ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ 
ವಿದೇಶ

ಎರಡೇ ವರ್ಷಕ್ಕೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ರಾಜೀನಾಮೆ; ಮುಂದಿನ ಪ್ರಧಾನಿ ಯಾರು?

ಅಧಿಕಾರ ವಹಿಸಿಕೊಂಡ ಎರಡೇ ವರ್ಷಗಳಲ್ಲಿ ಅವಧಿಗೂ ಮುನ್ನ ಕೀರ್ ಸ್ಟಾರ್ಮರ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟನ್ ರಾಜಕೀಯ ನಾಟಕೀಯ ತಿರುವು ಪಡೆದುಕೊಂಡಿದೆ.

ಲಂಡನ್: ತಮ್ಮ ಸರ್ಕಾರದ ಜನಪ್ರಿಯತೆ ಕ್ಷೀಣಿಸುತ್ತಿರುವ ಬಗ್ಗೆ ಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ.

ಅಧಿಕಾರ ವಹಿಸಿಕೊಂಡ ಎರಡೇ ವರ್ಷಗಳಲ್ಲಿ ಅವಧಿಗೂ ಮುನ್ನ ಕೀರ್ ಸ್ಟಾರ್ಮರ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬ್ರಿಟನ್ ರಾಜಕೀಯ ನಾಟಕೀಯ ತಿರುವು ಪಡೆದುಕೊಂಡಿದೆ.

ಆಡಳಿತಾರೂಢ ಲೇಬರ್ ಪಕ್ಷದೊಳಗೆ ಸ್ಟಾರ್ಮರ್ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿತ್ತು. ಹೀಗಾಗಿ ಪಕ್ಷದ ಒಳಗಿನ ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ.

ಹೊಸ ಲೇಬರ್ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಜುಲೈನಲ್ಲಿ ಪ್ರಾರಂಭಿಸಲಾಗುವುದು ಮತ್ತು ಸೆಪ್ಟೆಂಬರ್‌ನಲ್ಲಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ಸ್ಟಾರ್ಮರ್ ತಿಳಿಸಿದ್ದಾರೆ.

"ನಾನು ತೆಗೆದುಕೊಂಡ ಪ್ರತಿಯೊಂದು ನಿರ್ಧಾರವೂ ನಾನು ಪ್ರೀತಿಸುವ ನನ್ನ ದೇಶವನ್ನು ಮೊದಲ ಸ್ಥಾನದಲ್ಲಿಟ್ಟು ಕೈಗೊಂಡ ನಿರ್ಧಾರಗಳಾಗಿದ್ದವು. ಇಂದಿನ ಬ್ರಿಟನ್ ದೇಶವು ಎರಡು ವರ್ಷಗಳ ಹಿಂದಿಗಿಂತಲೂ ಹೆಚ್ಚು ಬಲಿಷ್ಠವಾಗಿದೆ ಮತ್ತು ನ್ಯಾಯಯುತವಾಗಿದೆ. ನನ್ನ ನಂತರ ಬರುವ ಹೊಸ ಪ್ರಧಾನಿಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ ಮತ್ತು ಅಧಿಕಾರ ಹಸ್ತಾಂತರವು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುತ್ತೇನೆ ಎಂದರು.

ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸಿದದ್ದರು. ಆದರೆ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಲೇಬರ್ ಪಕ್ಷವು ಭಾರಿ ಸೋಲನ್ನು ಅನುಭವಿಸಿತ್ತು. ಪಕ್ಷದ ಸಾಂಪ್ರದಾಯಿಕ ಭದ್ರಕೋಟೆಗಳಲ್ಲೇ ಮತದಾರರು ಲೇಬರ್ ಪಕ್ಷವನ್ನು ಕೈಬಿಟ್ಟಿದ್ದರಿಂದ, ಸ್ಟಾರ್ಮರ್ ನಾಯಕತ್ವದ ಮೇಲೆ ಸಂಸದರಿಗೆ ನಂಬಿಕೆ ಕಡಿಮೆಯಾಗಿತ್ತು. ಹೀಗಾಗಿ ಕೇವಲ ಎರಡು ವರ್ಷಗಳಲ್ಲೇ ಅಧಿಕಾರದಿಂದ ಕೆಳಗಿಳಿಯುತ್ತಿದ್ದಾರೆ.

ಮುಂದಿನ ಪ್ರಧಾನಿ ಯಾರು?

ಕಳೆದ ವಾರ ನಡೆದ ಸಂಸತ್ ಉಪಚುನಾವಣೆಯಲ್ಲಿ ಗೆದ್ದ ಆಂಡಿ ಬರ್ನ್‌ಹ್ಯಾಮ್ ಅವರು ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಇದ್ದು, ಆಡಳಿತರೂಢ ಲೇಬರ್ ಪಕ್ಷದ ನಾಯಕರಾಗಿ ಸ್ಟಾರ್ಮರ್ ನಂತರ ಮುಂಚೂಣಿಯಲ್ಲಿದ್ದಾರೆ. ಅವರು ಇಂದು ಸಂಸತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಗ್ಗಿಲ್ಲದ AI ಕಂಟೆಂಟ್, ಡೀಪ್‌ಫೇಕ್‌ಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಿಗೆ ಕೇಂದ್ರದ ಹೊಸ ನಿಯಮ!

ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ದೂರವಾಣಿ ಕರೆ; ಪಶ್ಚಿಮ ಏಷ್ಯಾ ಬಿಕ್ಕಟ್ಟು, ಕಾರ್ಯತಂತ್ರದ ಸಂಬಂಧಗಳ ಬಗ್ಗೆ ಚರ್ಚೆ

ರಾಜ್ಯಸಭೆಯಲ್ಲಿ ಖರ್ಗೆ ರಣಕಹಳೆ: ಪ್ರತಿಪಕ್ಷಗಳ ಭಾವನೆಗಳನ್ನು ಅಮಿತ್ ಶಾಗೆ ತಿಳಿಸಿ – ರಿಜಿಜುಗೆ ಸಭಾಪತಿ ರಾಧಾಕೃಷ್ಣನ್ ಸೂಚನೆ

ಕ್ಯಾಲಿಫೋರ್ನಿಯಾದಲ್ಲಿ ಏಕಾಂಗಿ ಪಾದಯಾತ್ರೆ: ಪೆಟ್ರೋಲಿಯಂಗೆ ಪರ್ಯಾಯ ಶೋಧದಲ್ಲಿ ತೊಡಗಿದ್ದ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿ ನಿಗೂಢ ಸಾವು!

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್