ಟ್ರಂಪ್ ಮತ್ತು ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 
ವಿದೇಶ

ಇಸ್ರೇಲ್-ಲೆಬನಾನ್ ನಡುವೆ ಮುಂದುವರೆದ ಸಂಘರ್ಷ: ಇನ್ನು ಸುಮ್ಮನಿರಲ್ಲ, 'ಒಪ್ಪಂದ ಪಾಲಿಸಿ-ಇಲ್ಲವೇ ಪರಿಣಾಮ ಎದುರಿಸಿ'; ಅಮೆರಿಕ ವಿರುದ್ಧ ಇರಾನ್ ಗುಡುಗು

ಈ ಪರಿಸ್ಥಿತಿ ಮುಂದುವರಿದರೆ ಅದಕ್ಕೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ. ಒಪ್ಪಂದದ ಷರತ್ತು ಉಲ್ಲಂಘನೆಗೆ ಇರಾನ್ ಬುದ್ಧಿವಂತಿಕೆಯ ಹಾಗೂ ತಡೆಯುವ ರೀತಿಯ ಪ್ರತಿಕ್ರಿಯೆ ನೀಡಲಿದೆ. ನಾವು ನಮ್ಮ ನಿಲುವಿನಲ್ಲಿ ದೃಢವಾಗಿದ್ದೇವೆ.

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯ ನಡುವೆಯೇ ಇರಾನ್ ಶುಕ್ರವಾರ ಅಮೆರಿಕಾದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದದ (MoU) ಷರತ್ತುಗಳನ್ನು ಅಮೆರಿಕ ಪಾಲಿಸುತ್ತಿಲ್ಲ ಎಂದು ಆರೋಪಿಸಿದೆ. ಜೊತೆಗೆ, ಲೆಬನಾನ್ ಮೇಲೆ ಇಸ್ರೇಲ್ ನಡೆಸುತ್ತಿರುವ ವೈಮಾನಿಕ ದಾಳಿಗಳು ಮುಂದುವರಿದರೆ ಅದರ ಪರಿಣಾಮ ಗಂಭೀರವಾಗಿರಲಿದೆ ಎಂದು ಎಚ್ಚರಿಕೆ ನೀಡಿದೆ.

ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಮುಖ್ಯಸ್ಥ ಎಬ್ರಾಹಿಂ ಅಜೀಜಿ ಅವರು ಎಕ್ಸ್ (X) ನಲ್ಲಿ ಪ್ರತಿಕ್ರಿಯಿಸಿ, "ಶಾಂತಿ ಒಪ್ಪಂದದ ಮೊದಲ ಷರತ್ತನ್ನು ಜಾರಿಗೆ ತರಲು ಅಮೆರಿಕ ವಿಫಲವಾಗಿದೆ. ಇದರಿಂದ ಇರಾನ್ ಜನರ ವಿಶ್ವಾಸಗಳಿಸುವ ಇಚ್ಛಾಶಕ್ತಿ ಅಮೆರಿಕಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ" ಎಂದು ಹೇಳಿದ್ದಾರೆ.

ಅಮೆರಿಕ ಒಪ್ಪಂದದ ಬದ್ಧತೆಗಳನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದ ಅವರು, "ಈ ಪರಿಸ್ಥಿತಿ ಮುಂದುವರಿದರೆ ಅದಕ್ಕೆ ಅಮೆರಿಕ ಭಾರೀ ಬೆಲೆ ತೆರಬೇಕಾಗುತ್ತದೆ. ಒಪ್ಪಂದದ ಷರತ್ತು ಉಲ್ಲಂಘನೆಗೆ ಇರಾನ್ ಬುದ್ಧಿವಂತಿಕೆಯ ಹಾಗೂ ತಡೆಯುವ ರೀತಿಯ ಪ್ರತಿಕ್ರಿಯೆ ನೀಡಲಿದೆ. ನಾವು ನಮ್ಮ ನಿಲುವಿನಲ್ಲಿ ದೃಢವಾಗಿದ್ದೇವೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಅಮೆರಿಕ-ಇರಾನ್ ನಡುವಿನ MoU ಪ್ರಕಾರ, ಮೊದಲ ಷರತ್ತಿನಲ್ಲಿ "ಲೆಬನಾನ್ ಸೇರಿದಂತೆ ಎಲ್ಲಾ ಪ್ರದೇಶಗಳಲ್ಲಿ ತಕ್ಷಣ ಮತ್ತು ಶಾಶ್ವತವಾಗಿ ಸೇನಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಬೇಕು" ಎಂದು ಉಲ್ಲೇಖಿಸಲಾಗಿದೆ.

