ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

'ಪರಿಸ್ಥಿತಿ ಎದುರಾದರೆ ಇರಾನ್ ಸರ್ವನಾಶ'; ಟ್ರಂಪ್ ಕಠಿಣ ಎಚ್ಚರಿಕೆ, ಶುರುವಾಗುತ್ತಾ ಮಹಾಯುದ್ಧ...?

ಇದಕ್ಕೂ ಮುನ್ನ ಅಮೆರಿಕದ ಸೇನೆ ಶನಿವಾರ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ಸಂಗ್ರಹ ಕೇಂದ್ರಗಳು, ಕರಾವಳಿ ರಾಡಾರ್ ತಾಣಗಳು ಸೇರಿದಂತೆ ಹಲವು ಸೇನಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಮಹಾಯುದ್ಧದ ಕಾರ್ಮೋಡ ಕವಿದಿದೆ. ಹೋರ್ಮುಜ್ ಜಲಸಂಧಿಯಲ್ಲಿ ನಡೆದ ದಾಳಿಯ ಬೆನ್ನಲ್ಲೇ ಅಮೆರಿಕ ಇರಾನ್‌ನ ಸೇನಾ ಮೂಲಸೌಕರ್ಯಗಳ ಮೇಲೆ ಹೊಸದಾಗಿ ದಾಳಿ ನಡೆಸಿದ್ದು, ಪ್ರತಿಯಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಕದನ ವಿರಾಮವನ್ನು ಪಾಲಿಸದಿದ್ದರೆ ಪರಿಸ್ಥಿತಿ ಭೀಕರ ಸ್ವರೂಪ ಪಡೆದುಕೊಳ್ಳಲಿದೆ. ಅಗತ್ಯ ಬಂದರೆ ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗುವುದು" ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಈ ಕುರಿತು ಟ್ರೂತ್ ಸೋಶಿಯಲ್ (Truth Social) ಖಾತೆಯಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, "ಇರಾನ್‌ಗೆ ಕದನ ವಿರಾಮ ಒಪ್ಪಂದವನ್ನು ಗೌರವಿಸುವ ಅವಕಾಶ ನೀಡಲಾಗಿತ್ತು. ಆದರೆ, ಅದು ಆ ಅವಕಾಶವನ್ನು ಬಳಸಿಕೊಳ್ಳಲಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಾವು ಈಗಾಗಲೇ ಯಶಸ್ವಿಯಾಗಿ ಆರಂಭಿಸಿರುವ ಕಾರ್ಯಾಚರಣೆಯನ್ನು ಸೇನಾ ಬಲದ ಮೂಲಕ ಸಂಪೂರ್ಣಗೊಳಿಸಲು ಮುಂದಾಗಬೇಕಾಗಬಹುದು. ಅಂತಹ ಪರಿಸ್ಥಿತಿ ಬಂದರೆ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಅಸ್ತಿತ್ವದಲ್ಲೇ ಉಳಿಯುವುದಿಲ್ಲ" ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಅಮೆರಿಕದ ಸೇನೆ ಶನಿವಾರ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ಸಂಗ್ರಹ ಕೇಂದ್ರಗಳು, ಕರಾವಳಿ ರಾಡಾರ್ ತಾಣಗಳು ಸೇರಿದಂತೆ ಹಲವು ಸೇನಾ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಪನಾಮಾ ಧ್ವಜ ಹೊಂದಿದ್ದ ತೈಲ ಟ್ಯಾಂಕರ್ ಮೇಲೆ ಇರಾನ್ ಡ್ರೋನ್ ಮೂಲಕ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಅಮೆರಿಕ ಈ ಪ್ರತಿದಾಳಿ ನಡೆಸಿದೆ.

ಎರಡು ವಾರಗಳ ಹಿಂದೆ ಉಭಯ ರಾಷ್ಟ್ರಗಳ ನಡುವೆ ಮಾಡಿಕೊಂಡಿದ್ದ ಮಧ್ಯಂತರ ಶಾಂತಿ ಒಪ್ಪಂದದ ಬಳಿಕ ಇದೇ ಅತ್ಯಂತ ಗಂಭೀರ ಸೇನಾ ಸಂಘರ್ಷವಾಗಿದೆ.

ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, "ಇರಾನ್‌ಗೆ ಕದನ ವಿರಾಮವನ್ನು ಪಾಲಿಸುವ ಅವಕಾಶ ನೀಡಲಾಗಿತ್ತು. ಆದರೆ, ಅದು ಅದನ್ನು ಉಲ್ಲಂಘಿಸಿದೆ. ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಿರಂತರವಾಗಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ತಿಳಿಸಿದೆ.

