ಆಸ್ಟ್ರೇಲಿಯಾ ಉಪ ಪ್ರಧಾನಿ ರಿಚರ್ಡ್ ಮಾರ್ಲೆಸ್ 
ವಿದೇಶ

RCB ವಿಕ್ಟರಿ ಶ್ಲಾಘಿಸಿದ ಆಸ್ಟ್ರೇಲಿಯಾ ಉಪ ಪ್ರಧಾನಿ; Virat kohli ಪ್ರದರ್ಶನಕ್ಕೆ Richard Marles ಫುಲ್ ಫಿದಾ, ಹೇಜಲ್ವುಡ್, ಟಿಮ್ ಡೇವಿಡ್ ಗೂ ಮೆಚ್ಚುಗೆ!

'RCB ತಂಡದ ಗೆಲುವಿನಲ್ಲಿ ವಿರಾಟ್ ಕೊಹ್ಲಿ (Virat Kohli), ಜಾಶ್ ಹೇಜಲ್ವುಡ್ (Josh Hazlewood) ಮತ್ತು ಟಿಮ್ ಡೇವಿಡ್ (Tim David) ಅವರ ಮಹತ್ವದ ಪಾತ್ರವನ್ನು ವಿಶೇಷವಾಗಿ ಉಲ್ಲೇಖಿಸಿದರು.

ನವದೆಹಲಿ: ಐಪಿಎಲ್ 2026 ಟೂರ್ನಿಯ ಫೈನಲ್ ನಲ್ಲಿ ಭರ್ಜರಿಯಾಗಿ ಗೆದ್ದು ಸತತ 2ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾಧನೆಗೆ ಆಸ್ಟ್ರೇಲಿಯಾದ ಉಪ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದಾರೆ.

ಆಸ್ಟ್ರೇಲಿಯಾದ ಉಪಪ್ರಧಾನಿ ಹಾಗೂ ರಕ್ಷಣಾ ಸಚಿವ ರಿಚರ್ಡ್ ಮಾರ್ಲೆಸ್ (Richard Marles) ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ 2026 ಪ್ರಶಸ್ತಿ ಗೆಲುವನ್ನು ಶ್ಲಾಘಿಸಿ, ಇದು ಭಾರತ-ಆಸ್ಟ್ರೇಲಿಯಾ ನಡುವಿನ ಬಲವಾದ ಸಂಬಂಧದ ಪ್ರತೀಕವಾಗಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'RCB ತಂಡದ ಗೆಲುವಿನಲ್ಲಿ ವಿರಾಟ್ ಕೊಹ್ಲಿ (Virat Kohli), ಜಾಶ್ ಹೇಜಲ್ವುಡ್ (Josh Hazlewood) ಮತ್ತು ಟಿಮ್ ಡೇವಿಡ್ (Tim David) ಅವರ ಮಹತ್ವದ ಪಾತ್ರವನ್ನು ವಿಶೇಷವಾಗಿ ಉಲ್ಲೇಖಿಸಿದರು.

"ಕಳೆದ ವರ್ಷ ನೋಡಿದಂತೆಯೇ, ನಿನ್ನೆ ರಾತ್ರಿ RCB ಮತ್ತೊಮ್ಮೆ ಚಾಂಪಿಯನ್ ಆಗುವುದನ್ನು ನಾವು ಕಂಡೆವು. ವಿರಾಟ್ ಕೊಹ್ಲಿ 75 ರನ್‌ಗಳಿಸಿ ಅಜೇಯರಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಆದರೆ ಅವರ ಜೊತೆಗೆ ಜೋಶ್ ಹೇಜಲ್‌ವುಡ್ ಮತ್ತು ಟಿಮ್ ಡೇವಿಡ್ ಕೂಡಿದ್ದರು.

ಹೀಗಾಗಿ RCBಯ ಗೆಲುವಿನಲ್ಲಿ ಭಾರತ-ಆಸ್ಟ್ರೇಲಿಯಾ ಸ್ನೇಹದ ಸ್ಪಷ್ಟ ಚಿತ್ರಣ ಕಂಡುಬಂತು. ಇದು ನಮ್ಮ ಎರಡು ದೇಶಗಳ ನಡುವಿನ ಸಂಬಂಧವನ್ನು ಪ್ರತಿಬಿಂಬಿಸುತ್ತದೆ' ಎಂದರು.

ಇದೇ ವೇಳೆ ಅವರು ವಿರಾಟ್ ಕೊಹ್ಲಿಯ ಜನಪ್ರಿಯತೆಯ ಕುರಿತು ಮಾತನಾಡಿದ ಅವರು, "ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ವಿರಾಟ್ ಕೊಹ್ಲಿ ಅತ್ಯಂತ ದೊಡ್ಡ ಹೆಸರಾಗಿದ್ದಾರೆ" ಎಂದರು.

ಉಭಯ ದೇಶಗಳ ಒಗ್ಗೂಡಿಸುವ ಸೇತುವೆ ಕ್ರಿಕೆಟ್

ಅಂತೆಯೇ ಕ್ರಿಕೆಟ್ ಭಾರತ ಮತ್ತು ಆಸ್ಟ್ರೇಲಿಯಾವನ್ನು ಒಗ್ಗೂಡಿಸುವ ಪ್ರಮುಖ ಸೇತುವೆಯಾಗಿದ್ದು, ಎರಡು ರಾಷ್ಟ್ರಗಳ ನಡುವಿನ ಸ್ನೇಹ ಮತ್ತು ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್