ಇದಕ್ಕೂ ಮುನ್ನ, ದಕ್ಷಿಣ ಲೆಬನಾನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಸ್ರೇಲಿ ಪಡೆಗಳ ಮೇಲೆ ಹಿಜ್ಬುಲ್ಲಾ ದಾಳಿ ನಡೆಸಿದ ಪರಿಣಾಮ ನಾಲ್ವರು ಸೈನಿಕರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿಯಾಗಿ ಇಸ್ರೇಲ್, ಲೆಬನಾನ್‌ನ ಬೆಕಾ ಕಣಿವೆಯಲ್ಲಿರುವ ಹಿಜ್ಬುಲ್ಲಾ ಮೂಲಸೌಕರ್ಯಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು.

ಹಿಜ್ಬುಲ್ಲಾ ನಡೆಸಿದ ಡ್ರೋನ್ ದಾಳಿಯಲ್ಲಿ ಇಸ್ರೇಲ್ ರಕ್ಷಣಾ ಪಡೆ (IDF) ಯ ಟ್ಯಾಂಕ್ ಬೆಟಾಲಿಯನ್ ಕಮಾಂಡರ್ ಸೇರಿದಂತೆ ನಾಲ್ವರು ಸೈನಿಕರು ಮೃತಪಟ್ಟಿದ್ದರು. ಈ ಬೆಳವಣಿಗೆಯ ಬಳಿಕ ಎರಡೂ ಕಡೆಯಿಂದ ಮತ್ತೆ ದಾಳಿಗಳು ನಡೆದಿದ್ದು, ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿತ್ತು.

ಆದರೆ, ನಂತರ ಅಮೆರಿಕ ಮತ್ತು ಕತಾರ್ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಹಾಗೂ ಹಿಜ್ಬುಲ್ಲಾ ನಡುವೆ ಹೊಸ ಕದನ ವಿರಾಮ ಒಪ್ಪಂದಕ್ಕೆ ಸಹಮತ ವ್ಯಕ್ತವಾಗಿದೆ. ಇರಾನ್ ಕೂಡ ಈ ಒಪ್ಪಂದ ಸಾಧ್ಯವಾಗುವಲ್ಲಿ ಪಾತ್ರವಹಿಸಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ಇದೇ ವೇಳೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹಿಜ್ಬುಲ್ಲಾ ಮತ್ತು ಇಸ್ರೇಲ್ ನಡುವಿನ ಕದನ ವಿರಾಮಕ್ಕೆ ತಾವು ಇಸ್ರೇಲ್ ಸರ್ಕಾರವನ್ನು ಒಪ್ಪುವಂತೆ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ NBC News ಗೆ ನೀಡಿದ ಸಂದರ್ಶನದಲ್ಲಿ, ಇಸ್ರೇಲ್‌ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ ಮತ್ತು ಕದನ ವಿರಾಮ ಪ್ರಯತ್ನಗಳಿಗೆ ಬೆಂಬಲ ನೀಡುವಂತೆ ನೆತನ್ಯಾಹು ಸರ್ಕಾರವನ್ನು ಉತ್ತೇಜಿಸಿದ್ದೆ ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಹಿಜ್ಬುಲ್ಲಾ ಕದನ ವಿರಾಮದ ಕುರಿತು ಪ್ರತಿಕ್ರಿಯಿಸಿದ ಟ್ರಂಪ್, "ಇದು ಸಕಾರಾತ್ಮಕ ಬೆಳವಣಿಗೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಗ್ಗಿಲ್ಲದ AI ಕಂಟೆಂಟ್, ಡೀಪ್‌ಫೇಕ್‌ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಕ್ಯಾಲಿಫೋರ್ನಿಯಾದಲ್ಲಿ ಏಕಾಂಗಿ ಪಾದಯಾತ್ರೆ: ಪೆಟ್ರೋಲಿಯಂಗೆ ಪರ್ಯಾಯ ಶೋಧದಲ್ಲಿ ತೊಡಗಿದ್ದ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿ ನಿಗೂಢ ಸಾವು!

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್