ಅಮೆರಿಕದ ಪ್ರಕಾರ, ಇತ್ತೀಚಿನ ದಾಳಿಯಲ್ಲಿ ಇರಾನ್‌ನ ಮಿಲಿಟರಿ ನಿಗಾ ವ್ಯವಸ್ಥೆಗಳು, ಸಂವಹನ ಕೇಂದ್ರಗಳು, ವಾಯು ರಕ್ಷಣಾ ವ್ಯವಸ್ಥೆಗಳು, ಡ್ರೋನ್ ಸಂಗ್ರಹ ಕೇಂದ್ರಗಳು ಹಾಗೂ ಸಮುದ್ರದಲ್ಲಿ ಮೈನ್ ಅಳವಡಿಸುವ ತಾಣಗಳನ್ನು ಗುರಿಯಾಗಿಸಲಾಗಿದೆ.

ಇನ್ನೊಂದೆಡೆ, ಇರಾನ್‌ನ ಸರ್ಕಾರಿ ಪ್ರಸಾರ ಸಂಸ್ಥೆ ಐಆರ್‌ಐಬಿ (IRIB) ವರದಿ ಪ್ರಕಾರ, ಭಾನುವಾರ ಮುಂಜಾನೆ ದಕ್ಷಿಣ ಇರಾನ್‌ನ ಸಿರಿಕ್ ಪ್ರದೇಶದಲ್ಲಿ ಭಾರೀ ಸ್ಫೋಟಗಳ ಶಬ್ದ ಕೇಳಿಬಂದಿದೆ. ಆದರೆ, ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ.

ಕಳೆದ ಎರಡು ವಾರಗಳ ಹಿಂದೆ ನಾಲ್ಕು ತಿಂಗಳ ಕಾಲ ಮುಂದುವರಿದಿದ್ದ ಸಂಘರ್ಷಕ್ಕೆ ಅಂತ್ಯ ಹಾಡಲು ಅಮೆರಿಕ ಮತ್ತು ಇರಾನ್ ಮಧ್ಯಂತರ ಕದನ ವಿರಾಮ ಒಪ್ಪಂದಕ್ಕೆ ಬಂದಿದ್ದವು. ಆದರೆ, ಈಗ ಎರಡೂ ರಾಷ್ಟ್ರಗಳು ಪರಸ್ಪರ ಒಪ್ಪಂದ ಉಲ್ಲಂಘನೆಯ ಆರೋಪ ಮಾಡುತ್ತಿದ್ದು, ಪರಿಸ್ಥಿತಿ ಮತ್ತೊಮ್ಮೆ ಯುದ್ಧದತ್ತ ಸಾಗುವ ಆತಂಕ ಜಾಗತಿಕ ಮಟ್ಟದಲ್ಲಿ ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನಿಂದ ಅಮೆರಿಕ ಮಿತ್ರ ರಾಷ್ಟ್ರಗಳ ಮೇಲೆ ಕ್ಷಿಪಣಿ, ಡ್ರೋನ್ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

ಉಗ್ರರ ದಾಳಿ ಭೀತಿ; ದೆಹಲಿ-ಉತ್ತರಾಖಂಡದಲ್ಲಿ ಹೈ ಅಲರ್ಟ್, ದೇವಾಲಯ-ರೈಲು ನಿಲ್ದಾಣಗಳಿಗೆ ಬಿಗಿ ಭದ್ರತೆ..!

ಮಹಾಭೂಕಂಪಕ್ಕೆ ವೆನೆಜುವೆಲಾ ತತ್ತರ: ಸಾವಿನ ಸಂಖ್ಯೆ 1,430ಕ್ಕೆ ಏರಿಕೆ, 68 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ

ಲಂಡನ್‌ನಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢ ಸಾವು; Birthday ಪಾರ್ಟಿ ಬಳಿಕ ರೂಮ್‌ನಲ್ಲಿ ಶವವಾಗಿ ಪತ್ತೆ, ಕುಟುಂಬ ಕಂಗಾಲು..!

ಅಂತರ ರಾಜ್ಯ ನೀರಿನ ವಿವಾದ ಪರಿಹರಿಸಲು ನದಿಗಳ ಜೋಡಣೆ ಉತ್ತಮ ಪರಿಹಾರ: ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್!