ಪಾಕಿಸ್ತಾನ ಏರ್ ಸ್ಟ್ರೈಕ್ 
ವಿದೇಶ

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಏರ್ ಸ್ಟ್ರೈಕ್: 11 ಮಕ್ಕಳು ಸೇರಿದಂತೆ 13 ಜನರ ಸಾವು- ತಾಲಿಬಾನ್

ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ.

ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ಪಡೆಗಳು ಮಂಗಳವಾರ ರಾತ್ರಿಯಿಡೀ ನಡೆಸಿದ ವೈಮಾನಿಕ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದಾದ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಉದ್ವಿಗ್ನತೆ ತೀವ್ರಗೊಂಡಿದೆ. ಈ ದಾಳಿಯನ್ನು ತಾಲಿಬಾನ್ ಸರ್ಕಾರ ಬಲವಾಗಿ ಖಂಡಿಸಿದೆ.

ಅಫ್ಘಾನ್ ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಉಲ್ಲಂಘಿಸುತ್ತಿದ್ದು, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದೆ.

ಮಂಗಳವಾರ ಮತ್ತು ಬುಧವಾರದ ನಡುವೆ ದಾಳಿ ನಡೆದಿದೆ. ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿನ ವಸತಿ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 14 ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ದಾಳಿಗಳನ್ನು ಖಂಡಿಸಿದ್ದು, ಪಾಕಿಸ್ತಾನದ ವಿಮಾನಗಳು ಅಫ್ಘಾನ್ ವಾಯುಪ್ರದೇಶವನ್ನು ಪ್ರವೇಶಿಸಿ ನಾಗರಿಕರ ಮನೆಗಳ ಮೇಲೆ ದಾಳಿ ಮಾಡಿವೆ ಎಂದು ತಿಳಿಸಿದ್ದಾರೆ.

ಅಫ್ಘಾನ್ ನಾಗರಿಕರ ವಿರುದ್ಧ "ಅಪ್ರಚೋದಿತ ದಾಳಿ ಎಂದು ಅವರು ಕರೆದಿದ್ದು, ಮೃತರಲ್ಲಿ 11 ಮಕ್ಕಳು, ಒಬ್ಬ ಮಹಿಳೆ ಮತ್ತು ಒಬ್ಬ ವೃದ್ಧರು ಸೇರಿದ್ದಾರೆ. ಪಾಕಿಸ್ತಾನವು ಅಂತಾರಾಷ್ಟ್ರೀಯ ನಿಯಮಗಳು ಮತ್ತು ಅಫ್ಘಾನಿಸ್ತಾನದ ಪ್ರಾದೇಶಿಕ ಸಮಗ್ರತೆಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ಹೋರಾಟಗಾರರಲ್ಲದವರನ್ನು ಗುರಿಯಾಗಿಸಿಕೊಂಡಿದೆ ಎಂದು ತಾಲಿಬಾನ್ ಆಡಳಿತ ಹೇಳಿದೆ. ಕುನಾರ್, ಖೋಸ್ಟ್ ಮತ್ತು ಪಕ್ತಿಕಾ ಪ್ರಾಂತ್ಯಗಳಲ್ಲಿ ದಾಳಿಗಳು ನಡೆದಿವೆ ಎಂದು ಅಫಘಾನ್ ಅಧಿಕಾರಿಗಳು ಹೇಳಿದ್ದಾರೆ, ಇವೆಲ್ಲವೂ ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಗೆ ಹತ್ತಿರದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಇಂದು ಸಂಜೆ 4.05 ಕ್ಕೆ ಪ್ರಮಾಣವಚನ ಕಾರ್ಯಕ್ರಮ, ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ…

ಸಂಪುಟ ವಿಸ್ತರಣೆಯಲ್ಲಿ ಭಾರೀ ಟ್ವಿಸ್ಟ್; ಸಿದ್ದು ಸಂಪುಟದ 12 ಸಚಿವರಿಗೆ ಕೊಕ್; ಹಿರಿಯರಿಗೂ ಕೈತಪ್ಪಿದ ಸಚಿವ ಸ್ಥಾನ..!

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ಬಿಗ್ ರಿಲೀಫ್, ದೆಹಲಿ ನ್ಯಾಯಾಲಯದಿಂದ ಖುಲಾಸೆ..!

NEET-UG ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಇನ್ನೂ 1 ಕೋಟಿ ರೂ ಪರಿಹಾರ ನೀಡದ ಸರ್ಕಾರ! ಸಿಜೆಪಿ ವಾರ್ನಿಂಗ್ ಏನು?

'ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’: ಭಾರತ-ಅಫ್ಘಾನ್ ಗೆಳತನಕ್ಕೆ Pak ಅಸೂಯೆ, Quran ಉಲ್ಲೇಖಿಸಿ ವಿಷ ಕಾರಿದ ಸೇನಾ ವಕ್ತಾರ..!