ್ಥಿಕ ಶಕ್ತಿಯೂ ಕಳೆದ ಒಂದೂವರೆ ವರ್ಷದಲ್ಲಿ ಗಣನೀಯವಾಗಿ ಹೆಚ್ಚಾಗಿದೆ. ಪ್ರಸ್ತುತ ನಡೆಯುತ್ತಿರುವ ಕಾರ್ಯಾಚರಣೆಗಳು “ದೊಡ್ಡ ಗೆಲುವಿನತ್ತ ಸಾಗುತ್ತಿವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ವೆನೆಜುವೆಲಾದಲ್ಲಿ ಗೆಲುವು ಸಾಧಿಸಿದ್ದೇವೆ, ಇಲ್ಲಿಯೂ ದೊಡ್ಡ ಗೆಲುವು ಸಿಗಲಿದೆ ಎಂದು ಹೇಳಿದ್ದಾರೆ.

ಇರಾನ್‌ನ ಫಾರ್ಸ್ ನ್ಯೂಸ್ ಮೊಜ್ತಬಾ ಖಮೇನಿ ಅವರ ಹಳೆಯ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಈ ದೃಶ್ಯಗಳನ್ನು ಅವರು ಸರ್ವೋಚ್ಚ ನಾಯಕರಾಗುವ ಮುನ್ನ ಚಿತ್ರೀಕರಿಸಲಾಗಿತ್ತು ಎಂದು ವರದಿಯಾಗಿದೆ. ವಿಡಿಯೋದಲ್ಲಿ ಕೆಲವರು ಪ್ರಾರ್ಥನೆ ಸಲ್ಲಿಸಿದ ಬಳಿಕ ಚರ್ಚೆ ಆರಂಭಿಸುವ ದೃಶ್ಯ ಕಂಡುಬಂದಿದೆ.

ಆಗಸ್ಟ್‌ನಲ್ಲಿ ಖಮೇನಿ ಅವರ ವಿಡಿಯೋ ಇರಾನ್ ಮಾಧ್ಯಮಗಳಲ್ಲಿ ಬಿಡುಗಡೆಯಾಗುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಇರಾನ್‌ನ ಸರ್ವೋಚ್ಚ ನಾಯಕ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ್ದವು.

ಇದಾದ ಕೆಲವೇ ದಿನಗಳಲ್ಲಿ ಇರಾನ್‌ನ ಅರೆ ಸರ್ಕಾರಿ ಮೆಹರ್ ನ್ಯೂಸ್, ಖಮೇನಿ ಆರೋಗ್ಯವಾಗಿರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋವನ್ನು ಬಿಡುಗಡೆ ಮಾಡಿತ್ತು.

ಖಮೇನಿ ಅವರ ಆರೋಗ್ಯ ಮತ್ತು ಇರುವಿಕೆಯ ಕುರಿತು ಹರಡುತ್ತಿದ್ದ ವದಂತಿಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಈ ವಿಡಿಯೋ ಬಿಡುಗಡೆ ಮಾಡಲಾಗಿದೆ ಎಂದು ವರದಿಯಾಗಿತ್ತು.

ಈ ಹಿಂದೆ ಇಸ್ರೇಲಿ ಮಾಧ್ಯಮಗಳು ಖಮೇನಿ ಅವರ ಆರೋಗ್ಯ “ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ” ಎಂದು ವರದಿ ಮಾಡಿದ್ದವು. ಇರಾನ್‌ನ ನಾಯಕತ್ವದಲ್ಲೂ ಅವರ ಆರೋಗ್ಯದ ಬಗ್ಗೆ ಆತಂಕವಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ, ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಈ ಆರೋಪಗಳನ್ನು ತಳ್ಳಿಹಾಕಿದ್ದು, ಮೊಜ್ತಬಾ ಖಮೇನಿ “ಸಂಪೂರ್ಣ ಆರೋಗ್ಯವಾಗಿದ್ದಾರೆ” ಎಂದು ಹೇಳಿದ್ದರು.

ಏಳು-ಎಂಟು ಗಂಟೆಗಳ ಕಾಲ ಕುಳಿತು ಚರ್ಚೆ ನಡೆಸಬಲ್ಲ ವ್ಯಕ್ತಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲು ಸಾಧ್ಯವಿಲ್ಲ” ಎಂದು ಪೆಜೆಶ್ಕಿಯನ್ ಹೇಳಿದ್ದರು. ಆಗಸ್ಟ್ ಆರಂಭದಲ್ಲಿ ಖಮೇನಿ ಅವರೊಂದಿಗೆ ತಾನು “ಬಹಳ ಉತ್ತಮ” ಸಭೆ ನಡೆಸಿದ್ದಾಗಿ ಅವರು ತಿಳಿಸಿದ್ದರು.

ಮೊಜ್ತಬಾ ಖಮೇನಿ ಅವರು ತಮ್ಮ ತಂದೆ ಅಯತೊಲ್ಲಾ ಅಲಿ ಖಮೇನಿ ಫೆಬ್ರವರಿ 28ರಂದು ನಡೆದ ಅಮೆರಿಕ-ಇಸ್ರೇಲ್ ಜಂಟಿ ಸೇನಾ ದಾಳಿಯಲ್ಲಿ ಮೃತಪಟ್ಟ ಬಳಿಕ ಇರಾನ್‌ನ ಸರ್ವೋಚ್ಚ ನಾಯಕನ ಸ್ಥಾನವನ್ನು ವಹಿಸಿಕೊಂಡಿದ್ದಾರೆ. ಆದರೆ, ಅಧಿಕಾರ ಸ್ವೀಕರಿಸಿದ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದುವರೆಗೆ ಲಿಖಿತ ಹೇಳಿಕೆಗಳ ಮೂಲಕವೇ ತಮ್ಮ ಸಂದೇಶಗಳನ್ನು ಪ್ರಕಟಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!