ಬಿ-52 ಬಾಂಬರ್ ಪತನ 
ವಿದೇಶ

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ; ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

ಸೋಮವಾರ ಬೆಳಿಗ್ಗೆ ಸುಮಾರು 11:20 ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿಮಾನದಲ್ಲಿದ್ದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ವಾಯುನೆಲೆಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಕ್ಯಾಲಿಫೋರ್ನಿಯಾ: ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಯುಎಸ್ ವಾಯುಪಡೆಯ ಪ್ರಮುಖ ಕೇಂದ್ರವಾದ 'ಎಡ್ವರ್ಡ್ಸ್ ವಾಯುನೆಲೆ'ಯಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಬಿ-52 ಬಾಂಬರ್ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಂಟು ಜನರು ದುರ್ಮರಣಕ್ಕೀಡಾಗಿದ್ದಾರೆ.

ಸೋಮವಾರ ಬೆಳಿಗ್ಗೆ ಸುಮಾರು 11:20 ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ವಿಮಾನದಲ್ಲಿದ್ದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ವಾಯುನೆಲೆಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ದಿನನಿತ್ಯದ ಪರೀಕ್ಷಾ ಕಾರ್ಯಾಚರಣೆಯಲ್ಲಿ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ವಾಯುಪಡೆಯ ಬಿ -52 ಸ್ಟ್ರಾಟೋಫೋರ್ಟ್ರೆಸ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ತುರ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿವೆ.

ಅಪಘಾತದ ಕಾರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು 'ಎಡ್ವರ್ಡ್ಸ್ ವಾಯುನೆಲೆ ಹೇಳಿಕೆಯಲ್ಲಿ ತಿಳಿಸಿದೆ.

ಘಟನೆಯ ನಂತರ ವಾಯುನೆಲೆಯನ್ನು ತಕ್ಷಣವೇ ಬಂದ್ ಮಾಡಲಾಯಿತು. ಒಳ ಬರುವ ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಯಿತು.ರಕ್ಷಣಾ ಮತ್ತು ತನಿಖಾ ಕಾರ್ಯಾಚರಣೆಗೆ ಹೆಚ್ಚಿನ ಆದ್ಯತೆ ನೀಡಲು ವಾಣಿಜ್ಯೇತರ ಹಾಗೂ ಸಾಮಾನ್ಯ ಸಂದರ್ಶಕರ ಪಾಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಬೋಯಿಂಗ್ ಬಿ-52 ಸ್ಟ್ರಾಟೊಫೋರ್ಟ್ರೆಸ್ ದೀರ್ಘ-ಶ್ರೇಣಿಯ ಅತ್ಯಂತ ಶಕ್ತಿಶಾಲಿ ಬಾಂಬರ್ ವಿಮಾನವಾಗಿದ್ದು, 1955 ರಿಂದ ಅಮೆರಿಕ ಸೇನೆಯಲ್ಲಿದೆ. ಇದನ್ನು ಸಾಂಪ್ರದಾಯಿಕ ಹಾಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಬಳಸಲಾಗುತ್ತದೆ. ಇನ್ನು ಈ ದುರಂತ ನಡೆದ ಎಡ್ವರ್ಡ್ಸ್ ವಾಯುನೆಲೆಯು ಅಮೆರಿಕದ ವಿಮಾನಗಳ ಪರೀಕ್ಷೆ ಮತ್ತು ಅಭಿವೃದ್ಧಿಯ ಪ್ರಮುಖ ಕೇಂದ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