ಪತ್ನಿಯೊಂದಿಗೆ ಡೇವ್ ಫಿಜಿ 
ವಿದೇಶ

ಹೃದಯ ವಿದ್ರಾವಕ ಘಟನೆ: ಹನಿಮೂನ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್‌ ಪತನ; ಮದುವೆಯಾದ ಕೆಲವೇ ಗಂಟೆಗಳಲ್ಲಿ ಪತ್ನಿ ಮಡಿಲಲ್ಲೇ ಪ್ರಾಣಬಿಟ್ಟ ಪೈಲಟ್!

ಡೆಲ್ಟಾ ಏರ್ ಲೈನ್ಸ್ ಪೈಲಟ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ 26 ವರ್ಷದ ಡೇವ್ ಫಿಜಿ ಅವರು, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ತನ್ನ ಪತ್ನಿಯೊಂದಿಗೆ ಹನಿಮೂನ್‌ಗೆ ತೆರಳುತ್ತಿದ್ದರು.

ವಾಷಿಂಗ್ಟನ್: "ನಾನು ಸಂತೋಷವಾಗಿದ್ದೇನೆ" ಎಂದು ಹೇಳಿದ ಕೆಲವೇ ಗಂಟೆಗಳ ನಂತರ, ಅಮೆರಿಕದ ಜಾರ್ಜಿಯಾದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಭಾರತೀಯ ಮೂಲದ ಪೈಲಟ್ ಒಬ್ಬರು ಮೃತಪಟ್ಟಿದ್ದಾರೆ.

ಡೆಲ್ಟಾ ಏರ್ ಲೈನ್ಸ್ ಪೈಲಟ್ ಆಗಿ ಕೆಲಸ ಮಾಡುತ್ತಿದ್ದ ಕೇರಳದ ಮೂಲದ 26 ವರ್ಷದ ಡೇವ್ ಫಿಜಿ ಅವರು, ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ತನ್ನ ಪತ್ನಿಯೊಂದಿಗೆ ಹನಿಮೂನ್‌ಗೆ ತೆರಳುತ್ತಿದ್ದರು. ಈ ವೇಳೆ ಸ್ವತಃ ಡೇವ್ ಹಾರಿಸುತ್ತಿದ್ದ ರಾಬಿನ್ಸನ್ R66 ಹೆಲಿಕಾಪ್ಟರ್ ಡಾಸನ್‌ವಿಲ್ಲೆ ಮದುವೆ ಮಂಟಪದ ಬಳಿಯೇ ಪತನಗೊಂಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅಟ್ಲಾಂಟಾ ನ್ಯೂಸ್ ಫಸ್ಟ್ ವರದಿಯ ಪ್ರಕಾರ, ಅಧಿಕಾರಿಗಳು ಇನ್ನೂ ಗುರುತಿಸಲಾಗದ ಮತ್ತೊಬ್ಬ ಚಾಪರ್ ಪೈಲಟ್ ಕೂಡ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ವೃತ್ತಿಯಲ್ಲಿ ನರ್ಸ್ ಆಗಿರುವ ಡೇವ್ ಫಿಜಿ ಅವರ ವಧು ಜೆಸ್ನಿ ಅವರು ಭೀಕರ ಅಪಘಾತದಲ್ಲಿ ಬದುಕುಳಿದಿದ್ದಾರೆ ಮತ್ತು ಮೆಟ್ರೋ ಅಟ್ಲಾಂಟಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ದಿ ಲಾಸ್ಟ್ ಹ್ಯಾಪಿ ಅವರ್ಸ್

ನನ್ನ ಮಗ ಅಷ್ಟೊಂದು ಸಂತೋಷವಾಗಿದ್ದನ್ನು ನಾನು ಯವತ್ತೂ ನೋಡಿರಲಿಲ್ಲ. ಅದೆಲ್ಲ ಕೆಲ ಗಂಟೆಗಳಲ್ಲೇ ಅಂತ್ಯವಾಗುತ್ತದೆ ಎಂದುಕೊಂಡಿರಲಿಲ್ಲ ಎಂದು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಹತ್ತು ವರ್ಷಗಳ ಹಿಂದೆ ಚರ್ಚ್‌ನಲ್ಲಿ ಪರಿಚಯವಾಗಿದ್ದ ಜೆಸ್ನಿಯನ್ನು ಡೇವ್ ಶುಕ್ರವಾರವಷ್ಟೇ (ಮೇ 29) ಮದುವೆಯಾಗಿದ್ದರು. ಡಾಸನ್‌ವಿಲ್ಲೆಯ ರೆಸಾರ್ಟ್‌ವೊಂದರಲ್ಲಿ ನಡೆದ ಅದ್ಧೂರಿ ವಿವಾಹದಲ್ಲಿ ಸುಮಾರು 400ಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸಿದ್ದರು. ಆರತಕ್ಷತೆ ಮುಗಿದ ನಂತರ ದಂಪತಿ ಜಾರ್ಜಿಯಾದ ಡೆಕಾಲ್ಬ್-ಪೀಚ್‌ಟ್ರೀ ವಿಮಾನ ನಿಲ್ದಾಣಕ್ಕೆ ತೆರಳಲು ʻRobinson R66ʼ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿಂದ ಅವರು ಅಟ್ಲಾಂಟಾದ ಹೋಟೆಲ್‌ಗೆ ತೆರಳಬೇಕಿತ್ತು. ಆದರೆ, ಹೆಲಿಕಾಪ್ಟರ್ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ನಿಯಂತ್ರಣ ಕಳೆದುಕೊಂಡು ಮದುವೆ ಮಂಟಪದ ಸಮೀಪದ ದಟ್ಟ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!