ಟ್ರಂಪ್ ಹಾಗೂ ಪುತ್ರ ಬ್ಯಾರನ್ ಟ್ರಂಪ್ 
ವಿದೇಶ

Trump ಕಿರಿಯ ಪುತ್ರ ಬ್ಯಾರನ್ ಹತ್ಯೆಗೆ Iran ಸಂಚು? ಇದು ಸಂಪೂರ್ಣ ಸುಳ್ಳು; ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ ಟೆಹ್ರಾನ್..!

ಹಾರ್ಮುಜ್ ಜಲಸಂಧಿಯನ್ನು ಮತ್ತೆ ಹಡಗು ಸಂಚಾರಕ್ಕೆ ತೆರೆಯಲು ಇರಾನ್ ವಿಧಿಸುವ ಷರತ್ತುಗಳನ್ನು ತಿಳಿಸುವಂತೆ ಮಧ್ಯವರ್ತಿಗಳು ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬೈರೂತ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿರಿಯ ಪುತ್ರ ಬ್ಯಾರನ್ ಟ್ರಂಪ್ ಅವರನ್ನು ಹತ್ಯೆ ಮಾಡಲು ಇರಾನ್ ಸಂಚು ರೂಪಿಸಿದೆ ಎಂಬ ವರದಿಯನ್ನು ಇರಾನ್ ಭದ್ರತಾ ಮುಖ್ಯಸ್ಥ ಮೊಹ್ಸೆನ್ ರೆಜಾಯಿ ತಳ್ಳಿಹಾಕಿದ್ದಾರೆ.

ಈ ಆರೋಪ ಸಂಪೂರ್ಣ ಸುಳ್ಳು ಎಂದು ಲೆಬನಾನ್‌ನ ಅಲ್-ಮನಾರ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ.

ಟ್ರಂಪ್ ಅವರ ಕಿರಿಯ ಪುತ್ರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಕುರಿತು ಇರಾನ್ ಸರ್ಕಾರಿ ದೂರದರ್ಶನದಲ್ಲಿ ಪ್ರಸಾರವಾದ ವಿಡಿಯೊದ ಬಗ್ಗೆ ಮಾಹಿತಿ ಇದೆ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ಮಂಗಳವಾರ ತಿಳಿಸಿತ್ತು.

ಇದೀಗ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೆಜಾಯಿ, ಬ್ಯಾರನ್ ಟ್ರಂಪ್ ಅವರನ್ನು ಹತ್ಯೆ ಮಾಡುವ ಯಾವುದೇ ಸಂಚು ಇರಾನ್‌ನಿಂದ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದೇ ಸಂದರ್ಶನದಲ್ಲಿ ರೆಜಾಯಿ, ಹಾರ್ಮುಜ್ ಜಲಸಂಧಿಯನ್ನು ಮತ್ತೆ ಹಡಗು ಸಂಚಾರಕ್ಕೆ ತೆರೆಯಲು ಇರಾನ್ ವಿಧಿಸುವ ಷರತ್ತುಗಳನ್ನು ತಿಳಿಸುವಂತೆ ಮಧ್ಯವರ್ತಿಗಳು ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಇರಾನ್ ಷರತ್ತುಗಳ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸುವುದು ಇರಾನ್ ಮುಂದಿಟ್ಟಿರುವ ಪ್ರಮುಖ ಷರತ್ತುಗಳಲ್ಲಿ ಒಂದಾಗಿದೆ ಎಂದು ರೆಜಾಯಿ ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿ ಮೂಲಕ ಸರಕು ಸಾಗಣೆಗಾಗಿ ಒಮಾನ್‌ನೊಂದಿಗೆ ಇರಾನ್ ಒಂದು ಮಾರ್ಗದ ಕುರಿತು ಒಪ್ಪಂದ ಮಾಡಿಕೊಂಡಿದೆ. ಈ ಮಾರ್ಗದ ಕೆಲವು ಭಾಗಗಳು ಒಮಾನ್ ಮತ್ತು ಇರಾನ್‌ನ ಜಲಪ್ರದೇಶಗಳ ಮೂಲಕ ಹಾದುಹೋಗಲಿವೆ ಎಂದು ಹೇಳಿದ್ದಾರೆ.

ಅಮೆರಿಕವು ಇರಾನ್‌ನ ಷರತ್ತುಗಳನ್ನು ಒಪ್ಪಿಕೊಂಡರೆ, ಹಡಗುಗಳು ಜಲಸಂಧಿಯ ಮಧ್ಯಭಾಗದಲ್ಲಿ ನಿಗದಿಪಡಿಸಲಾದ ಮಾರ್ಗದ ಮೂಲಕ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!