ಡೊನಾಲ್ಡ್ ಟ್ರಂಪ್ 
ವಿದೇಶ

ಭಾರತ-ಪಾಕ್ ಯುದ್ಧದ ಸಮಯದಲ್ಲಿ 11 ಜೆಟ್‌ಗಳನ್ನು ಹೊಡೆದುರುಳಿಸಲಾಯಿತು: ಟ್ರಂಪ್ ಹೊಸ ಬಾಂಬ್!

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಸೇರಿದಂತೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಹೀಗಾಗಿ "ಎಲ್ಲರಿಗಿಂತ ಮೊದಲು" ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕಿತ್ತು ಎಂದು ಹೇಳಿದರು.

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ತಡೆದಿದ್ದು ತಾನೇ ಎಂಬ ಹೇಳಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪುನರುಚ್ಚರಿಸಿದ್ದು, ಉಭಯ ದೇಶಗಳ ನಡುವೆ ಕಳೆದ ವರ್ಷ ಮೇ ತಿಂಗಳಲ್ಲಿ ನಾಲ್ಕು ದಿನಗಳ ಕಾಲ ನಡೆದ ಯುದ್ಧದಲ್ಲಿ 11 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಏರ್ ಫೋರ್ಸ್ ಒನ್‌ನಲ್ಲಿ ಬುಧವಾರ ಮಾತನಾಡಿದ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಸೇರಿದಂತೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ. ಹೀಗಾಗಿ "ಎಲ್ಲರಿಗಿಂತ ಮೊದಲು" ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕಿತ್ತು ಎಂದು ಹೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವು "ಪರಮಾಣು ಯುದ್ಧ"ವಾಗಿ ಮಾರ್ಪಡುವ ಆತಂಕ ಇತ್ತು ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಯಾವುದೇ ಹೆಚ್ಚಿನ ವಿವರಗಳನ್ನು ನೀಡದೆ, ಭಾರತ- ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ "11 ವಿಮಾನಗಳನ್ನು ಹೊಡೆದುರುಳಿಸಲಾಗಿದೆ" ಎಂದು ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ.

ಈ ಎರಡೂ ದೇಶಗಳಲ್ಲಿ ಯಾವ ದೇಶ ಜೆಟ್‌ಗಳನ್ನು ಕಳೆದುಕೊಂಡಿದೆ? ಅಥವಾ ಎರಡೂ ಕಡೆಯವರಿಗೂ ನಷ್ಟವಾಗಿದೆಯೇ ಎಂಬುದನ್ನು ಮಾತ್ರ ಟ್ರಂಪ್ ನಿರ್ದಿಷ್ಟವಾಗಿ ಹೇಳಲಿಲ್ಲ.

ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಎಫ್ -16 ಜೆಟ್‌ಗಳು ಸೇರಿದಂತೆ ಕನಿಷ್ಠ ಒಂದು ಡಜನ್ ಪಾಕಿಸ್ತಾನಿ ಮಿಲಿಟರಿ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೋದಿ ಸರ್ಕಾರ ಹೇಳಿದೆ.

ಭಾರತ-ಪಾಕ್ ಸಂಘರ್ಷವನ್ನು ನಿಲ್ಲಿಸುವ ಮೂಲಕ 30 ರಿಂದ 50 ಮಿಲಿಯನ್ ಜೀವಗಳನ್ನು ಉಳಿಸಿದ ಕೀರ್ತಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ಸಲ್ಲುತ್ತದೆ ಎಂದು ಟ್ರಂಪ್ ಹೇಳಿದ್ದಾರೆ.

"ಊಹೂಂ, ಅದಕ್ಕಿಂತ ಹೆಚ್ಚಿನದೇನಾದರೂ ಇರಬಹುದಿತ್ತು" ಎಂದು ಟ್ರಂಪ್ ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತ ಕಳೆದ ವರ್ಷ ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು ಮತ್ತು ನಾಲ್ಕು ದಿನಗಳ ನಿರಂತರ ದಾಳಿಯ ನಂತರ ಮೇ 10 ರಂದು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಒಪ್ಪಂದಕ್ಕೆ ಬರಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!