ವಿದೇಶ

ಆಪರೇಷನ್ ಸಿಂಧೂರ್ ಅದ್ಭುತ ಯಶಸ್ಸು: ಹೀನಾಯ ಸೋಲನ್ನು ಮುಚ್ಚಿಡಲು ಸುಳ್ಳು ಕಥೆ; ಪಾಕ್ ಮಿಲಿಟರಿ ಶಕ್ತಿ ಲೇವಡಿ ಮಾಡಿದ ಇಮ್ರಾನ್ ಖಾನ್ ಸಹೋದರಿ!

ಭಾರತದ ಆಪರೇಷನ್ ಸಿಂದೂರ್ ಭಾರಿ ಯಶಸ್ಸನ್ನು ಕಂಡಿತು ಮತ್ತು ಪಾಕಿಸ್ತಾನ ಸೇನೆಯು ತನ್ನ ಸೋಲನ್ನು ಮರೆಮಾಡಲು ಸುಳ್ಳು ಕಥೆಗಳನ್ನು ಹೆಣೆಯಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ

ನವದೆಹಲಿ: ಪಾಕಿಸ್ತಾನದ ಸೇನಾಧಿಕಾರಿಗಳು ತಮ್ಮ ಹೀನಾಯ ಸೋಲನ್ನು ಮುಚ್ಚಿಡಲು ಸುಳ್ಳು ಕಥೆಗಳನ್ನು ಹೆಣೆಯುತ್ತಿದ್ದಾರೆ. ಭಾರತ ನಡೆಸಿದ ಆಪರೇಷನ್ ಸಿಂಧೂರ್ ಯಶಸ್ಸಿನ ಭೀತಿಯಿಂದ ಪಾಕ್ ಸೇನೆ ಜಾಗತಿಕ ಮಟ್ಟದಲ್ಲಿ ರಹಸ್ಯ ಒಪ್ಪಂದಗಳಿಗೆ ಸಹಿ ಹಾಕಿದೆ ಎಂದು ಪಾಕ್​ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ನೊರೀನ್ ನಿಯಾಜಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಜೈಲಿನಲ್ಲಿರುವ ಮಾಜಿ ಪ್ರಧಾನಿ ಸಹೋದರಿ ಮಾಡಿರುವ ಈ ಗಂಭೀರ ಆರೋಪ ಈಗ ಇಡೀ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಭಾರತದ ಆಪರೇಷನ್ ಸಿಂದೂರ್ ಭಾರಿ ಯಶಸ್ಸನ್ನು ಕಂಡಿತು ಮತ್ತು ಪಾಕಿಸ್ತಾನ ಸೇನೆಯು ತನ್ನ ಸೋಲನ್ನು ಮರೆಮಾಡಲು ಸುಳ್ಳು ಕಥೆಗಳನ್ನು ಹೆಣೆಯಲು ಪ್ರಯತ್ನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದ ಸೈನ್ಯ ಮತ್ತು ರಾಜ್ಯ ಸಂಸ್ಥೆಗಳ ವಿರುದ್ಧ ಸುಳ್ಳು, ಆಕ್ಷೇಪಾರ್ಹ ಮತ್ತು ಪ್ರಚೋದನಾಕಾರಿ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸೈಬರ್ ಅಪರಾಧ ತನಿಖಾ ಸಂಸ್ಥೆಯು ನೋರೀನ್ ನಿಯಾಜಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ದೇಶದ ಮಿಲಿಟರಿ ಮತ್ತು ಸರ್ಕಾರಿ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಸುಳ್ಳು, ಆಕ್ಷೇಪಾರ್ಹ ಮತ್ತು ಪ್ರಚೋದನಾಕಾರಿ ವಿಷಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಾದೇಶಿಕ ಭದ್ರತೆಯ ಕುರಿತು ನೋರೀನ್ ನೀಡಿದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ರಾಜಕೀಯ ವಲಯಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಒಂದು ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಬಯಸಿದ್ದರೆ, ಅವರು 2025 ರ ಮೇನಲ್ಲೇ ಪಾಕಿಸ್ತಾನವನ್ನು ಮಟ್ಟಹಾಕುತ್ತಿದ್ದರು ಎಂದು ಹೇಳಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ತಮ್ಮ ಹೇಳಿಕೆಯನ್ನು ಪಾಕಿಸ್ತಾನವು ಅಬ್ರಹಾಂ ಒಪ್ಪಂದಕ್ಕೆ ಸೇರಬಹುದಾದ ಸಾಧ್ಯತೆಗಳಿಗೆ ಹೋಲಿಸಿದ ಅವರು, ಮೋದಿಯವರನ್ನು ಸೂಪರ್ ಪವರ್ (ಅಗ್ರಶಕ್ತಿ) ಎಂದೂ ಕರೆದಿದ್ದಾರೆ. ಈ ಹೇಳಿಕೆಗಳು ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಟೀಕಾಕಾರರಿಂದ ವಿಭಿನ್ನ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿವೆ.

ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಿಂದಾಗಿ ಪಾಕಿಸ್ತಾನದ ರಾಜಕೀಯ ವಲಯದಲ್ಲಿ ಭಾರಿ ಆಕ್ರೋಶ ಭುಗಿಲೆದ್ದಿದೆ ಎಂದು ಹೇಳಲಾಗುತ್ತಿದೆ. ಭಾರತ ಅತ್ಯಂತ ಚಾಣಾಕ್ಷತನದಿಂದ ನಡೆಸಿದ ಸರಣಿ ಕ್ಷಿಪಣಿ ದಾಳಿಗಳಿಂದ ಪಾಕಿಸ್ತಾನ ಚೇತರಿಸಿಕೊಳ್ಳಲು ಅವಕಾಶವೇ ದೊರೆಯಲಿಲ್ಲ. ಕೇವಲ 88 ಗಂಟೆಗಳ ಅವಧಿಯಲ್ಲಿ ಭಾರತೀಯ ಸೇನೆಯು ಪ್ರಮುಖ ಸಂಘರ್ಷ ವಲಯಗಳಲ್ಲಿ ಸಂಪೂರ್ಣ ಪ್ರಾಬಲ್ಯವನ್ನು ಸಾಧಿಸಿತು ಎನ್ನಲಾಗುತ್ತಿದೆ.

ಪಾಕಿಸ್ತಾನದ ಆಂತರಿಕ ರಕ್ಷಣಾ ಕೊರತೆಯನ್ನು ಸಹ ನಿಯಾಜಿ ಮುಕ್ತವಾಗಿ ಒಪ್ಪಿಕೊಂಡಿದ್ದು, ಸಾಮಾಗ್ರಿ, ತಂತ್ರಜ್ಞಾನ ಮತ್ತು ಆರ್ಥಿಕ ಬಲದಲ್ಲಿ ಭಾರತದ ಮಿಲಿಟರಿ ಶಕ್ತಿ ಪಾಕಿಸ್ತಾನಕ್ಕಿಂತ ಕನಿಷ್ಠ ನಾಲ್ಕು ಪಟ್ಟು ಬಲಿಷ್ಠವಾಗಿದೆ ಎಂದು ಅವರು ಹೇಳಿದ್ದಾರೆ. ಹೀಗಿರುವಾಗ ಭಾರತೀಯ ಸಶಸ್ತ್ರ ಪಡೆಗಳನ್ನು ಸೋಲಿಸುವ ಯಾವುದೇ ಸಾಮರ್ಥ್ಯ ಪಾಕ್ ಸೇನೆಗೆ ಇಲ್ಲ ಎಂದು ಅವರು ಸ್ವಂತ ದೇಶದ ಮಿಲಿಟರಿ ಶಕ್ತಿಯನ್ನು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!