ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ 
ವಿದೇಶ

'ಒಪ್ಪಂದಕ್ಕೆ ಸಹಿ ಹಾಕಿದ ಮಾತ್ರಕ್ಕೆ ಹಣ ನೀಡಿದ್ದೇವೆ ಎಂದಲ್ಲ': ಇರಾನ್ ಮಾತುಕತೆ ಕುರಿತು ಅಮೆರಿಕ ಉಪಾಧ್ಯಕ್ಷ JD Vance ಸ್ಪಷ್ಟನೆ

ಜಲಸಂಧಿಯನ್ನು ಪುನಃ ತೆರೆಯುವ ಮತ್ತು ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮವನ್ನು ಕೊನೆಗೊಳಿಸುವ ಒಪ್ಪಂದದ ಬಗ್ಗೆ ಸಾಕಷ್ಟು ಸುಳ್ಳು ಮಾಹಿತಿ ಹರಿದಾಡುತ್ತಿದೆ.

ವಾಷಿಂಗ್ಟನ್: ಶಾಂತಿ ಸಂಧಾನ ಒಪ್ಪಂದಕ್ಕೆ ಸಹಿ ಹಾಕಿದ ಮಾತ್ರಕ್ಕೆ ಹಣ ನೀಡಿದ್ದೇವೆ ಎಂದಲ್ಲ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance) ತೆರೆ ಎಳೆದಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಜೆಡೆ ವ್ಯಾನ್ಸ್ ಶುಕ್ರವಾರ, ಹೋರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವುದು ಹಾಗೂ ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮಕ್ಕೆ ಕಡಿವಾಣ ಹಾಕುವ ಸಾಧ್ಯತೆಯಿರುವ ಒಪ್ಪಂದದ ಬಗ್ಗೆ ಹರಿದಾಡುತ್ತಿರುವ ಮಾಹಿತಿಯನ್ನು "ಸುಳ್ಳು ಮಾಹಿತಿ" ಎಂದು ತಳ್ಳಿಹಾಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವ್ಯಾನ್ಸ್, "ಜಲಸಂಧಿಯನ್ನು ಪುನಃ ತೆರೆಯುವ ಮತ್ತು ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮವನ್ನು ಕೊನೆಗೊಳಿಸುವ ಒಪ್ಪಂದದ ಬಗ್ಗೆ ಸಾಕಷ್ಟು ಸುಳ್ಳು ಮಾಹಿತಿ ಹರಿದಾಡುತ್ತಿದೆ.

ಮೊದಲನೆಯದಾಗಿ, ಇರಾನ್‌ಗೆ ಯಾವುದೇ ನಗದು ಹಣ ನೀಡಲಾಗುತ್ತಿಲ್ಲ. ಕೇವಲ ಒಪ್ಪಂದಕ್ಕೆ ಸಹಿ ಹಾಕಿದ ಕಾರಣಕ್ಕೆ ಅಥವಾ ಸಭೆಯಲ್ಲಿ ಭಾಗವಹಿಸಿದ ಕಾರಣಕ್ಕೆ ಯಾವುದೇ ಹಣವನ್ನು ಬಿಡುಗಡೆ ಮಾಡಲಾಗುವುದಿಲ್ಲ" ಎಂದು ಹೇಳಿದ್ದಾರೆ.

ಪ್ರಸ್ತಾವಿತ ಒಪ್ಪಂದದ ಚೌಕಟ್ಟು ಅಮೆರಿಕ ಹಾಗೂ ಅದರ ಮಿತ್ರ ರಾಷ್ಟ್ರಗಳ ಭದ್ರತಾ ಹಿತಾಸಕ್ತಿಗಳಿಗೆ ಆದ್ಯತೆ ನೀಡುವ ರೀತಿಯಲ್ಲಿ ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇರಾನ್‌ಗೆ ದೊರೆಯಬಹುದಾದ ಯಾವುದೇ ಆರ್ಥಿಕ ಪ್ರಯೋಜನಗಳು, ಒಪ್ಪಂದದ ಷರತ್ತುಗಳನ್ನು ಅದು ಎಷ್ಟರ ಮಟ್ಟಿಗೆ ಪಾಲಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತವೆ ಎಂದು ವ್ಯಾನ್ಸ್ ಹೇಳಿದ್ದಾರೆ.

"ಒಪ್ಪಂದದ ನಿಯಮಗಳನ್ನು ಇರಾನ್ ಸಂಪೂರ್ಣವಾಗಿ ಪಾಲಿಸಿದರೆ ಮಾತ್ರ ಆರ್ಥಿಕ ಲಾಭಗಳು ದೊರೆಯಲಿವೆ. ಈ ಒಪ್ಪಂದವು ಮಧ್ಯಪ್ರಾಚ್ಯ ಪ್ರದೇಶದಲ್ಲಿ ಮಹತ್ವದ ಬದಲಾವಣೆಯನ್ನು ತರಬಲ್ಲದು ಹಾಗೂ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡುವ ಸಾಧ್ಯತೆಯೂ ಇದೆ ಎಂದೂ ವ್ಯಾನ್ಸ್ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video