ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನದ ಸೇನಾ ನೆಲೆಗಳ ಮೇಲೆ ಬಾಂಬ್ ದಾಳಿ ಮಾಡಿದ ಅಫ್ಘಾನಿಸ್ತಾನ!

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಚಿವಾಲಯ, ಅಫ್ಘಾನ್ ವಾಯುಪಡೆಯು ಪ್ರಮುಖ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಪರಿಣಾಮಕಾರಿ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಹೇಳಿದೆ.

ಕಾಬೂಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮಧ್ಯೆ ಹೆಚ್ಚಿದ ಗಡಿಯಾಚೆಗಿನ ಉದ್ವಿಗ್ನತೆ ನಡುವೆ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ ಸೇರಿದಂತೆ ಪಾಕಿಸ್ತಾನದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ ವಾಯುದಾಳಿ ನಡೆಸಲಾಗಿದೆ ಎಂದು ಅಪ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‌ನ ರಾಷ್ಟ್ರೀಯ ರಕ್ಷಣಾ ಸಚಿವಾಲಯ ಹೇಳಿದೆ.

ಅಫ್ಘಾನಿಸ್ತಾನದ ಪ್ರದೇಶದ ಮೇಲೆ ಪಾಕಿಸ್ತಾನದ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಈ ಬೆಳವಣಿಗೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಚಿವಾಲಯ, ಅಫ್ಘಾನ್ ವಾಯುಪಡೆಯು ಪ್ರಮುಖ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಪರಿಣಾಮಕಾರಿ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಹೇಳಿದೆ.

ವೈಮಾನಿಕ ದಾಳಿಯಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ, ಬಲೂಚಿಸ್ತಾನದ ಕ್ವೆಟ್ಟಾದಲ್ಲಿನ 12 ನೇ ಬ್ರಿಗೇಡ್ ಬೇಸ್ ಮತ್ತು ಖೈಬರ್ ಪಖ್ತುನ್‌ಖ್ವಾದಲ್ಲಿನ ಮೊಹಮಂಡ್ ಏಜೆನ್ಸಿಯ ಖೋಯ್ಜೈ ಕ್ಯಾಂಪ್ ಮತ್ತಿತರ ಮಿಲಿಟರಿ ಕಟ್ಟಡಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ದಾಳಿ: ಹಿಜ್ಬುಲ್ಲಾ ರಾಕೆಟ್ ದಾಳಿ ಬಳಿಕ ಬೈರುತ್ ಮೇಲೆ ಬಾಂಬ್ ಹಾಕಿದ ಇಸ್ರೇಲ್!

IRGC ಪ್ರಧಾನ ಕಚೇರಿ ಧ್ವಂಸ! ಹಾವಿನ ತಲೆಯನ್ನು ಕತ್ತರಿಸಿದ್ದೇವೆ: ಅಮೆರಿಕ

ThinkEdu 2026: ಚೆನ್ನೈನಲ್ಲಿಂದು ಸಮಾವೇಶ ಆರಂಭ, 'ಆತ್ಮನಿರ್ಭರ ಭಾರತದ ಕನಸಿಗೆ ಶಿಕ್ಷಣವೇ ದಿಕ್ಕು' ಕುರಿತು ಗಂಭೀರ ಚರ್ಚೆ

ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; 2 ಲಕ್ಷ ರೂ. ಆಗುತ್ತಾ 10 ಗ್ರಾಂ ಚಿನ್ನದ ರೇಟ್?

Iran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ, ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆ

SCROLL FOR NEXT