ಥಾಯ್ಲೆಂಡ್ ಶಾಲೆ ಮೇಲೆ ಗುಂಡಿನ ದಾಳಿ 
ವಿದೇಶ

Thai school shooting: ಶಾಲೆ ಮೇಲೆ ಗುಂಡಿನ ಮಳೆ, 22 ಮಕ್ಕಳು ಸೇರಿ ಕನಿಷ್ಟ 34 ಸಾವು, ದಾಳಿಕೋರ ಪೊಲೀಸ್ ವಶಕ್ಕೆ!

ಬುಧವಾರ ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಕ್ಯಾಂಪಸ್‌ಗೆ ನುಗ್ಗಿ ಮೆಷಿನ್ ಗನ್‌ನಿಂದ ಮನಸೋ ಇಚ್ಛೆ ದಾಳಿ ಮಾಡಿದ್ದಾನೆ.

ಬ್ಯಾಂಕಾಕ್: ಥೈಲ್ಯಾಂಡ್‌ನ ಡೇಕೇರ್ ಕೇಂದ್ರವೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿಗಳು ಮುಗಿದ ಸ್ವಲ್ಪ ಸಮಯದ ನಂತರ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಕ್ಯಾಂಪಸ್‌ಗೆ ನುಗ್ಗಿ ಮೆಷಿನ್ ಗನ್‌ನಿಂದ ಮನಸೋ ಇಚ್ಛೆ ದಾಳಿ ಮಾಡಿದ್ದಾನೆ.

ಆರಂಭದಲ್ಲಿ ಶಾಲೆಯ ಪ್ರಾಂಶುಪಾಲರನ್ನು ಗಾಯಗೊಳಿಸಿ, ಇತರರನ್ನು ಒತ್ತೆಯಾಳಾಗಿ ತೆಗೆದುಕೊಳ್ಳಲು ಯತ್ನಿಸಿದ್ದಾನೆ. ಗುಂಡಿನ ಶಬ್ದ ಕೇಳುತ್ತಲೇ ಶಾಲೆಯಲ್ಲಿದ್ದ ಮಕ್ಕಳು ಮತ್ತು ಶಿಕ್ಷಕರು ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದಾರೆ. ಬಳಿಕ ಬಂದೂಕು ದಾರಿ ಸಿಕ್ಕ ಸಿಕ್ಕ ಕಡೆ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ 22 ಮಕ್ಕಳು 12 ಮಂದಿ ಇತರರು ಸೇರಿ 34 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ದಾಳಿಕೋರ ಮೆಷಿನ್ ಗನ್ ಹಿಡಿದುಕೊಂಡು ಮೈದಾನದಲ್ಲಿ ನಡೆದುಕೊಂಡು ಹೋಗುತ್ತಲೇ ಗುಂಡು ಹಾರಿಸುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪೊಲೀಸರ ಆಗಮನ

ವಿಚಾರ ತಿಳಿಯುತ್ತಲೇ ಹ್ಯಾಟ್ ಯೈ ಮತ್ತು ಥಂಗ್ ಲುಂಗ್ ಜಿಲ್ಲೆಗಳ ವಿಶೇಷ ಕಾರ್ಯಾಚರಣೆ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಈ ಪ್ರದೇಶವನ್ನು ಸುತ್ತುವರೆದಿದ್ದಾರೆ. ಅಂತೆಯೇ ಬಂದೂಕುದಾರಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿಯಲ್ಲಿ ನಿರತನಾಗಿದ್ದರೆ ಇತ್ತ ಶಾಲೆಯಲ್ಲಿದ್ದ ಮಕ್ಕಳು ಮತ್ತು ಸಿಬ್ಬಂದಿ ಕ್ಯಾಂಪಸ್‌ನಿಂದ ಹತ್ತಿರದ ರಸ್ತೆಗಳಿಗೆ ಪಲಾಯನ ಮಾಡುತ್ತಿರುವುದು ಕಂಡುಬಂದಿದೆ.

ಯುವಕ ವಶಕ್ಕೆ, ಒತ್ತೆಯಾಳುಗಳ ರಕ್ಷಣೆ

ಇನ್ನು ಸತತ ಕಾರ್ಯಾಚರಣೆ ಬಳಿಕ ಗುಂಡಿನ ದಾಳಿ ನಡೆಸಿದ್ದ ಆರೋಪಿ ಯುವಕನನ್ನು ಭದ್ರತಾ ಅಧಿಕಾರಿಗಳು ಜೀವಂತ ಸೆರೆ ಹಿಡಿದಿದ್ದಾರೆ. ಅಲ್ಲದೆ ಒತ್ತೆಯಾಳು ಎಲ್ಲರನ್ನೂ ಸುರಕ್ಷಿತವಾಗಿ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಂದೂಕುದಾರಿ ಯುವಕ ಇಂದು ಮುಂಜಾನೆ ಅಸಭ್ಯವಾಗಿ ವರ್ತಿಸುತ್ತಿದ್ದನು, ಶಾಲೆಗೆ ಹೋಗುವ ಮೊದಲು ಹತ್ತಿರದ ನಿವಾಸದಲ್ಲಿ ತನ್ನ ತಾಯಿಗೆ ಬೆದರಿಕೆ ಹಾಕಿದ್ದ ಎಂದು ಥಂಗ್ ಲುಂಗ್ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.

ಇದೇ ಮೊದಲೇನಲ್ಲ

ಥೈಲ್ಯಾಂಡ್‌ನಲ್ಲಿ ಬಂದೂಕು ದಾಳಿಗಳು ಅಸಾಮಾನ್ಯವಲ್ಲ, ಈ ಹಿಂದೆ ಸಾಕಷ್ಟು ಬಾರಿ ಇಂತಹ ಘಟನೆಗಳು ನಡೆದಿದೆ. ಈ ಪೈಕಿ 2022 ರಲ್ಲಿ ನರ್ಸರಿಯಲ್ಲಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ನಡೆಸಿದ್ದ ಬಂದೂಕು ದಾಳಿ ಅತ್ಯಂತ ಭೀಕರ ಎನ್ನಲಾಗಿದೆ. ಈ ದಾಳಿಯಲ್ಲಿ 22 ಮಕ್ಕಳು ಸೇರಿದಂತೆ 36 ಜನರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಪಂಜಾಬ್‌!

ಹುಬ್ಬಳ್ಳಿ Love Jihad ಕೇಸ್‌ಗೆ ಟ್ವಿಸ್ಟ್: Gym ಟ್ರೈನರ್ Sameer Mulla ಮೊಬೈಲ್‌ನಲ್ಲಿ ಯುವತಿಯರ ಫೋಟೋಗಳು ಪತ್ತೆ!

'ನಿಮ್ದೊಂದೆರಡು ಕಿತ್ತೋದ ವಿಮಾನವಾಹಕ ನೌಕೆಗಳು ಇದ್ಯಲ್ಲಾ ಯುದ್ಧಕ್ಕೆ ಕಳಿಸ್ತೀರಾ?' ಅಂತ ಕೇಳಿದ್ದೆ, ಮ್ಯಾಕ್ರಾನ್ ಗೆ ಹೆಂಡ್ತಿ ಕಾಟ: ಬ್ರಿಟನ್, ಫ್ರಾನ್ಸ್ ಬಗ್ಗೆ ಟ್ರಂಪ್ ವ್ಯಂಗ್ಯ

Bengal polls: ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್, ಚುನಾವಣಾ ಆಯೋಗ ನಿರ್ದೇಶನ!

SCROLL FOR NEXT