ತಾರಿಕ್ ರೆಹಮಾನ್‌ 
ವಿದೇಶ

ಭಾರತಕ್ಕೆ ಭೇಟಿ ನೀಡುವಂತೆ ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಆಹ್ವಾನ!

ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನು ಒಳಗೊಳ್ಳುವ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಭಾರತದ ಪ್ರತಿನಿಧಿಯಾಗಿ ಮಂಗಳವಾರ ಪಾಲ್ಗೊಂಡರು.

ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನು ಒಳಗೊಳ್ಳುವ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಪ್ರತ್ಯೇಕವಾಗಿ, ಸ್ಪೀಕರ್ ಅವರು ಬಾಂಗ್ಲಾದೇಶದ ನೂತನ ಪ್ರಧಾನಿಯನ್ನು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿಯವರ ಶುಭಾಶಯಗಳನ್ನು ತಿಳಿಸಿದರು. ಅಲ್ಲದೇ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರ ಆಹ್ವಾನವನ್ನು ಅವರು ರೆಹಮಾನ್‌ಗೆ ಹಸ್ತಾಂತರಿಸಿದರು ಎಂದು ಅಧಿಕಾರಿಗಳು ಢಾಕಾದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಾರಿಕ್ ರೆಹಮಾನ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿ ಕುರಿತು ಅನಿಸಿಕೆ ಹಂಚಿಕೊಂಡಿರುವ ಓಂ ಬಿರ್ಲಾ, ಢಾಕಾದಲ್ಲಿ ಪ್ರಧಾನ ಮಂತ್ರಿ ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶದ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಸಂತೋಷವಾಗಿದೆ. ಪ್ರಜಾಪ್ರಭುತ್ವ, ಪ್ರಗತಿಶೀಲ ಮತ್ತು ಎಲ್ಲರನ್ನು ಒಳಗೊಳ್ಳುವ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ" ಎಂದು ಬರೆದುಕೊಂಡಿದ್ದಾರೆ.

ಇನ್ನೂ ಭಾರತದಲ್ಲಿರುವ ಬಾಂಗ್ಲಾದೇಶದ ಹೈಕಮಿಷನರ್ ರಿಯಾಜ್ ಹಮೀದುಲ್ಲಾ ಕೂಡಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರದ ನಂತರ ಸೌಜನ್ಯ ಸಭೆಯಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಓಂ ಬಿರ್ಲಾ ಆಹ್ವಾನ ನೀಡಿದ್ದಕ್ಕೆ ಪ್ರಧಾನಿ ತಾರಿಕ್ ರೆಹಮಾನ್ ಅವರು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು, 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT