ಬಾರ್‌ ನಲ್ಲಿ ಸ್ಫೋಟ ಸಂಭವಿಸಿರುವುದು. 
ವಿದೇಶ

Switzerland ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಸ್ಫೋಟ: ಹಲವರು ಸಾವು; Video

ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ.

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ.

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ ನ ವಾಲಿಸ್ ಕ್ಯಾಂಟನ್‌ ನ ಪೊಲೀಸ್ ವಕ್ತಾರ ಗೇಟನ್ ಲಾಥಿಯನ್ ಈ ಕುರಿತು ಪ್ರತಿಕ್ರಿಯಿಸಿ, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಹಲವರು ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಹಾಗೂ ಇತರೆ ತುರ್ತು ಸೇವೆಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

ಸ್ಥಳೀಯ ಮಾಧ್ಯಮಗಳು ಪ್ರಕಟಿಸಿದ ಚಿತ್ರಗಳಲ್ಲಿ ಸ್ಫೋಟ ಸಂಭವಿಸಿದ ಕಟ್ಟಡ ಬೆಂಕಿಗಾಹುತಿಯಾಗಿರುವುದು ಕಂಡುಬಂದಿದೆ. ಸ್ಫೋಟದ ಕಾರಣ ಮತ್ತು ಹಿನ್ನೆಲೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸಾವು-ನೋವಿನ ಕುರಿತು ನಿಖರತೆಗಳು ಇನ್ನೂ ಖಚಿತವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್