ಮೆಕ್ಕಾ ಒಪ್ಪಂದ ಮತ್ತು ಬಾಂಗ್ಲಾದೇಶ 
ವಿದೇಶ

ಆಹ್ವಾನ ಬಂದ್ರೆ..; ಸೌದಿ–ಪಾಕಿಸ್ತಾನ–ಟರ್ಕಿಯ ರಕ್ಷಣಾ ಕೂಟಕ್ಕೆ ಬಾಂಗ್ಲಾದೇಶ ಎಂಟ್ರಿ? ಢಾಕಾ ಹೇಳಿದ್ದೇನು?

ಒಪ್ಪಂದದ ಪ್ರಮುಖ ಅಂಶವೆಂದರೆ, ಮೂರು ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶದ ಮೇಲೆ ಸಶಸ್ತ್ರ ದಾಳಿ ನಡೆದರೆ, ಅದನ್ನು ಮೂರೂ ದೇಶಗಳ ಮೇಲಿನ ದಾಳಿ ಎಂದು ಪರಿಗಣಿಸುವುದು.

ಢಾಕಾ: ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ನಡುವೆ ಇತ್ತೀಚೆಗೆ ಸಹಿ ಆಗಿರುವ ‘ಮೆಕ್ಕಾ ಜಂಟಿ ರಕ್ಷಣಾ ಒಪ್ಪಂದ’ಕ್ಕೆ ಬಾಂಗ್ಲಾದೇಶವೂ ಸೇರುವ ಸಾಧ್ಯತೆ ಇದ್ದು, ಈ ಒಪ್ಪಂದಕ್ಕೆ ಸೇರುವುದರಿಂದ ಇತರ ದೇಶಗಳೊಂದಿಗೆ ಢಾಕಾ ಹೊಂದಿರುವ ಸಂಬಂಧಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಬಾಂಗ್ಲಾದೇಶ ಸರ್ಕಾರ ಹೇಳಿದೆ.

ಆಗಸ್ಟ್‌ 7ರಂದು ಸೌದಿ ಅರೇಬಿಯಾ, ಟರ್ಕಿ ಮತ್ತು ಪಾಕಿಸ್ತಾನ ‘ಮಕ್ಕಾ ಜಂಟಿ ರಕ್ಷಣಾ ಒಪ್ಪಂದ’ (Makkah Joint Defence Agreement)ಕ್ಕೆ ಸಹಿ ಹಾಕಿದ್ದವು. ಮೂರು ದೇಶಗಳ ನಡುವೆ ಸಾಮೂಹಿಕ ತಡೆ ಸಾಮರ್ಥ್ಯ ಮತ್ತು ರಕ್ಷಣಾ ಸಹಕಾರಕ್ಕೆ ಚೌಕಟ್ಟು ರೂಪಿಸುವುದು ಈ ಒಪ್ಪಂದದ ಉದ್ದೇಶವಾಗಿದೆ.

ಒಪ್ಪಂದದ ಪ್ರಮುಖ ಅಂಶವೆಂದರೆ, ಮೂರು ರಾಷ್ಟ್ರಗಳಲ್ಲಿ ಯಾವುದಾದರೂ ಒಂದು ದೇಶದ ಮೇಲೆ ಸಶಸ್ತ್ರ ದಾಳಿ ನಡೆದರೆ, ಅದನ್ನು ಮೂರೂ ದೇಶಗಳ ಮೇಲಿನ ದಾಳಿ ಎಂದು ಪರಿಗಣಿಸುವುದು.

ಬಾಂಗ್ಲಾ ಎಂಟ್ರಿ

ಇದೀಗ ಈ ಒಪ್ಪಂದಕ್ಕೆ ಬಾಂಗ್ಲಾದೇಶ ಎಂಟ್ರಿಕೊಡುವ ಸಾಧ್ಯತೆ ಇದ್ದು, ಒಪ್ಪಂದಕ್ಕೆ ಸೇರುವ ಕುರಿತು ಬಾಂಗ್ಲಾದೇಶ ಸರ್ಕಾರ ಚರ್ಚೆ ನಡೆಸುತ್ತಿದೆ.

ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಹುಮಾಯುನ್ ಕಬೀರ್ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ, ಮೆಕ್ಕಾ ರಕ್ಷಣಾ ಒಪ್ಪಂದಕ್ಕೆ ಸೇರುವುದರಲ್ಲಿ ಬಾಂಗ್ಲಾದೇಶಕ್ಕೆ ಯಾವುದೇ ಅಪಾಯ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಸೌದಿ ಅರೇಬಿಯಾದ ರಾಯಭಾರಿ ಅಬ್ದುಲ್ಲಾ ಜಾಫರ್ ಬಿನ್ ಅಬಿಯಾಹ್ ಅವರನ್ನು ಭೇಟಿಯಾದ ಬಳಿಕ ವಿದೇಶಾಂಗ ಸಚಿವಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಬೀರ್, “ಇದು ವಿಶಿಷ್ಟವಾದ ಒಪ್ಪಂದವಾಗಿದ್ದು, ಹೊಸ ಅವಕಾಶಗಳನ್ನು ಒದಗಿಸುತ್ತದೆ” ಎಂದು ಹೇಳಿದ್ದಾರೆ.

ಇತರ ರಾಷ್ಟ್ರಗಳ ಜೊತೆಗಿನ ಸಂಬಂಧಕ್ಕೆ ಧಕ್ಕೆ ಇಲ್ಲ

ಮೆಕ್ಕಾ ರಕ್ಷಣಾ ಒಪ್ಪಂದಕ್ಕೆ ಬಾಂಗ್ಲಾದೇಶ ಸೇರಿದರೂ, ಇತರ ಪಾಲುದಾರ ರಾಷ್ಟ್ರಗಳೊಂದಿಗೆ ಢಾಕಾ ಹೊಂದಿರುವ ರಾಜತಾಂತ್ರಿಕ ಹಾಗೂ ದ್ವಿಪಕ್ಷೀಯ ಸಂಬಂಧಗಳಿಗೆ ಯಾವುದೇ ನಿರ್ಬಂಧ ಉಂಟಾಗುವುದಿಲ್ಲ ಎಂದು ಕಬೀರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬಾಂಗ್ಲಾದೇಶ ಈಗಾಗಲೇ ಚರ್ಚೆ ನಡೆಸುತ್ತಿದೆ. “ನಮ್ಮ ಎಲ್ಲ ದ್ವಿಪಕ್ಷೀಯ ಪಾಲುದಾರರೊಂದಿಗೆ ಈ ಚರ್ಚೆಗಳು ಸಕಾರಾತ್ಮಕವಾಗಿ ಮುಂದುವರಿಯುತ್ತಿವೆ” ಎಂದು ಅವರು ಹೇಳಿದ್ದಾರೆ.

‘ಆಹ್ವಾನ ಬಂದರೆ ಸಕಾರಾತ್ಮಕ ಪರಿಗಣನೆ’

ಕೆಲ ದಿನಗಳ ಹಿಂದೆ ಬಾಂಗ್ಲಾದೇಶದ ವಿದೇಶಾಂಗ ಸಚಿವ ಖಲೀಲುರ್ ರಹಮಾನ್ ಸಂಸತ್ತಿನಲ್ಲಿ ಮಾತನಾಡುವ ವೇಳೆ, ಮೆಕ್ಕಾ ರಕ್ಷಣಾ ಒಪ್ಪಂದಕ್ಕೆ ಸೇರುವಂತೆ ಆಹ್ವಾನ ಬಂದರೆ ಅದನ್ನು ಬಾಂಗ್ಲಾದೇಶ ಸಕಾರಾತ್ಮಕವಾಗಿ ಪರಿಗಣಿಸಲಿದೆ ಎಂದು ಹೇಳಿದ್ದರು.

ಅಲ್ಲದೆ, ಈ ಒಪ್ಪಂದವು “ನಮ್ಮ ಮುಸ್ಲಿಂ ಕುಟುಂಬದ” ಆಂತರಿಕ ವಿಚಾರ ಎಂದು ಬಣ್ಣಿಸಿದ್ದ ಅವರು, ಇತರರು ಈ ವಿಚಾರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದರು.

ಮೆಕ್ಕಾ ರಕ್ಷಣಾ ಒಪ್ಪಂದದ ಮೂಲಕ ಸೌದಿ ಅರೇಬಿಯಾ, ಪಾಕಿಸ್ತಾನ ಮತ್ತು ಟರ್ಕಿ ನಡುವೆ ರಕ್ಷಣಾ ಸಹಕಾರ ಮತ್ತಷ್ಟು ಬಲಪಡಿಸುವ ಪ್ರಯತ್ನ ನಡೆಯುತ್ತಿರುವ ಬೆನ್ನಲ್ಲೇ ಬಾಂಗ್ಲಾದೇಶದ ಈ ನಿಲುವು ಮಹತ್ವ ಪಡೆದುಕೊಂಡಿದೆ.

ಬಾಂಗ್ಲಾದೇಶ ಅಧಿಕೃತವಾಗಿ ಒಪ್ಪಂದಕ್ಕೆ ಸೇರುವ ನಿರ್ಧಾರ ಕೈಗೊಂಡಿಲ್ಲವಾದರೂ, ಈ ಕುರಿತು ನಡೆಯುತ್ತಿರುವ ಚರ್ಚೆಗಳು ಸಕಾರಾತ್ಮಕ ಹಂತದಲ್ಲಿವೆ ಎಂಬ ರಾಜ್ಯ ಸಚಿವರ ಹೇಳಿಕೆ ಢಾಕಾದ ಆಸಕ್ತಿಯನ್ನು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

Hit And Run: ಪಾದಚಾರಿಗೂ ಬದುಕಿ ರಸ್ತೆ ದಾಟುವ ಹಕ್ಕಿದೆ: ದೆಹಲಿ ಕೋರ್ಟ್

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ

ಇಸ್ಲಾಂ ಧರ್ಮವೇ ಶ್ರೇಷ್ಠ: ಸಿಎಂ ಡಿಕೆಶಿಯ 6ನೇ ಗ್ಯಾರಂಟಿ- ಹಿಂದೂಗಳಿಗೆ ‘ಸುನ್ನತ್ ಗ್ಯಾರಂಟಿ' ರಾಯರೆಡ್ಡಿ ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ!